ಜೂ.18ಕ್ಕೆ ಕೆಪಿಟಿಸಿಎಲ್ ನೌಕರರ ಸಂಘದ ವಜ್ರಮಹೋತ್ಸವ;ವಜ್ರಜ್ಯೋತಿ ಸ್ಮರಣ ಸಂಚಿಕೆ ಬಿಡುಗಡೆ ಮಾಡಲಿರುವ ಸಿಎಂ

kptcl
Published on

ಬೆಂಗಳೂರು: ಕರ್ನಾಟಕ ವಿದ್ಯುತ್ ಪ್ರಸರಣ ನಿಗಮ (ಕೆಪಿಟಿಸಿಎಲ್) ನೌಕರರ ಸಂಘದ ವಜ್ರಮಹೋತ್ಸವ ಸಮಾರಂಭ ಇಂದು (ಬುಧವಾರ) ಅರಮನೆ ಮೈದಾನದ ತ್ರಿಪುರ ವಾಸಿನಿಯಲ್ಲಿ ನಡೆಯಲಿದೆ. ಸಮಾರಂಭದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ವಜ್ರಜ್ಯೋತಿ ಸ್ಮರಣ ಸಂಚಿಕೆ ಬಿಡುಗಡೆ ಮಾಡಲಿದ್ದಾರೆ ಎಂದು ಸಂಘದ ಅಧ್ಯಕ್ಷ ಕೆ.ಬಲರಾಮ್ ತಿಳಿಸಿದ್ದಾರೆ.

ಇದೇ ಮೊದಲ ಬಾರಿಗೆ ಎಸ್.ಎಸ್.ಎಲ್.ಸಿ ಮತ್ತು ಪಿಯುಸಿಯಲ್ಲಿ ಶೇ.90ಕ್ಕಿಂತ ಹೆಚ್ಚು ಅಂಕ ಗಳಿಸಿದ ಸಂಘದ ಸದಸ್ಯರ ಮಕ್ಕಳಿಗೆ ಪ್ರತಿಭಾ ಪುರಸ್ಕಾರ ನೀಡಲಾಗುವುದು ಎಂದರು.

ಸಮಾವೇಳದಲ್ಲಿ ನೌಕರರಿಗೆ ಹಳೇ ಪಿಂಚಣಿ ಯೋಜನೆಯನ್ನು ಜಾರಿಗೊಳಿಸುವುದು, ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡುವುದು, ನೌಕರರಿಗೆ ಉಚಿತ ವೈದ್ಯಕೀಯ ಸೌಲಭ್ಯ ಒದಗಿಸಿವುದು, ನಿಗಮವನ್ನು ಇತರೆ ರಾಜ್ಯಗಳಂತೆ ಖಾಸಗೀಕರಣಗೊಳಿಸದಂತೆ ಸರ್ಕಾರಕ್ಕೆ ಒತ್ತಾಯಮಾಡಲಿದ್ದಾರೆ.

1998ರಿಂದ ಕೆಲಸ ನಿರ್ವಹಿಸುತ್ತಿರುವ ಸ್ವಚ್ಛತಾ ಕಾರ್ಮಿಕರನ್ನು ಖಾಯಂಗೊಳಿಸಬೇಕು. ನಿಗಮದ ‘ಸಿ’ ಮತ್ತು ‘ಡಿ’ ದರ್ಜೆ ನೌಕರರ ನೇಮಕಾತಿ, ಬಡ್ತಿ. ಮತ್ತು ವರ್ಗಾವಣೆ ಅಧಿಕಾರವನ್ನು ಈ ಹಿಂದಿನಂತೆ ಪ್ರಾಧಿಕಾರಗಳೇ ನಿರ್ವಹಿಸುವುದು ಸೇರಿದಂತೆ ವಿವಿಧ ಬೇಡಿಕೆಗಳನ್ನು ಸಂಘವು ಸರ್ಕಾರಕ್ಕೆ ಸಲ್ಲಿಸಲಿದೆ.

ಸುದ್ದಿಗೋಷ್ಠಿಯಲ್ಲಿ ಪ್ರಧಾನ ಕಾರ್ಯದರ್ಶಿ ಶಿವರಾಂ, ಕಾರ್ಯಾಧ್ಯಕ್ಷರಾದ ಜೆ. ಮಂಜುನಾಥ್, ಡಾಕ್ಯಾನಾಯಕ್, ಹಿರಿಯ ಉಪಾಧ್ಯಕ್ಷ ಹೆಚ್.ಆರ್.ಅಶ್ವಥಪ್ಪ, ಜಂಟಿ ಕಾರ್ಯದರ್ಶಿ ಕೆ.ಪಿ. ಸೋಮಶೇಖರ್, ಖಜಾಂಚಿಗಳಾದ ಶ.ಸಿ. ವರದರಾಜು ಮತ್ತು ಸಹ ಖಜಾಂಚಿಗಳಾದ ಜಿ.ಯು. ಅವೀನ್ ಉಪಸ್ಥಿತರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net