More

    ಆರೋಗ್ಯ ಸೇವೆಯಲ್ಲಿ ಕೆ.ಆರ್.ಆಸ್ಪತ್ರೆಗೆ 2ನೇ ಸ್ಥಾನ

    ಮೈಸೂರು: ‘ಆಯುಷ್ಮಾನ್ ಭಾರತ್-ಆರೋಗ್ಯ ಕರ್ನಾಟಕ’ ಯೋಜನೆಯಡಿ ಉಚಿತ ಆರೋಗ್ಯ ಸೇವೆ ಕಾರ್ಡ್ ಪಡೆದ ಬಡವರಿಗೆ ಡಿಸೆಂಬರ್ ತಿಂಗಳಿನಲ್ಲಿ ಸೇವೆ ಒದಗಿಸುವಲ್ಲಿ ನಗರದ ಕೆ.ಆರ್.ಆಸ್ಪತ್ರೆ ರಾಜ್ಯದಲ್ಲಿ ಎರಡನೇ ಸ್ಥಾನ ಗಳಿಸಿದೆ.
    ಬೆಂಗಳೂರಿನ ಕಿದ್ವಾಯಿ ಸ್ಮಾರಕ ಗ್ರಂಥಿ ಸಂಸ್ಥೆ 1,304 ರೋಗಿಗಳಿಗೆ ಚಿಕಿತ್ಸೆ ನೀಡಿ ಪ್ರಥಮ ಸ್ಥಾನದಲ್ಲಿದ್ದರೆ, ಮೈಸೂರು ಸುತ್ತಮುತ್ತಲಿನ ಜಿಲ್ಲೆಗಳಿಗೆ ‘ದೊಡ್ಡಾಸ್ಪತ್ರೆ’ ಎಂದೇ ಖ್ಯಾತವಾಗಿರುವ ಕೆ.ಆರ್.ಆಸ್ಪತ್ರೆ 1,281 ರೋಗಿಗಳಿಗೆ ಚಿಕಿತ್ಸೆ ನೀಡುವ ಮೂಲಕ ಎರಡನೇ ಸ್ಥಾನ ಪಡೆದಿದೆ.
    ಬಡ ಹಾಗೂ ಮಧ್ಯಮ ವರ್ಗದ ಜನರಿಗೆ ಕಡಿಮೆ ದರದಲ್ಲಿ ಗುಣಮಟ್ಟದ ಆರೋಗ್ಯ ಸೇವೆ ನೀಡಿದ ಹೆಗ್ಗಳಿಕೆಗೆ ಪಾತ್ರವಾಗಿದೆ. ಮಹಿಳಾ ಮತ್ತು ಮಕ್ಕಳ ಆಸ್ಪತ್ರೆಯಾಗಿರುವ ಚೆಲುವಾಂಬ ಆಸ್ಪತ್ರೆ 294 ರೋಗಿಗಳಿಗೆ ಚಿಕಿತ್ಸೆ ನೀಡಿ 15ನೇ ಸ್ಥಾನದಲ್ಲಿದೆ. ಹಾಸನ ಜಿಲ್ಲೆಯ ಶ್ರೀ ಚಾಮರಾಜೇಂದ್ರ ಆಸ್ಪತ್ರೆ 1,222 ರೋಗಿಗೆ ಚಿಕಿತ್ಸೆ ನೀಡಿ ಮೂರನೇ ಸ್ಥಾನದಲ್ಲಿದೆ.
    ‘ಆಯುಷ್ಮಾನ್ ಭಾರತ್-ಆರೋಗ್ಯ ಕರ್ನಾಟಕ’ ಯೋಜನೆಯಡಿ ಚಿಕಿತ್ಸೆ ಪಡೆಯಲು ಸರ್ಕಾರದ ಕೆಲ ಮಾನದಂಡಗಳಿದ್ದು, ಅದನ್ನು ರೋಗಿಗಳು ಅನುಸರಿಸಿದರೆ ಉತ್ತಮ ಚಿಕಿತ್ಸೆ ಪಡೆಯಬಹುದು. ಒಂದು ವೇಳೆ ಸದರಿ ಯೋಜನೆ ಕಾರ್ಡ್ ಇಲ್ಲದಿದ್ದರೂ ಬಿಪಿಎಲ್ ಕಾರ್ಡ್‌ಗೆ ಆಧಾರ್ ಕಾರ್ಡ್ ಲಿಂಕ್ ಮಾಡಿದ್ದರೂ ಚಿಕಿತ್ಸೆ ನೀಡುತ್ತಿದ್ದೇವೆ’ ಎಂದು ಕೆ.ಆರ್.ಆಸ್ಪತ್ರೆಯ ಆರ್‌ಎಂಒ ಡಾ.ರಾಜೇಶ್ ತಿಳಿಸಿದ್ದಾರೆ.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts