More

    ಕೆ.ಆರ್.ನಗರ ಶೇ.80 ಮತದಾನ

    ಕೆ.ಆರ್.ನಗರ: ಮಂಡ್ಯ ಲೋಕಸಭಾ ಕ್ಷೇತ್ರದ ಸಂಸದ ಸ್ಥಾನಕ್ಕೆ ನಡೆದ ಚುನಾವಣೆಯಲ್ಲಿ ಕೆ.ಆರ್.ನಗರ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ ಶೇ.80 ಮತದಾನ ನಡೆದಿದೆ.


    ಬೆಳಗ್ಗೆ 7 ಗಂಟೆಯಿಂದ ಬಿರುಸಿನಿಂದ ಪ್ರಾರಂಭವಾದ ಮತದಾನ ಸಂಜೆವರೆಗೂ ಉತ್ಸಾಹದಿಂದ ಸಾಗಿತು. ಶಾಸಕ ಡಿ.ರವಿಶಂಕರ್ ಕೆಸ್ತೂರು ಕೊಪ್ಪಲು ಗ್ರಾಮದ ಮತಗಟ್ಟೆಯಲ್ಲಿ, ಮಾಜಿ ಸಚಿವ ಸಾ.ರಾ.ಮಹೇಶ್ ದಂಪತಿ ಸಾಲಿಗ್ರಾಮ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಮತಗಟ್ಟೆಯಲ್ಲಿ ಮತಚಲಾಯಿಸಿದರು. ಭೇರ್ಯ, ಬೀಚನಹಳ್ಳಿಕೊಪ್ಪಲು, ತಿಪ್ಪೂರು, ಹೆಬ್ಬಾಳು, ಮಾರಗೌಡನಹಳ್ಳಿ ಮತಗಟ್ಟೆಯಲ್ಲಿ ತಾಂತ್ರಿಕ ತೊಂದರೆ ಉಂಟಾದ ಹಿನ್ನೆಲೆಯಲ್ಲಿ ಮತಯಂತ್ರಗಳನ್ನು ಬದಲಾಯಿಸಿ ಯಾವುದೇ ತೊಂದರೆಯಾಗದಂತೆ ನಿರಾತಂಕವಾಗಿ ಮತ ಚಲಾವಣೆಯಾಗುವಂತೆ ಕ್ರಮ ಕೈಗೊಳ್ಳಲಾಯಿತು. ಶಾಸಕ ಡಿ.ರವಿಶಂಕರ್ ಮತ್ತು ಮಾಜಿ ಸಚಿವ ಸಾ.ರಾ.ಮಹೇಶ್ ವಿವಿಧ ಗ್ರಾಮಗಳ ಮತಗಟ್ಟೆಗಳಿಗೆ ತೆರಳಿ ತಮ್ಮ ಪಕ್ಷದ ಮುಖಂಡರು ಮತ್ತು ಕಾರ್ಯಕರ್ತರನ್ನು ಭೇಟಿ ಮಾಡಿ ಮಾಹಿತಿ ಪಡೆದರು.


    ಸಂಜೆ 4 ಗಂಟೆಯ ನಂತರ ಮತದಾನ ಪ್ರಮಾಣ ಹೆಚ್ಚಾಗಿತ್ತು. ಸಂಜೆ 6 ಗಂಟೆಯೊಳಗೆ ಮತ ಕೇಂದ್ರದ ಒಳಗೆ ಆಗಮಿಸಿದ ಮತದಾರರಿಗೆ ಹಕ್ಕು ಚಲಾಯಿಸಲು ಮತಗಟ್ಟೆ ಸಿಬ್ಬಂದಿ ಅನುಕೂಲ ಮಾಡಿಕೊಟ್ಟರು.


    ವ್ಯಕ್ತಿ ಸಾವು: ಮತದಾನ ಮಾಡಿದ ನಂತರ ವ್ಯಕ್ತಿಯೊಬ್ಬರು ತೊರೆಗೆ ಬಿದ್ದು ಸಾಲಿಗ್ರಾಮ ತಾಲೂಕಿನ ಕುಪ್ಪೆ ಗ್ರಾಮದಲ್ಲಿ ಮೃತಪಟ್ಟಿದ್ದಾರೆ. ಗ್ರಾಮದ ನಾಗರಾಜು(55) ಬೆಳಗ್ಗೆ 9 ಗಂಟೆಗೆ ಸರ್ಕಾರಿ ಕಿರಿಯ ಪ್ರಾಥಮಿಕ ಪಾಠ ಶಾಲೆಯ ಮತಗಟ್ಟೆಯಲ್ಲಿ ಹಕ್ಕು ಚಲಾಯಿಸಿ ಆನಂತರ ಹೊಸೂರು ಗ್ರಾಮಕ್ಕೆ ತೆರಳುತ್ತಿದ್ದ ಸಂದರ್ಭದಲ್ಲಿ ತೊರೆಯ ಬಳಿ ಇರುವ ಕಿರು ಸೇತುವೆಯ ಮೇಲೆ ಕುಳಿತಿದ್ದಾಗ ಆಯತಪ್ಪಿ ಬಿದ್ದು ಮೃತಪಟ್ಟಿದ್ದಾರೆ.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts