21 C
Bengaluru
Thursday, January 23, 2020

ಕ್ಷೇತ್ರಾದ್ಯಂತ ಶಾಂತಿಯುತ ಮತದಾನ

Latest News

ಮೊಕದ್ದಮೆ ಹಿಂಪಡೆಯಲು ಒತ್ತಾಯ

ಮೈಸೂರು: ಮಾನಸಗಂಗೋತ್ರಿಯಲ್ಲಿ ಎನ್‌ಆರ್‌ಸಿ, ಸಿಎಎ ವಿರೋಧಿಸಿ ನಡೆದ ಪ್ರತಿಭಟನೆ ಸಂದರ್ಭ ‘ಫ್ರೀ ಕಾಶ್ಮೀರ’ ಫಲಕ ಪ್ರದರ್ಶನಕ್ಕೆ ಸಂಬಂಧಿಸಿದಂತೆ ವಿದ್ಯಾರ್ಥಿಗಳ ಮೇಲೆ ಹೂಡಿರುವ ಮೊಕದ್ದಮೆ...

ವಿದ್ಯಾಭ್ಯಾಸದ ಸಂದರ್ಭ ಪ್ರತಿಭಟನೆ ಬೇಡ

ಮೈಸೂರು: ಶಿಕ್ಷಣಕ್ಕೆ ಸಂಬಂಧಿಸಿದ ಸಮಸ್ಯೆಗಳಿದ್ದಲ್ಲಿ ವಿಶ್ವವಿದ್ಯಾಲಯಗಳ ಒಳಗೆ ಬಗೆಹರಿಸಿಕೊಳ್ಳಬೇಕೇ ಹೊರತು, ವಿದ್ಯಾಭ್ಯಾಸದ ಸಂದರ್ಭದಲ್ಲಿ ಪ್ರತಿಭಟನೆಗಳಿಗೆ ಮುಂದಾಗಬಾರದು ಎಂದು ಲೋಕಾಯುಕ್ತ ನಿವೃತ್ತ ನ್ಯಾಯಮೂರ್ತಿ ಸಂತೋಷ್...

ಮಹಿಳೆಯರಿಗೆ ಶೇ.50ರಷ್ಟು ಮೀಸಲಾತಿ ಜಾರಿಗೊಳಿಸಿ

ಮೈಸೂರು: ವಿಧಾನಸಭೆ, ಲೋಕಸಭೆಯಲ್ಲಿ ಮಹಿಳೆಯರಿಗೆ ಶೇ. 50ರಷ್ಟು ಮೀಸಲಾತಿ ಜಾರಿಗೊಳಿಸಬೇಕು ಎಂದು ವಿಧಾನಸಭೆ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಒತ್ತಾಯಿಸಿದರು. ಕರ್ನಾಟಕ ಪ್ರದೇಶ ಮಹಿಳಾ...

ಕೇಂದ್ರದ ಬಿಜೆಪಿ ಸರ್ಕಾರ ಬಿದ್ದ ದಿನ ಪೌರತ್ವ ತಿದ್ದುಪಡಿ ಕಾಯ್ದೆಯೂ ರದ್ದಾಗುತ್ತದೆ: ನಿವೃತ್ತ ಐಎಎಸ್​ ಅಧಿಕಾರಿ ಕಣ್ಣನ್​ ಗೋಪಿನಾಥನ್​

ಧಾರವಾಡ: ಪೌರತ್ವ ತಿದ್ದುಪಡಿ ಕಾಯ್ದೆ ಇಡೀ ರಾಷ್ಟ್ರಕ್ಕೆ ಸಂಬಂಧಿಸಿದ ಹಿನ್ನೆಲೆಯಲ್ಲಿ ಎಲ್ಲ ರಾಜ್ಯಗಳಲ್ಲೂ ಹೋರಾಟ ತೀವ್ರಗೊಂಡಿದೆ ಎಂದು ನಿವೃತ್ತ ಐಎಎಸ್​ ಅಧಿಕಾರಿ ಕಣ್ಣನ್​...

ಕಾಲೇಜ್ ವಿದ್ಯಾರ್ಥಿಗಳ ಮೇಲೆ ಹೆಜ್ಜೇನು ದಾಳಿ

ಹಾವೇರಿ: ಇಲ್ಲಿನ ಪಿಬಿ ರಸ್ತೆಯಲ್ಲಿರುವ ಜಿಎಚ್ ಕಾಲೇಜ್​ನಲ್ಲಿ ಹೆಜ್ಜೇನು ದಾಳಿಯಿಂದ 30ಕ್ಕೂ ಹೆಚ್ಚು ವಿದ್ಯಾರ್ಥಿಗಳು ಗಾಯಗೊಂಡಿರುವ ಘಟನೆ ಬುಧವಾರ ಮಧ್ಯಾಹ್ನ ಸಂಭವಿಸಿದೆ.

ಕೆ.ಆರ್.ಪೇಟೆ: ಕೆ.ಆರ್.ಪೇಟೆ ಉಪ ಚುನಾವಣೆ ಹಿನ್ನೆಲೆ ಗುರುವಾರ ಶಾಂತಿಯುತವಾಗಿ ಮತದಾನ ನಡೆಯಿತು. ಒಂದೆರಡು ಕಡೆ ಮತಯಂತ್ರಗಳು ಕೈಕೊಟ್ಟಿದ್ದು ಬಿಟ್ಟರೆ, ಕ್ಷೇತ್ರದೆಲ್ಲೆಡೆ ಜನತೆ ತಮ್ಮ ಹಕ್ಕು ಚಲಾಯಿಸಿದರು.

ಬೆಳಗ್ಗೆ 7 ಗಂಟೆಗೆ ಮತದಾನ ಆರಂಭವಾಗುತ್ತಿದ್ದಂತೆ ಬಹುತೇಕ ಮತಗಟ್ಟೆಗಳ ಬಳಿ ಮತದಾರರು ಉತ್ಸಾಹದಿಂದ ನಿಂತು ಮತದಾನ ಮಾಡಿದರು. ಮೂರು ಪಕ್ಷಗಳ ಕಾರ್ಯಕತರ್ರು ಮತಗಟ್ಟೆಗಳ ಬಳಿ ನಿಂತು ಮತದಾರರನ್ನು ತಮ್ಮ ಪಕ್ಷಕ್ಕೆ ಮತ ಹಾಕುವಂತೆ ಕೋರುತ್ತಿದ್ದರು. ಪ್ರಚಾರ ಸಾಮಗ್ರಿ ಬಳಸಲು ಅವಕಾಶವಿಲ್ಲದ ಕಾರಣ ಪಕ್ಷದ ಹೆಸರು, ಚಿಹ್ನೆಗಳ ಕುರಿತು ಮತದಾರರಿಗೆ ಸೂಚನೆ ನೀಡುತ್ತಿದ್ದರು.

ಹಲವರು ತಮ್ಮ ಬಂಧುಗಳು, ಸಂಬಂಕರು, ವೃದ್ಧರು ಮೊದಲಾದವರನ್ನು ಕಾರ್ಯಕರ್ತರು ತಮ್ಮ ಬೈಕ್‌ಗಳಲ್ಲಿ ಕರೆತಂದು ಮತದಾನ ಮಾಡಿಸಿ ನಂತರ ವಾಪಸ್ ಮನೆಗೆ ಬಿಡುತ್ತಿದ್ದ ದೃಶ್ಯಗಳು ಸಾಮಾನ್ಯವಾಗಿದ್ದವು. ಮತಗಟ್ಟೆಗಳ ಸಮೀಪದಲ್ಲಿ ಮತದಾರರಿಗೆ ತಂಪು ಪಾನಿಯ, ಕಾಫಿ ಟೀ ವ್ಯವಸ್ಥೆ ಕೂಡ ಜೋರಾಗಿ ನಡೆದಿತ್ತು.

ಪಟ್ಟಣದ ಸಖಿ ಮತಕೇಂದ್ರ ಮತದಾರರ ಗಮನ ಸೆಳೆಯಿತು. ಪಿಂಕ್ ಮತಕೇಂದ್ರದಲ್ಲಿ ಕರ್ತವ್ಯ ನಿರ್ವಹಿಸಿದ ಚುನಾವಣಾ ಸಿಬ್ಬಂದಿ ಪಿಂಕ್ ವಸ ಧರಿಸಿ ಕೆಲಸ ನಿರ್ವಹಿಸಿದರು.

ಕೈಕೊಟ್ಟ ಮತಯಂತ್ರ: ಕ್ಷೇತ್ರದ ಬಂಡಿಹೊಳೆಯಲ್ಲಿ ಬೆಳಗ್ಗೆ ಮತಯಂತ್ರ ಕೈ ಕೊಟ್ಟಿದ್ದರಿಂದ ಸುಮಾರು ಅರ್ಧ ಗಂಟೆಗೂ ಹೆಚ್ಚು ಕಾಲ ಮತದಾನ ಆರಂಭವಾಗಲಿಲ್ಲ. ತಾಂತ್ರಿಕ ಸಿಬ್ಬಂದಿ ಸ್ಥಳಕ್ಕೆ ತೆರಳಿ ಮತಯಂತ್ರ ದುರಸ್ತಿ ಮಾಡಿದ ನಂತರ ಮತದಾನ ಮುಂದುವರಿಯಿತು.
ಸಂಜೆ 3.30ರಲ್ಲಿ ತಾಲೂಕಿನ ಹೆಗ್ಗಡಹಳ್ಳಿಯಲ್ಲಿ ಮತಯಂತ್ರ ಕೈಕೊಟ್ಟಿತು. ಆ ವೇಳೆಗೆ ಸುಮಾರು 688 ಮತಗಳು ಚಲಾವಣೆಯಾಗಿದ್ದವು. ಮತಯಂತ್ರ ಕೈಕೊಟ್ಟಿದ್ದರಿಂದ ಮತದಾರರು ಕಾದು ಕುಳಿತಿದ್ದರು. 30 ನಿಮಿಷಗಳ ನಂತರ ಸಮಸ್ಯೆ ಸರಿಪಡಿಸಲಾಯಿತು. ನಂತರ ಮತದಾನ ಮುಂದುವರಿಯಿತು.

ಅಭ್ಯರ್ಥಿಗಳಿಂದ ಮತದಾನ:
ಕಾಂಗ್ರೆಸ್ ಅಭ್ಯರ್ಥಿ ಕೆ.ಬಿ.ಚಂದ್ರಶೇಖರ್ ಪಟ್ಟಣದ ಕರ್ನಾಟಕ ಪಬ್ಲಿಕ್ ಶಾಲೆಯಲ್ಲಿನ 134ನೇ ಮತಗಟ್ಟೆಗೆ ಪತ್ನಿ ರಮಾಮಣಿ ಜತೆ ಆಗಮಿಸಿ ತಮ್ಮ ಹಕ್ಕು ಚಲಾಯಿಸಿದರು.
ಇವರು ಹಕ್ಕು ಚಲಾಯಿಸಿ ಕಾರಿನಲ್ಲಿ ಹೊರಟ ಬೆನ್ನಲ್ಲೇ ಬಿಜೆಪಿ ಅಭ್ಯರ್ಥಿ ಕೆ.ಸಿ.ನಾರಾಯಣಗೌಡ ಪತ್ನಿ ದೇವಕಿ, ಪುತ್ರಿ ಲೀನಾರೊಂದಿಗೆ ಆಗಮಿಸಿ ಚಪ್ಪಲಿ ಬಿಟ್ಟು ಮತಯಂತ್ರಕ್ಕೆ ಮೂರು ಬಾರಿ ನಮಸ್ಕರಿಸಿದ ನಂತರ ಮತದಾನ ಮಾಡಿದರು.

ಮತಗಟ್ಟೆಯಿಂದಲೇ ಕೈ ಮುಗಿಯುತ್ತ ಹೊರಗೆ ಬಂದು ವಿಜಯದ ಸಂಕೇತ ಪ್ರದರ್ಶಿಸಿದರು.
ಜೆಡಿಎಸ್ ಅಭ್ಯರ್ಥಿ ಬಿ.ಎಲ್.ದೇವರಾಜು ಸ್ವಗ್ರಾಮ ಬಂಡಿಹೊಳೆ ಗ್ರಾಮದ ಸರ್ಕಾರಿ ಪ್ರಾಥಮಿಕ ಶಾಲೆಯ 151ನೇ ಮತಗಟ್ಟೆಯಲ್ಲಿ ಪತ್ನಿ ಸರ್ವಮಂಗಳಾ ಹಾಗೂ ಮಕ್ಕಳೊಂದಿಗೆ ತಮ್ಮ ಹಕ್ಕು ಚಲಾಯಿಸಿದರು.

ನಾರಾಯಣಗೌಡರಿಂದ ಗಣಪತಿ ಹೋಮ: ಸಿಎಂ ಯಡಿಯೂರಪ್ಪ ಅವರ ತವರಿನಲ್ಲಿ ಕಮಲ ಅರಳಿಸಲೇಬೇಕೆಂದು ಪಣ ತೊಟ್ಟಿರುವ ಬಿಜೆಪಿ ಅಭ್ಯರ್ಥಿ ನಾರಾಯಣಗೌಡ ಬುಧವಾರ ರಾತ್ರಿ ತಮ್ಮ ಪಟ್ಟಣದ ಮನೆಯಲ್ಲಿ ಗಣಪತಿ ಹೋಮ ಏರ್ಪಡಿಸಿದ್ದರು. ಬೆಳಗ್ಗೆ ಪಟ್ಟಣದ ಶ್ರೀ ಸಿದ್ಧಿ ವಿನಾಯಕ ದೇವಸ್ಥಾನ ಮತ್ತು ಕಾರ್ಯಸಿದ್ಧಿ ಆಂಜನೇಯಸ್ವಾಮಿ ದೇವಸ್ಥಾನಕ್ಕೆ ಪತ್ನಿ ದೇವಕಿ, ಪುತ್ರಿ ಲೀನಾ ಜತೆ ತೆರಳಿ ಪೂಜೆ ಸಲ್ಲಿಸಿ ಪ್ರಾರ್ಥಿಸಿದರು.

ಬಳಿಕ ಮಾಧ್ಯಮದವರ ಜತೆ ಮಾತನಾಡಿದ ಅವರು, ತಮ್ಮ ಗೆಲುವು ನಿಶ್ಚಿತ. ಕನಿಷ್ಠ 20 ಸಾವಿರ ಮತಗಳ ಅಂತರದಿಂದ ಗೆಲುವು ಸಾಸುತ್ತೇನೆ. ಕೆ.ಆರ್.ಪೇಟೆಯಲ್ಲಿ ಬಿಜೆಪಿ ಗೆಲ್ಲಿಸುವ ಮೂಲಕ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರಿಗೆ ತವರಿನ ಕಾಣಿಕೆಯನ್ನು ಮತದಾರರು ನೀಡಲಿದ್ದಾರೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.

ವಾಸ್ತು ಮೊರೆ ಹೋದ ಅಭ್ಯರ್ಥಿ:
ಸ್ವಗ್ರಾಮದ ಬಂಡಿಹೊಳೆ ಮತಕೇಂದ್ರದ ಮತಯಂತ್ರ ಕೈಕೊಟ್ಟ ಹಿನ್ನೆಲೆಯಲ್ಲಿ ಜೆಡಿಎಸ್ ಅಭ್ಯರ್ಥಿ ಬಿ.ಎಲ್.ದೇವರಾಜು ಮತದಾನ ಮಾಡಲು ಕಾದು ಕುಳಿತರು.
ದೇವರಾಜು ಅವರೊಂದಿಗೆ ಕುಟುಂಬ ಮತ್ತು ಗ್ರಾಮಸ್ಥರೂ ಸರತಿ ಸಾಲಿನಲ್ಲಿ ನಿಂತು ಮತದಾನ ಮಾಡಲು ಕಾದು ನಿಲ್ಲಬೇಕಾಯಿತು. ಮತಯಂತ್ರ ದುರಸ್ತಿಗಾಗಿ ಅಕಾರಿಗಳು ಪರದಾಡುವಂತಾಗಿತ್ತು.
ತಜ್ಞರು ಸ್ಥಳಕ್ಕೆ ಆಗಮಿಸಿ ಮತಯಂತ್ರ ಬದಲಿಸಿದ ನಂತರ ಮತದಾನ ಪ್ರಕ್ರಿಯೆ ಆರಂಭವಾಯಿತು. ಮತದಾನ ಮಾಡಲು ಮುಂದಾದ ಜೆಡಿಎಸ್ ಅಭ್ಯರ್ಥಿ ದೇವರಾಜು ಅವರು ಮಾಜಿ ಸಚಿವ ಎಚ್.ಡಿ. ರೇವಣ್ಣ ಅವರಂತೆ ವಾಸ್ತು ಪ್ರಕಾರ ಮತಯಂತ್ರ ಇಟ್ಟಿಲ್ಲ ಎಂಬ ಕಾರಣಕ್ಕೆ ಸಿಬ್ಬಂದಿ ಕರೆದು ತಿರುಗಿಸುವಂತೆ ಸೂಚಿಸಿದರು. ಅವರ ಕೋರಿಕೆ ಮೇರೆಗೆ ಚುನಾವಣಾ ಸಿಬ್ಬಂದಿ ಮತಯಂತ್ರವನ್ನು ವಾಸ್ತು ಪ್ರಕಾರ ಇಟ್ಟ ಬಳಿಕ ಮತದಾನ ಮಾಡಿದರು.

ವಿಡಿಯೋ ನ್ಯೂಸ್

VIDEO: ಮಾವುತನ ಊಟದ ಎಲೆಯಿಂದ ತುತ್ತು ಅನ್ನ ತಿಂದು, ನೆಟ್ಟಿಗರ...

ತಿರುವನಂತಪುರ: ಆನೆಗಳ ಆಟ, ದಾಳಿ, ಮರ ಹತ್ತುವುದು ಹೀಗೆ ಹಲವು ವಿಡಿಯೋಗಳು ಈಗಾಗಲೇ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್​ ಆಗಿವೆ. ಆದರೆ ಈಗ ವೈರಲ್​ ಆಗಿರುವ ಆನೆಯ ವಿಡಿಯೋ ಸಾಮಾಜಿಕ ಬಳಕೆದಾರರ ಮನಸ್ಸು ಗೆದ್ದಿದೆ. ಹಸಿದ...

VIDEO| ರಾಷ್ಟ್ರಪತಿ ರಾಮನಾಥ್​ ಕೋವಿಂದ್​ರಿಂದ ಪ್ರಧಾನಮಂತ್ರಿ ರಾಷ್ಟ್ರೀಯ ಬಾಲ ಪುರಸ್ಕಾರ...

ನವದೆಹಲಿ: ದೆಹಲಿಯ ರಾಷ್ಟ್ರಪತಿ ಭವನದಲ್ಲಿ ಇಂದು ನಡೆದ ಕಾರ್ಯಕ್ರಮದಲ್ಲಿ ರಾಷ್ಟ್ರಪತಿ ರಾಮನಾಥ್​ ಕೋವಿಂದ್​ ಅವರು ಪ್ರಧಾನಮಂತ್ರಿ ರಾಷ್ಟ್ರೀಯ ಬಾಲ ಪುರಸ್ಕಾರ ಪ್ರಶಸ್ತಿ ಪ್ರದಾನ ಮಾಡಿದರು. ವಿವಿಧ ಕ್ಷೇತ್ರಗಳಲ್ಲಿ ಅದ್ವಿತೀಯ ಸಾಧನೆ ಮಾಡಿದ...

VIDEO| ಬೇಲಿಯೇ ಎದ್ದು ಹೊಲ ಮೇಯ್ದಂತೆ ಎಂಬ ಗಾದೆ ಮಾತಿಗೆ...

ಲಖನೌ: ಬೇಲಿಯೇ ಎದ್ದು ಹೊಲ ಮೇಯ್ದಂತೆ ಎಂಬ ಗಾದೆ ಮಾತಿಗೆ ಪೂರಕವಾದ ಘಟನೆ ಇದಾಗಿದೆ. ಉತ್ತರ ಪ್ರದೇಶದ ನೋಯ್ಡಾದಲ್ಲಿ ನಡೆದ ಘಟನೆ ಸಿಸಿಟಿವಿಯಲ್ಲಿ ಸೆರೆಯಾಗಿದೆ. ನೋಯ್ಡಾದಲ್ಲಿ ಅಂಗಡಿ ಹೊರಭಾಗದಲ್ಲಿ ಇಟ್ಟಿದ್ದ ಬಾಕ್ಸ್​ನಿಂದ...

VIDEO| ನಟಿಯಾಗಿರೋ ಆಲಿಯಾ ಇದೀಗ ಶೆಫ್​: ಬಾಲಿವುಡ್​ ಬ್ಯೂಟಿಯ ಅಡುಗೆ...

ಮುಂಬೈ: ಬಾಲಿವುಡ್​ ಬ್ಯೂಟಿ ಆಲಿಯಾ ಭಟ್ ನಟನೆ ಜತೆಗೆ ಹೊಸ ಸಾಹಸಕ್ಕೆ ಕೈಹಾಕಿದ್ದಾರೆ. ನಟಿಯಾಗಿರುವ ಆಲಿಯಾ ಇದೀಗ ಶೆಫ್ ಆಗಿದ್ದು, ಹೊಸ ಬಗೆಯ ಅಡುಗೆ ಪರಿಚಯಿಸಲು ಮುಂದಾಗಿದ್ದಾರೆ. ಯೂಟ್ಯೂಬ್​ನಲ್ಲಿ ಆಲಿಯಾ ಭಟ್...

VIDEO| ಅತಿವೇಗದ ಎಸೆತ, ಮಥೀಶಾ ಪಥಿರಣ ವಿಶ್ವದಾಖಲೆ!

ಬ್ಲೂಮ್​ಫಾಂಟೆನ್: ಶ್ರೀಲಂಕಾ ವಿರುದ್ಧ ಭಾನುವಾರ ನಡೆದ 19 ವಯೋಮಿತಿ ಏಕದಿನ ವಿಶ್ವಕಪ್ ಟೂರ್ನಿಯ ಮುಖಾಮುಖಿಯಲ್ಲಿ ಭಾರತ ತಂಡ 90 ರನ್​ಗಳಿಂದ ಗೆಲುವು ಸಾಧಿಸಿತು. ಆದರೆ, ಲಂಕಾ ಕಡೆಯಿಂದಲೂ ಸ್ಮರಣೀಯ ದಾಖಲೆಯೊಂದು...

VIDEO| ತಮಿಳಿನ ಕೌನ್​ ಬನೇಗಾ ಕರೋಡ್​ಪತಿ ಶೋನಲ್ಲಿ 1 ಕೋಟಿ...

ಚೆನ್ನೈ: ತಮಿಳು ಆವೃತ್ತಿಯ ಕೌನ್​ ಬನೇಗಾ ಕರೋಡ್​ಪತಿ(ಕೊಡೀಶ್ವರಿ) ರಿಯಾಲಿಟಿ ಶೋನಲ್ಲಿ ವಿಕಲಾಂಗ ಮಹಿಳೆಯೊಬ್ಬಳು ಬರೋಬ್ಬರಿ 1 ಕೋಟಿ ರೂ. ಬಹುಮಾನ ಮೊತ್ತವನ್ನು ಗೆದ್ದು ಎಲ್ಲರ ಗಮನ ಸೆಳೆದಿದ್ದಾಳೆ.ಮದುರೈ ನಿವಾಸಿಯಾಗಿರುವ ಕೌಶಲ್ಯ...