25.9 C
Bengaluru
Wednesday, January 22, 2020

ಕೆ.ಆರ್.ಪೇಟೆ, ಹುಣಸೂರಲ್ಲಿ ಕೈ-ಕಮಲ ಒಳಒಪ್ಪಂದ

Latest News

ಆರೋಪಿ ಆದಿತ್ಯರಾವ್​ನನ್ನು ಮಾನಸಿಕ ಅಸ್ವಸ್ಥ ಎಂದು ಹೇಳಿಲ್ಲ: ಗೃಹ ಸಚಿವ ಬಸವರಾಜ ಬೊಮ್ಮಾಯಿ

ಹುಬ್ಬಳ್ಳಿ: ಮಂಗಳೂರು ವಿಮಾನ ನಿಲ್ದಾಣದಲ್ಲಿ ಬಾಂಬ್​ ಇಟ್ಟಿದ್ದ ಆರೋಪಿ ಆದಿತ್ಯರಾವ್​ನನ್ನು ಮಾನಸಿಕ ಅಸ್ವಸ್ಥ ಎಂದು ಹೇಳಿಕೆ ನೀಡಿದ್ದ ಗೃಹ ಸಚಿವ ಬಸವರಾಜ ಬೊಮ್ಮಾಯಿ...

ತಾಪಂ ಆಡಳಿತ ಶೀಘ್ರ ಕಾರ್ಯಾರಂಭ

ಅಜ್ಜಂಪುರ: ತಾಪಂ ಆಡಳಿತ ಕಾರ್ಯ ಶೀಘ್ರ ಆರಂಭಿಸಲಾಗುವುದು. ಇದಕ್ಕೆ ಪೂರಕವಾಗಿ ಅಜ್ಜಂಪುರ ವ್ಯಾಪ್ತಿಯ ತಾಲೂಕು ಪಂಚಾಯಿತಿ ಸದಸ್ಯರನ್ನು ತರೀಕೆರೆಯಿಂದ ಪ್ರತ್ಯೇಕಿಸುವ ಕಾರ್ಯ ಪ್ರಗತಿಯಲ್ಲಿದೆ...

ಪ್ರಮುಖ ಸ್ಥಳಗಳಲ್ಲಿ ಪೊಲೀಸ್ ಬಿಗಿ ಭದ್ರತೆ

ಚಿಕ್ಕಮಗಳೂರು: ಮಂಗಳೂರಿನಲ್ಲಿ ಬಾಂಬ್ ಪತ್ತೆಯಾದ ಘಟನೆ ಹಿನ್ನೆಲೆಯಲ್ಲಿ ಪ್ರಮುಖ ಧಾರ್ವಿುಕ ಕ್ಷೇತ್ರಗಳಾದ ಶೃಂಗೇರಿ, ಹೊರನಾಡು, ಬಾಬಾಬುಡನ್​ಗಿರಿ, ಮುಳ್ಳಯ್ಯನಗಿರಿ, ಭದ್ರಾ ಅಣೆಕಟ್ಟೆ ಪ್ರದೇಶದಲ್ಲಿ ಪೊಲೀಸ್...

ದೊರೆತ ಉದ್ಯೋಗದಲ್ಲೇ ನಿಷ್ಠೆ ತೋರಿ: ಉದ್ಯೋಗ ಮೇಳದಲ್ಲಿ ಅಭ್ಯರ್ಥಿಗಳಿಗೆ ಶಾಸಕ ಎಸ್.ವಿ ರಾಮಚಂದ್ರ ಸಲಹೆ

ಜಗಳೂರು: ಸರ್ಕಾರಿ ಕೆಲಸಕ್ಕೆ ಅಲಂಬಿತರಾಗದೇ ಸಿಕ್ಕ ಉದ್ಯೋಗವನ್ನು ನಿಷ್ಠೆಯಿಂದ ಮಾಡಿದರೆ ಮುಂದೆ ಅವಕಾಶದ ಬಾಗಿಲುಗಳು ತೆರೆಯುತ್ತವೆ ಎಂದು ಶಾಸಕ ಎಸ್.ವಿ. ರಾಮಚಂದ್ರ ಹೇಳಿದರು. ಇಲ್ಲಿನ...

ಕೋತಿ ಹಾವಳಿಗೆ ಹಣ್ಣಿನ ಗಿಡ ಮದ್ದು

ಚಿಕ್ಕಮಗಳೂರು: ಕಡೂರಿನ ಹಲವೆಡೆ ತಲೆದೋರಿರುವ ಮಂಗಗಳ ಹಾವಳಿ ತಡೆಗೆ ಗ್ರಾಮಗಳ ಹೊರಭಾಗದಲ್ಲಿ ಹಣ್ಣಿನ ಸಸಿಗಳನ್ನು ನೆಟ್ಟು ಬೆಳೆಸುವ ಮೂಲಕ ಅವುಗಳನ್ನು ಆಕರ್ಷಿಸಬಹುದು. ಈ...

ಕೆ.ಆರ್.ಪೇಟೆ: ಕೆ.ಆರ್.ಪೇಟೆ ಹಾಗೂ ಹುಣಸೂರಿನ ಉಪ ಚುನಾವಣೆಯಲ್ಲಿ ಬಿಜೆಪಿ ಮತ್ತು ಕಾಂಗ್ರೆಸ್ ಒಳಒಪ್ಪಂದ ಮಾಡಿಕೊಂಡಿದ್ದವು ಎಂದು ಮಾಜಿ ಸಚಿವ ಎಚ್.ಡಿ.ರೇವಣ್ಣ ಆರೋಪಿಸಿದರು.

ಪಟ್ಟಣದ ಖಾಸಗಿ ಸಮುದಾಯ ಭವನದಲ್ಲಿ ಶನಿವಾರ ನಡೆದ ಜೆಡಿಎಸ್ ಆತ್ಮಾವಲೋಕನ ಹಾಗೂ ಕೃತಜ್ಞತಾ ಸಭೆ ಉದ್ಘಾಟಿಸಿ ಮಾತನಾಡಿದ ಅವರು, ಇಲ್ಲಿ ಬಿಜೆಪಿ ಗೆಲ್ಲಿಸಲು, ಹುಣಸೂರಲ್ಲಿ ಕಾಂಗ್ರೆಸ್ ಗೆಲ್ಲಿಸಲು ಒಳಒಪ್ಪಂದ ಮಾಡಿಕೊಂಡಿದ್ದವು. ಪೊಲೀಸರೇ ಬಿಜೆಪಿಯ ಪರ ಹಣ ಹಂಚಿದ್ದಾರೆ. ಸಿಎಂ ಮಗ ಸೇರಿ ಬೇರೆ ತಾಲೂಕಿನ 1500 ಜನ ಇದ್ದರು. ಈ ಬಗ್ಗೆ ಪುಟ್ಟರಾಜಣ್ಣ, ದೇವರಾಜುಗೆ ಹೇಳಿದ್ದೆ ಎಂದರು.

ದೇವೇಗೌಡರನ್ನು ಮುಗಿಸಬೇಕೆಂಬುದು ಕಾಂಗ್ರೆಸ್ ಮತ್ತು ಬಿಜೆಪಿ ಗುರಿ. ಜನರ ಹಾಗೂ ದೇವರ ಆಶೀರ್ವಾದ ಇರುವತನಕ ಅದು ಸಾಧ್ಯವಿಲ್ಲ. ಹಲವು ಬಾರಿ ಪಕ್ಷ ಸೋತಿದೆ. ಆದರೆ, ಪಕ್ಷ ಉಳಿದಿದೆ. ಹಾಸನದಲ್ಲಿ ಕಾಂಗ್ರೆಸ್ ಇಲ್ಲದಂತೆ ಮಾಡಿದ್ದೇವೆ. ಬೇಲೂರಲ್ಲಿ ಲಿಂಗಾಯತರನ್ನು ಗಾಳಿ ಗಂಟಲು ಮಾಡಿ ಗೆಲ್ಲಿಸಿದ್ದೇನೆ. ದೇವರಾಜು ಗೆಲ್ಲಿಸುವ ಜವಾಬ್ದಾರಿ ನನಗೆ ಬಿಡಿ. ಪಕ್ಷದ ಕೆಲಸ ಮಾಡಿ ಎಂದರು.

ಇವನನ್ನು ನಾವೆ ತೆಗಿಬೇಕು. 2023ಕ್ಕೆ ಬಾಂಬೆಗೆ ಹೋಗುತ್ತಾನೆ. ಆಗಲೂ ಸಿಎಂ ಮಗ ಬಂದು ಗೆಲ್ಲಿಸುತ್ತಾನಾ ಎಂದು ನಾರಾಯಣಗೌಡರ ಹೆಸರು ಹೇಳದೆ ಟೀಕಿಸಿದರು.

ಜಿಪಂ ಸದಸ್ಯರಾದ ಪ್ರೇಮಕುಮಾರಿ, ಎಚ್.ಟಿ.ಮಂಜು, ರಾಮದಾಸ್, ತಾಪಂ ಸದಸ್ಯ ದಿನೇಶ್, ಪಕ್ಷದ ಜಿಲ್ಲಾಧ್ಯಕ್ಷ ಡಿ.ರಮೇಶ್, ತಾಲೂಕು ಅಧ್ಯಕ್ಷ ಜಾನಕಿರಾಮ್, ಯುವ ಘಟಕದ ಅಧ್ಯಕ್ಷ ಸಂತೋಷ್‌ಕುಮಾರ್, ಮುಖಂಡರಾದ ಬಸ್ ಕೃಷ್ಣೇಗೌಡ, ರಾಜು ಮೊದಲಾದವರಿದ್ದರು.

ಎಸ್.ಎಂ.ಕೃಷ್ಣರಿಗೆ ಸವಾಲು
5 ವರ್ಷದಲ್ಲಿ ಶೋಭಾ ಕರಂದ್ಲಾಜೆ, ಈಶ್ವರಪ್ಪ ಎಷ್ಟು ಸ್ಟೇಷನ್ ಮಾಡಿದ್ದಾರೆ. ಎಸ್.ಎಂ.ಕೃಷ್ಣ ಮಂಡ್ಯ ಪ್ಯಾಕೇಜ್‌ಗೆ ಎಷ್ಟು ಹಣ ಕೊಟ್ಟಿದ್ದರು ಎಂಬುದರ ಬಗ್ಗೆ ಬಹಿರಂಗವಾಗಿ ಚರ್ಚೆಗೆ ಬರಲಿ ಎಂದು ಎಚ್.ಡಿ.ರೇವಣ್ಣ ಸವಾಲೆಸೆದರು.

ತಾಲೂಕಿನಲ್ಲಿ 7 ಉಪ ವಿದ್ಯುತ್ ಸ್ಥಾವರ, 220 ಕೆವಿಯ ವಿದ್ಯುತ್ ಸ್ವೀಕರಣಾ ಕೇಂದ್ರ ಪ್ರಾರಂಭಿಸಿ, ಮಂಗಳೂರಿನ ಮೆಸ್ಕಾಂನಲ್ಲಿದ್ದ ವಿದ್ಯುತ್ ಸರಬರಾಜನ್ನು ಸೆಸ್ಕ್ ಮಾಡಿ ಜಿಲ್ಲೆಯನ್ನು ವೃತ್ತ ಕಚೇರಿ ಮಾಡಿದೆ. ಆದರೆ, ಪ್ಯಾಕೇಜ್ ಮಾಡಿ ಸಣ್ಣ ಗುತ್ತಿಗೆದಾರರಿಗೆ ಕೆಲಸ ಕೊಟ್ಟಿಲ್ಲ. ಗುತ್ತಿಗೆದಾರರನ್ನು ಹೇಗೆ ಹಿಡಿದಿಟ್ಟುಕೊಳ್ಳುವುದು ಗೊತ್ತಿದೆ. ಅವರು ನನ್ನ ಹತ್ತಿರಕ್ಕೆ ಬರುತ್ತಾರೆ. ನನ್ನ ಕಣ್ಣು ಬಿದ್ದರೆ ಗುತ್ತಿಗೆದಾರರು ಉಳಿಯಲ್ಲ ಎಂದು ಎಚ್ಚರಿಸಿದರು.

ಬಿಜೆಪಿ ಬಿಟ್ಟರೆ ಯಡಿಯೂರಪ್ಪ ಸೊನ್ನೆ
ಬಿಜೆಪಿ ಬಿಟ್ಟರೆ ಮುಖ್ಯಮಂತ್ರಿ ಯಡಿಯೂರಪ್ಪ ಸೊನ್ನೆ. ಕೆಜೆಪಿ ಕಟ್ಟಿ 4 ಗೆದ್ದಿದ್ದರು. ಹಾಸನದಲ್ಲಿ ಜೆಡಿಎಸ್, ಬಿಜೆಪಿಯ ಬಿ ಟೀಮ್ ಎಂದು ರಾಹುಲ್ ಗಾಂಧಿಯಿಂದ ಹೇಳಿಸಿದರು. ಪರಿಣಾಮ 28 ಸಾವಿರ ಮುಸ್ಲಿಮರು ಕಾಂಗ್ರೆಸ್‌ಗೆ ಮತ ಹಾಕಿದ್ದರಿಂದ ಅಲ್ಲಿ ಬಿಜೆಪಿ ಗೆದ್ದಿದೆ. ಮುಸ್ಲಿಮರು ಬದಲಾಗದಿದ್ದರೆ ಉಳಿಗಾಲವಿಲ್ಲ ಎಂದರು.

ಬಿಜೆಪಿ ಮುಖಂಡರು ಚುನಾವಣೆಗೆ 60 ಕೋಟಿ ರೂ. ಖರ್ಚಾಗಿದೆ ಎನ್ನುತ್ತಿದ್ದಾರೆ. ಅದು ಕುಮಾರಣ್ಣ ಮೈಸೂರು ಭಾಗಕ್ಕೆ ನೀಡಿದ್ದ ಅನುದಾನದ ಕಮೀಷನ್ ಅನ್ನು ಸಿಎಂ ಮಗನೇ ವಸೂಲಿ ಮಾಡಿದ್ದು, ಆ ದುಡ್ಡನ್ನೇ ಚುನಾವಣೆಗೆ ಖರ್ಚು ಮಾಡಿದ್ದಾರೆ. ಕೆಎಂಎಫ್‌ನಿಂದ ನನ್ನ ತೆಗಿಯೋಕೆ ಒಬ್ಬೊಬ್ಬ ನಿರ್ದೇಶಕನಿಗೂ ಒಂದೊಂದು ಕೋಟಿ ರೂ. ಕೊಟ್ಟರು. ರಾತ್ರಿಪೂರ್ತಿ ಸಿಎಂ, ಅವರ ಮಗ ಕೆಲಸ ಮಾಡಿದ್ದಾರೆ. ಸಿಎಂ ದ್ವೇಷ ರಾಜಕಾರಣ ಮಾಡಲ್ಲ ಅಂದರೂ ಬಳಿಕ ಮಾಡಿದೇನ್ರಿ ಎಂದು ಪ್ರಶ್ನಿಸಿದರು.

ವಿಡಿಯೋ ನ್ಯೂಸ್

VIDEO: ಮಾವುತನ ಊಟದ ಎಲೆಯಿಂದ ತುತ್ತು ಅನ್ನ ತಿಂದು, ನೆಟ್ಟಿಗರ...

ತಿರುವನಂತಪುರ: ಆನೆಗಳ ಆಟ, ದಾಳಿ, ಮರ ಹತ್ತುವುದು ಹೀಗೆ ಹಲವು ವಿಡಿಯೋಗಳು ಈಗಾಗಲೇ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್​ ಆಗಿವೆ. ಆದರೆ ಈಗ ವೈರಲ್​ ಆಗಿರುವ ಆನೆಯ ವಿಡಿಯೋ ಸಾಮಾಜಿಕ ಬಳಕೆದಾರರ ಮನಸ್ಸು ಗೆದ್ದಿದೆ. ಹಸಿದ...

VIDEO| ರಾಷ್ಟ್ರಪತಿ ರಾಮನಾಥ್​ ಕೋವಿಂದ್​ರಿಂದ ಪ್ರಧಾನಮಂತ್ರಿ ರಾಷ್ಟ್ರೀಯ ಬಾಲ ಪುರಸ್ಕಾರ...

ನವದೆಹಲಿ: ದೆಹಲಿಯ ರಾಷ್ಟ್ರಪತಿ ಭವನದಲ್ಲಿ ಇಂದು ನಡೆದ ಕಾರ್ಯಕ್ರಮದಲ್ಲಿ ರಾಷ್ಟ್ರಪತಿ ರಾಮನಾಥ್​ ಕೋವಿಂದ್​ ಅವರು ಪ್ರಧಾನಮಂತ್ರಿ ರಾಷ್ಟ್ರೀಯ ಬಾಲ ಪುರಸ್ಕಾರ ಪ್ರಶಸ್ತಿ ಪ್ರದಾನ ಮಾಡಿದರು. ವಿವಿಧ ಕ್ಷೇತ್ರಗಳಲ್ಲಿ ಅದ್ವಿತೀಯ ಸಾಧನೆ ಮಾಡಿದ...

VIDEO| ಬೇಲಿಯೇ ಎದ್ದು ಹೊಲ ಮೇಯ್ದಂತೆ ಎಂಬ ಗಾದೆ ಮಾತಿಗೆ...

ಲಖನೌ: ಬೇಲಿಯೇ ಎದ್ದು ಹೊಲ ಮೇಯ್ದಂತೆ ಎಂಬ ಗಾದೆ ಮಾತಿಗೆ ಪೂರಕವಾದ ಘಟನೆ ಇದಾಗಿದೆ. ಉತ್ತರ ಪ್ರದೇಶದ ನೋಯ್ಡಾದಲ್ಲಿ ನಡೆದ ಘಟನೆ ಸಿಸಿಟಿವಿಯಲ್ಲಿ ಸೆರೆಯಾಗಿದೆ. ನೋಯ್ಡಾದಲ್ಲಿ ಅಂಗಡಿ ಹೊರಭಾಗದಲ್ಲಿ ಇಟ್ಟಿದ್ದ ಬಾಕ್ಸ್​ನಿಂದ...

VIDEO| ನಟಿಯಾಗಿರೋ ಆಲಿಯಾ ಇದೀಗ ಶೆಫ್​: ಬಾಲಿವುಡ್​ ಬ್ಯೂಟಿಯ ಅಡುಗೆ...

ಮುಂಬೈ: ಬಾಲಿವುಡ್​ ಬ್ಯೂಟಿ ಆಲಿಯಾ ಭಟ್ ನಟನೆ ಜತೆಗೆ ಹೊಸ ಸಾಹಸಕ್ಕೆ ಕೈಹಾಕಿದ್ದಾರೆ. ನಟಿಯಾಗಿರುವ ಆಲಿಯಾ ಇದೀಗ ಶೆಫ್ ಆಗಿದ್ದು, ಹೊಸ ಬಗೆಯ ಅಡುಗೆ ಪರಿಚಯಿಸಲು ಮುಂದಾಗಿದ್ದಾರೆ. ಯೂಟ್ಯೂಬ್​ನಲ್ಲಿ ಆಲಿಯಾ ಭಟ್...

VIDEO| ಅತಿವೇಗದ ಎಸೆತ, ಮಥೀಶಾ ಪಥಿರಣ ವಿಶ್ವದಾಖಲೆ!

ಬ್ಲೂಮ್​ಫಾಂಟೆನ್: ಶ್ರೀಲಂಕಾ ವಿರುದ್ಧ ಭಾನುವಾರ ನಡೆದ 19 ವಯೋಮಿತಿ ಏಕದಿನ ವಿಶ್ವಕಪ್ ಟೂರ್ನಿಯ ಮುಖಾಮುಖಿಯಲ್ಲಿ ಭಾರತ ತಂಡ 90 ರನ್​ಗಳಿಂದ ಗೆಲುವು ಸಾಧಿಸಿತು. ಆದರೆ, ಲಂಕಾ ಕಡೆಯಿಂದಲೂ ಸ್ಮರಣೀಯ ದಾಖಲೆಯೊಂದು...

VIDEO| ತಮಿಳಿನ ಕೌನ್​ ಬನೇಗಾ ಕರೋಡ್​ಪತಿ ಶೋನಲ್ಲಿ 1 ಕೋಟಿ...

ಚೆನ್ನೈ: ತಮಿಳು ಆವೃತ್ತಿಯ ಕೌನ್​ ಬನೇಗಾ ಕರೋಡ್​ಪತಿ(ಕೊಡೀಶ್ವರಿ) ರಿಯಾಲಿಟಿ ಶೋನಲ್ಲಿ ವಿಕಲಾಂಗ ಮಹಿಳೆಯೊಬ್ಬಳು ಬರೋಬ್ಬರಿ 1 ಕೋಟಿ ರೂ. ಬಹುಮಾನ ಮೊತ್ತವನ್ನು ಗೆದ್ದು ಎಲ್ಲರ ಗಮನ ಸೆಳೆದಿದ್ದಾಳೆ.ಮದುರೈ ನಿವಾಸಿಯಾಗಿರುವ ಕೌಶಲ್ಯ...