18.1 C
Bangalore
Saturday, December 7, 2019

ಜೈನ ಬಸದಿ ಬಗ್ಗೆ ಸಂಶೋಧನೆ ಅಗತ್ಯ

Latest News

ಖರೀದಿ ಕೇಂದ್ರ ತೆರೆಯಲು ರಾಜ್ಯ ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸಿದ ಕೃಷಿ ಮಾರಾಟ ಇಲಾಖೆ

ಚಿತ್ರದುರ್ಗ: ಬೆಂಬಲ ಬೆಲೆ ಯೋಜನೆಯಡಿ ಶೇಂಗಾ, ಮೆಕ್ಕೆಜೋಳ ಮತ್ತಿತರ ಬೆಳೆಗಳ ಖರೀದಿ ಕೇಂದ್ರ ತೆರೆಯಲು ಹಾಗೂ ಏಜೆನ್ಸಿ ನಿಗದಿಪಡಿಸಲು ಕೋರಿ ಕೃಷಿ ಮಾರಾಟ...

ಅಂಗನವಾಡಿ ಕಾರ್ಯಕರ್ತೆಯರ ಪ್ರತಿಭಟನೆ

ಮೈಸೂರು: ವಿವಿಧ ಬೇಡಿಕೆ ಈಡೇರಿಕೆಗೆ ಆಗ್ರಹಿಸಿ ಜಿಲ್ಲೆಯ ನೂರಾರು ಅಂಗನವಾಡಿ ಕಾರ್ಯಕರ್ತೆಯರು ಶುಕ್ರವಾರ ನಗರದಲ್ಲಿ ಪ್ರತಿಭಟನೆ ನಡೆಸಿದರು. ಕರ್ನಾಟಕ ರಾಜ್ಯ ಅಂಗವನಾಡಿ ನೌಕರರ ಸಂಘದ...

ಅಂಬೇಡ್ಕರ್ ಸಂವಿಧಾನದ ಗುಮಾಸ್ತರಲ್ಲ

ಮೈಸೂರು: ಸಂವಿಧಾನ ಶಿಲ್ಪಿ ಡಾ.ಬಿ.ಆರ್. ಅಂಬೇಡ್ಕರ್ ಅವರನ್ನು ಇತ್ತೀಚೆಗೆ ಕೆಲವರು ಸಂವಿಧಾನದ ಗುಮಾಸ್ತನ ರೀತಿ ನೋಡುತ್ತಿರುವುದು ಮನಸ್ಸಿಗೆ ತೀವ್ರ ನೋವು ಉಂಟುಮಾಡುತ್ತಿದೆ ಎಂದು...

ಅಂಬೇಡ್ಕರ್ ಚಿಂತನೆಗಳೇ ದೇಶಕ್ಕೆ ಸಂಪತ್ತು

ಮೈಸೂರು: ಶಿಕ್ಷಣದ ಏಕಸ್ವಾಮ್ಯ ಮುರಿದು, ಶಿಕ್ಷಣದ ಮೂಲಕ ಎಲ್ಲರಿಗೂ ಬಿಡುಗಡೆಯ ಕ್ರಾಂತಿ ಮೊಳಗಿಸಿದ ಅಂಬೇಡ್ಕರ್ ಅವರ ಶ್ರಮ, ಹೋರಾಟ ಮತ್ತು ವ್ಯಕ್ತಿತ್ವ ವಿದ್ಯಾರ್ಥಿಗಳಿಗೆ...

ಶ್ರೀಕೃಷ್ಣನ ಸಂದೇಶ ಸರ್ವಕಾಲಕ್ಕೂ ಪ್ರಸ್ತುತ

ಬಾಗಲಕೋಟೆ: ಕುರುಕ್ಷೇತ್ರದಲ್ಲಿ ಅರ್ಜುನನಿಗೆ ಶ್ರೀಕೃಷ್ಣನ ನೀಡಿದ ಗೀತೋಪದೇಶ ಸರ್ವಕಾಲಕ್ಕೂ ಪ್ರಸ್ತುತ ಎಂದು ಉಡುಪಿ ಶ್ರೀಕೃಷ್ಣಮಠದ ಭಾವಿ ಪರ್ಯಾಯ ಪೀಠಾಧೀಶ, ಅದಮಾರು ಶ್ರೀ ಈಶಪ್ರಿಯತೀರ್ಥ...

ಕೆ.ಆರ್.ಪೇಟೆ: ತಾಲೂಕಿನ ಮಾಕವಳ್ಳಿ ಗ್ರಾಮದಲ್ಲಿ ಜೀರ್ಣಾವಸ್ಥೆಯಲ್ಲಿರುವ ಜೈನ ಬಸದಿಗೆ ಧರ್ಮಸ್ಥಳದ ಶ್ರೀ ಮಂಜುನಾಥ ದೇವಳದ ಮೈಸೂರು ವಿಭಾಗದ ಆಡಳಿತಾಧಿಕಾರಿ ಪ್ರಸನ್ನಕುಮಾರ್ ನೇತೃತ್ವದ ತಂಡ ಭೇಟಿ ನೀಡಿ ಪರಿಶೀಲಿಸಿತು.

ತಂಡದ ಜತೆ ಬಂದಿದ್ದ ಜೈನ ಮಂದಿರಗಳ ಸಂಶೋಧಕ ರೂಪೇಶ್‌ಕುಮಾರ್ ಮಾತನಾಡಿ, ಸರಳ ರಚನೆ, ಮಾಲಾಕಾಂತ ಕಂಬಗಳು, ಬೋದಿಗೆ ಮತ್ತು ಸಿಂಹಪೀಠ ನೋಡಿದರೆ ಇದು ಗಂಗರ ಕಾಲದ ಜೈನ ಬಸದಿ ಎಂದು ಖಚಿತವಾಗಿ ಹೇಳಬಹುದು. ತಾಲೂಕಿನ ಕತ್ತರಘಟ್ಟ, ಮುರುಕನಹಳ್ಳಿ ಸೇರಿ ಹಲವು ಕಡೆ ಬಸದಿಗಳಿದ್ದು, ಕೆ.ಆರ್.ಪೇಟೆ ತಾಲೂಕು ಜೈನರ ನೆಲೆಯಾಗಿತ್ತು ಎಂಬುದಕ್ಕೆ ಇದು ಸಾಕ್ಷಿಯಾಗಿದೆ. ಈ ಬಸದಿ ಬಗ್ಗೆ ಸಂಶೋಧಕರು ಹೆಚ್ಚಿನ ಸಂಶೋಧನೆ ಮಾಡಿ ಇತಿಹಾಸವನ್ನು ಜಗತ್ತಿಗೆ ತಿಳಿಸಬೇಕಿದೆ. ಇಲ್ಲಿ ಯಾವುದೇ ಮೂರ್ತಿ, ಶಾಸನಗಳು ಈವರೆಗೂ ಕಂಡು ಬಂದಿಲ್ಲ ಎಂದು ಹೇಳಿದರು.

ಕಳೆದೆರಡು ತಿಂಗಳ ಹಿಂದೆ ಗ್ರಾಮದಲ್ಲಿ ಕೆ.ಆರ್.ಪೇಟೆಯ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಿಂದ ಹಮ್ಮಿಕೊಂಡಿದ್ದ ಎನ್‌ಎಸ್‌ಎಸ್ ಶಿಬಿರದಲ್ಲಿ ವಿದ್ಯಾರ್ಥಿಗಳು ಶ್ರಮದಾನ ನಡೆಸುತ್ತಿದ್ದಾಗ ಬಸದಿ ಇರುವುದು ಬೆಳಕಿಗೆ ಬಂದಿತ್ತು. ಈ ಸುದ್ದಿ ಪತ್ರಿಕೆಯಲ್ಲಿ ಪ್ರಕಟವಾಗಿದ್ದನ್ನು ತಿಳಿದು ಸಂಶೋಧನೆಗಾಗಿ ಬಂದಿರುವುದಾಗಿ ತಿಳಿಸಿದರು.

ಆಡಳಿತಾಧಿಕಾರಿ ಪ್ರಸನ್ನಕುಮಾರ್ ಮಾತನಾಡಿ, ಈ ಬಸದಿಯು ನಮ್ಮ ಜೈನ ಸಂಸ್ಕೃತಿಯ ಮಹತ್ತರ ಕೊಂಡಿ. ಇದನ್ನು ಜೀರ್ಣೋದ್ಧಾರ ಮಾಡಲು ಗ್ರಾಮಸ್ಥರಿಗೆ ಸೂಕ್ತ ಮಾರ್ಗದರ್ಶನ ನೀಡಲಾಗುವುದು. ಇದರ ವಸ್ತುಸ್ಥಿತಿಯನ್ನು ಧರ್ಮಸ್ಥಳದ ಧರ್ಮಾಧಿಕಾರಿ ವೀರೇಂದ್ರ ಹೆಗ್ಗಡೆ ಅವರಿಗೆ ವರದಿ ನೀಡುವುದಾಗಿ ತಿಳಿಸಿದರು.

ತಾಲೂಕಿನ ಗ್ರಾಮಭಾರತಿ ಪ್ರೌಢಶಾಲೆಯ ಉಪನ್ಯಾಸಕ ವಜ್ರಪ್ರಸಾದ್, ಧರ್ಮಸ್ಥಳ ಗ್ರಾಮಾಭಿವೃದ್ಧಿ ಸಂಸ್ಥೆಯ ಯೋಜನಾಧಿಕಾರಿ ಸುಧೀರ್ ಜೈನ್, ಗ್ರಾಮದ ಮುಖಂಡರಾದ ಪಟೇಲ್ ದೇವೇಗೌಡ , ರಾಮಚಂದ್ರ, ಕುಮಾರಸ್ವಾಮಿ, ಅರುಣ್ ಮತ್ತಿತರರು ಇದ್ದರು.

Stay connected

278,740FansLike
581FollowersFollow
620,000SubscribersSubscribe

ವಿಡಿಯೋ ನ್ಯೂಸ್

VIDEO| ಎಕ್ಸ್​ಪ್ರೆಸ್​ ರೈಲಿಗೆ ಸಿಲುಕುತ್ತಿದ್ದ ವ್ಯಕ್ತಿಯ ಜೀವ ಉಳಿಸಿದ ಯೋಧ:...

ಥಾಣೆ: ರೈಲ್ವೆ ರಕ್ಷಣಾ ಪಡೆಯ ಯೋಧರೊಬ್ಬರು ಎಕ್ಸ್​ಪ್ರೆಸ್​ ರೈಲಿಗೆ ಸಿಲುಕುತ್ತಿದ್ದ ವ್ಯಕ್ತಿಯೊಬ್ಬನನ್ನು ರಕ್ಷಣೆ ಮಾಡುವ ಮೂಲಕ ಸಮಯಪ್ರಜ್ಞೆ ಮರೆದಿರುವ ಘಟನೆ ಮಹಾರಾಷ್ಟ್ರದ ಥಾಣೆ ರೈಲ್ವೆ ನಿಲ್ದಾಣದಲ್ಲಿ ಬುಧವಾರ ನಡೆದಿದ್ದು, ಇದಕ್ಕೆ...

VIDEO| ನನ್ನನ್ನು ಯಾರೂ ಮುಟ್ಟಲಾರರು; ಸ್ವಯಂಘೋಷಿತ ದೇವಮಾನವ ನಿತ್ಯಾನಂದ ಹೇಳಿಕೆ

ನವದೆಹಲಿ: "ನನ್ನನ್ನು ಯಾರೂ ಮುಟ್ಟಲಾರರು, ನಿಮಗೊಂದು ಸತ್ಯ ಹೇಳುತ್ತೇನೆ. ನಾನೂ ಪರಮ ಶಿವ, ಅರ್ಥವಾಯ್ತ...?" ಎಂದು ಅತ್ಯಾಚಾರದ ಆರೋಪಿ ನಿತ್ಯಾನಂದ ವಿಡಿಯೋಂದರಲ್ಲಿ ಹೇಳಿದ್ದಾನೆ. ಯಾವ ಕೋರ್ಟ್​ ಕೂಡ ನನ್ನ ಬಗ್ಗೆ ತೀರ್ಪು ನೀಡಲಾರದು. ಯಾರೂ...

VIDEO| ಮದುವೆ ಸಮಾರಂಭದಲ್ಲಿ ಡ್ಯಾನ್ಸ್​ ನಿಲ್ಲಿಸುತ್ತಿದ್ದಂತೆ ಯುವತಿ ಮೇಲೆ ಫೈರಿಂಗ್​:...

ಲಖನೌ: ಮದುವೆ ಸಂಭ್ರಮದಲ್ಲಿ ಡ್ಯಾನ್ಸ್​ ಮಾಡುವುದನ್ನು ನಿಲ್ಲಿಸುತ್ತಿದ್ದಂತೆ ನೃತ್ಯಗಾರ್ತಿಯ ಮುಖಕ್ಕೆ ಫೈರಿಂಗ್​ ಮಾಡಿರುವ ಘಟನೆ ಉತ್ತರ ಪ್ರದೇಶದ ಚಿತ್ರಕೂಟದಲ್ಲಿ ಕಳೆದ ವಾರ ನಡೆದಿರುವುದಾಗಿ ವರದಿಯಾಗಿದೆ. ಘಟನೆಯಲ್ಲಿ ಗಾಯಗೊಂಡ ಯುವತಿಯನ್ನು ಕಾನ್ಪುರ ಆಸ್ಪತ್ರೆಗೆ...

VIDEO: ಎನ್​ಕೌಂಟರ್ ನಡೆಸಿದ ಪೊಲೀಸರನ್ನು ಹೆಗಲ ಮೇಲೆ ಹೊತ್ತು ಸಂಭ್ರಮಿಸಿದ...

ಹೈದರಾಬಾದ್​​: ಪಶುವೈದ್ಯೆ ದಿಶಾ ಅತ್ಯಾಚಾರ ಮತ್ತು ಕೊಲೆ ಆರೋಪಿಗಳನ್ನು ಎನ್​ಕೌಂಟರ್​​ನಲ್ಲಿ ಹತ್ಯೆಗೈದ ಪೊಲೀಸರನ್ನು ಹೈದರಾಬಾದ್​​ ಜನತೆ ಹೆಗಲ ಮೇಲೆ ಹೊತ್ತು ಜಯಘೊಷ ಕೂಗಿ ಸಂಭ್ರಮಿಸಿದ್ದಾರೆ. ಶುಕ್ರವಾರ ಬೆಳಗ್ಗೆ ಆರೋಪಿಗಳ ಎನ್​ಕೌಂಟರ್​ ಸುದ್ಧಿ...

ಉಪಚುನಾವಣೆ ಮತದಾನ ಅಂತ್ಯ: ಮತಗಟ್ಟೆ ಸಮೀಕ್ಷೆಯಲ್ಲಿ ಬಿಜೆಪಿಯದ್ದೇ ಮೇಲುಗೈ

ಬೆಂಗಳೂರು: ರಾಜ್ಯದ 15 ಕ್ಷೇತ್ರಗಳ ಉಪಚುನಾವಣೆಯ ಮತದಾನ ಪ್ರಕ್ರಿಯೆ ಗುರುವಾರ ಸಂಜೆ 6 ಗಂಟೆಗೆ ಪೂರ್ಣಗೊಂಡಿತು. ಸಣ್ಣಪುಟ್ಟ ಗಲಾಟೆಗಳು ಹಾಗೂ ಅಲ್ಲಲ್ಲಿ ಕೆಲ ಇವಿಎಂಗಳ ದೋಷ ಹೊರತುಪಡಿಸಿದರೆ ಉಪಚುನಾವಣೆಯ ಮತದಾನ...

VIDEO| ವಿಕೆಟ್​ ಕಿತ್ತ ಖುಷಿಯಲ್ಲಿ ಕರವಸ್ತ್ರವನ್ನು ಕಡ್ಡಿಯನ್ನಾಗಿಸಿ ಸಂಭ್ರಮ: ಬೌಲರ್​ನ...

ನವದೆಹಲಿ: ಯಾವುದೇ ಆಟವಾಗಿರಲಿ ಆಟಗಾರರಿಗೆ ತಮ್ಮ ಸಂಭ್ರಮದ ಕ್ಷಣ ಸ್ಮರಣೀಯವಾಗಿರುತ್ತದೆ. ಹಲವರು ವಿಭಿನ್ನ ರೀತಿಯಲ್ಲಿ ಸಂಭ್ರಮಿಸುವ ಪ್ರಯತ್ನವನ್ನು ಮೈದಾನದಲ್ಲಿ ಮಾಡುತ್ತಿರುತ್ತಾರೆ. ಇದೀಗ ದಕ್ಷಿಣ ಆಫ್ರಿಕಾ ಬೌಲರ್​ ಒಬ್ಬರು ವಿಕೆಟ್​ ಪಡೆದ...