More

  ಕೆ.ಆರ್ ​ಪುರ: ವಿದ್ಯಾರ್ಥಿಗಳಿಂದ ಮತದಾನ ಜಾಗೃತಿ ಜಾಥಾ..!

  ಬೆಂಗಳೂರು: ಲೋಕಸಭಾ ಚುನಾವಣೆಯಲ್ಲಿ ಎಲ್ಲರೂ ಮತ ಚಲಾಯಿಸುವ ಮೂಲಕ ಪ್ರಜುಪ್ರಭುತ್ವವನ್ನು ಗೆಲ್ಲಿಸಬೇಕು ಎಂದು ಶಿಕ್ಷಣ ಇಲಾಖೆ ವಿಶೇಷಾಧಿಕಾರಿಗಳಾದ ಡಾ.ವೈ. ರಮೇಶ್ ವಿದ್ಯಾರ್ಥಿಗಳಲ್ಲಿ ಮನವಿ ಮಾಡಿದರು.

  ಇದನ್ನೂ ಓದಿ: ಆಂಧ್ರ ಚುನಾವಣೆ: ಜನಸೇನಾ ಸಂಸ್ಥಾಪಕ ಪವನ್ ಕಲ್ಯಾಣ್ ಆಸ್ತಿಯ ಮೌಲ್ಯ ಎಷ್ಟು ಗೊತ್ತಾ…?

  ಕಾಲೇಜು ಶಿಕ್ಷಣ ಇಲಾಖೆ ಹಾಗೂ ತಾಂತ್ರಿಕ ಶಿಕ್ಷಣ ಇಲಾಖೆ, ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ಮತ್ತು ಪದವಿ ಕಾಲೇಜಿನ ಆಶ್ರಯದಲ್ಲಿ ಜರುಗಿದ ಮತದಾನ ಜಾಗೃತಿ ಜಾಥಾಕ್ಕೆ ಶಿಕ್ಷಣ ಇಲಾಖೆ ವಿಶೇಷಾಧಿಕಾರಿಗಳಾದ ಡಾ.ವೈ. ರಮೇಶ್ ಚಾಲನೆ ನೀಡಿದರು. ನಗರದ ಮುಖ್ಯ ರಸ್ತೆಯಲ್ಲಿ ಸಂಚರಿಸಿದ ವಿದ್ಯಾರ್ಥಿಗಳು ಮತದಾನ ಮಾಡುವ ಕುರಿತು ಘೋಷಣೆ ಹೇಳಿದರು.

  ಕೆ.ಆರ್ ​ಪುರ: ವಿದ್ಯಾರ್ಥಿಗಳಿಂದ ಮತದಾನ ಜಾಗೃತಿ ಜಾಥಾ..!

  ಈ ಸಂದರ್ಭದಲ್ಲಿ ಮಾತನಾಡಿದ ಕಾಲೇಜು ಶಿಕ್ಷಣ ಇಲಾಖೆ ವಿಶೇಷಾಧಿಕಾರಿಗಳಾದ ಡಾ.ವೈ. ರಮೇಶ್ ಅವರು, ಲೋಕಸಭಾ ಚುನಾವಣೆಯಲ್ಲಿ ಎಲ್ಲರೂ ಮತ ಚಲಾಯಿಸಿ ಪ್ರಜಾಪ್ರಭುತ್ವವನ್ನು ಗೆಲ್ಲಿಸಬೇಕಿದೆ. ನೀವೆಲ್ಲರೂ ಯುವ ಮತದಾರರಾಗಿದ್ದು, ಹಲವರು ಮೊದಲ ಬಾರಿ ಮತ ಚಲಾಯಿಸುತ್ತಿದ್ದೀರಿ. ಪ್ರಜಾಪ್ರಭುತ್ವಕ್ಕೆ ಉತ್ತಮ ಕೊಡುಗೆ ನೀಡುವ ನಿಟ್ಟಿನಲ್ಲಿ ಎಲ್ಲರೂ ತಪ್ಪದೆ ಮತ ಚಲಾಯಿಸಬೇಕು ಎಂದು ವಿದ್ಯಾರ್ಥಿಗಳಿಗೆ ತಿಳಿಸಿದರು.

  ಕಡ್ಡಾಯವಾಗಿ ಮತದಾನ ಮಾಡಬೇಕು: ಯಾವುದೇ ಆಸೆ ಆಮಿಷಗಳಿಗೆ ಒಳಗಾಗದೆ ತಮ್ಮ ಪವಿತ್ರವಾದ ಮತವನ್ನು ಚಲಾಯಿಸಬೇಕು. ಮತದಾನ ಮಾಡುವುದು ಪ್ರತಿಯೊಬ್ಬರ ಆದ್ಯ ಕರ್ತವ್ಯ. ಚುನಾವಣೆಯಲ್ಲಿ ಕಡ್ಡಾಯವಾಗಿ ಮತದಾನ ಮಾಡಬೇಕು ಕಾಲೇಜಿನ ಪ್ರಾಂಶುಪಾಲರಾದ ಪ್ರತಿಭಾ ಪಾರ್ಶ್ವನಾಥ ಅವರು ಎಂದು ತಿಳಿಸಿದರು.

  ಕೆ.ಆರ್ ​ಪುರ: ವಿದ್ಯಾರ್ಥಿಗಳಿಂದ ಮತದಾನ ಜಾಗೃತಿ ಜಾಥಾ..!

  ಪ್ರತಿಯೊಬ್ಬರು ಜವಾಬ್ದಾರಿಯುತ ಮತದಾರರಾಗಿ, ತಮ್ಮ ಹೊಣೆಗಾರಿಕೆ ಅರಿತು ಮೂಲ ಕರ್ತವ್ಯವನ್ನು ನಿಭಾಯಿಸುವ ದೃಷ್ಟಿಯಿಂದ ಮತಗಟ್ಟೆಗೆ ಬಂದು ಮತವನ್ನು ಚಲಾಯಿಸಬೇಕು ಎಂಬ ಉದ್ದೇಶದಿಂದ ನಮ್ಮ ನಡೆ ಮತಗಟ್ಟೆಯ ಕಡೆ ಜಾಗೃತಿ ಅಭಿಯಾನ ಹಮ್ಮಿಕೊಂಡಿರುವದಾಗಿ ಪ್ರಾಂಶುಪಾಲರು ಹೇಳಿದರು.

  ಕೆ.ಆರ್ ​ಪುರ: ವಿದ್ಯಾರ್ಥಿಗಳಿಂದ ಮತದಾನ ಜಾಗೃತಿ ಜಾಥಾ..!

  ಈ ಸಂದರ್ಭದಲ್ಲಿ ಕಾಲೇಜಿನ ಪ್ರಾಂಶುಪಾಲರು ಪ್ರತಿಭಾ ಪಾರ್ಶ್ವನಾಥ ಅವರು, ಕಾಲೇಜಿನ ಪ್ರಾಧ್ಯಾಪಕರು, ಅತಿಥಿ ಉಪನ್ಯಾಸಕರು, ಭೋದಕೇತರ ಸಿಬ್ಬಂದಿ ಮತ್ತು ಸಾವಿರಕ್ಕೂ ಅಧಿಕ ವಿದ್ಯಾರ್ಥಿಗಳು ಜಾಥಾದಲ್ಲಿ ಪಾಲ್ಗೊಂಡಿದ್ದರು.

  ಬಿಜೆಪಿಗೆ ಮತ ನೀಡಿ, ಮಮತಾ ಬ್ಯಾನರ್ಜಿ ಗೂಂಡಾಗಳನ್ನು ತಲೆ ಕೆಳಗಾಗಿ ನೇತು ಹಾಕ್ತೀವಿ: ಅಮಿತ್ ಷಾ

  ಸಿನಿಮಾ

  ಲೈಫ್‌ಸ್ಟೈಲ್

  ಟೆಕ್ನಾಲಜಿ

  Latest Posts