More

    ಕ್ರೀಡೆಗಳಿಂದ ಮಕ್ಕಳ ಮಾನಸಿಕ ಆರೋಗ್ಯ ವೃದ್ಧಿ

    ಪುತ್ತೂರು: ಇತ್ತೀಚಿನ ದಿನಗಳಲ್ಲಿ ಕ್ರೀಡೆಗಳಿಗೆ ಹೆಚ್ಚಿನ ಆದ್ಯತೆ ನೀಡಲಾಗುತ್ತಿದೆ ಕ್ರೀಡೆಗಳಲ್ಲಿ ಭಾಗವಹಿಸುವ ಮೂಲಕ ಮಕ್ಕಳ ಮಾನಸಿಕ ಆರೋಗ್ಯ ಹೆಚ್ಚಾಗುತ್ತದೆ. ಈ ನಿಟ್ಟಿನಲ್ಲಿ ಮಕ್ಕಳ ಕಲಿಕೆಯ ಗುಣ ಮಟ್ಟ ಹೆಚ್ಚಾಗಲು ಸಾಧ್ಯ ಎಂದು ಪುತ್ತೂರು ಕ್ಷೇತ್ರ ಶಿಕ್ಷಣಾಧಿಕಾರಿ ಲೋಕೇಶ್ ಎಸ್.ಆರ್ ಹೇಳಿದರು.
    ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ, ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಚೇರಿ ಪುತ್ತೂರು ಹಾಗೂ ದ.ಕ.ಜಿ.ಪಂ.ಉ.ಹಿ.ಪ್ರಾಥಮಿಕ ಶಾಲೆ ಕುದ್ಮಾರು ಇದರ ಸಹಯೋಗದೊಂದಿಗೆ ಕುದ್ಮಾರು ಸ.ಉ.ಹಿ.ಪ್ರಾಥಮಿಕ ಶಾಲೆಯಲ್ಲಿ ನಡೆದ ಪುತ್ತೂರು ತಾಲೂಕು ಮಟ್ಟದ ಪ್ರಾಥಮಿಕ ಶಾಲಾ ಬಾಲಕ, ಬಾಲಕಿಯರ ಕಬಡ್ಡಿ ಪಂದ್ಯಾಟವನ್ನು ಉದ್ಘಾಟಿಸಿ ಮಾತನಾಡಿದರು.
    ಕ್ರೀಡೆಯಿಂದ ದೇಹದ ಸಾಮರ್ಥ್ಯ ವೃದ್ಧಿಯಾಗುವ ಜತೆಗೆ ಒಬ್ಬ ವ್ಯಕ್ತಿ ಆರೋಗ್ಯದಿಂದಿರಲು ಸಹಾಯ ಮಾಡುತ್ತದೆ. ನಿರಂತರ ಕ್ರೀಡಾ ಚಟುವಟಿಕೆಗಳಲ್ಲಿ ಭಾಗವಹಿಸುವುದರಿಂದ ಮಾನಸಿಕ, ದೈಹಿಕ ಸಾಮರ್ಥ್ಯ ವೃದ್ಧಿಯಾಗಲು ಸಹಕಾರಿ, ಮಕ್ಕಳು ಶಿಕ್ಷಣದ ಜತೆಗೆ ಕ್ರೀಡೆಗಳಿಗೂ ಹೆಚ್ಚಿನ ಆದ್ಯತೆ ನೀಡಬೇಕು ಎಂದರು.
    ಬೆಳಂದೂರು ಗ್ರಾ.ಪಂ. ಅಧ್ಯಕ್ಷ ಲೋಹಿತಾಕ್ಷ ಕೆಡೆಂಜಿಕಟ್ಟ ಅಧ್ಯಕ್ಷತೆ ವಹಿಸಿದ್ದರು.
    ಸುಳ್ಯ ಕ್ಷೇತ್ರದ ಅಕ್ರಮ ಸಕ್ರಮ ಸಮಿತಿ ಸದಸ್ಯ ರಾಕೇಶ್ ರೈ ಕೆಡೆಂಜಿ, ನಿವೃತ್ತ ಸಹಾಯಕ ಕ್ರೀಡಾಧಿಕಾರಿ ಮಾಧವ ಬಿ.ಕೆ, ಕುದ್ಮಾರು, ಸ್ಕಂದಶ್ರೀ ಯುವಕ ಮಂಡಲದ ಅಧ್ಯಕ್ಷ ದೇವರಾಜ್ ನೂಜಿ, ಕುದ್ಮಾರು ಸ.ಉ.ಹಿ.ಪ್ರಾಥಮಿಕ ಶಾಲಾ ಎಸ್‌ಡಿಎಂಸಿ ಅಧ್ಯಕ್ಷ ಗಂಗಾಧರ ಗೌಡ, ಜಿಲ್ಲಾ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಪ್ರಧಾನ ಕಾರ್ಯದರ್ಶಿ ವಿಮಲ್ ಕುಮಾರ್ ನೆಲ್ಯಾಡಿ, ಕಡಬ ತಾಲೂಕು ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಅಧ್ಯಕ್ಷ ರಾಮಕೃಷ್ಣ ಮಲ್ಲಾರ, ಪುತ್ತೂರು ತಾಲೂಕು ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಅಧ್ಯಕ್ಷ ನವೀನ್ ಕುಮಾರ್ ರೈ, ಕಡಬ ತಾಲೂಕು ದೈಹಿಕ ಶಿಕ್ಷಣ ಶಿಕ್ಷಕರ ಸಂಘದ ಅಧ್ಯಕ್ಷ ಮಾಮಚ್ಚನ್, ಪುತ್ತೂರು ತಾಲೂಕು ದೈಹಿಕ ಶಿಕ್ಷಣ ಶಿಕ್ಷಕರ ಸಂಘದ ಅಧ್ಯಕ್ಷ ಮೋನಪ್ಪ ಗೌಡ ಪಟ್ಟೆ ಉಪಸ್ಥಿತರಿದ್ದರು.
    ಶಾಲಾ ಮುಖ್ಯಗುರು ಕುಶಾಲಪ್ಪ ಗೌಡ ಸ್ವಾಗತಿಸಿ, ದೈಹಿಕ ಶಿಕ್ಷಣ ಶಿಕ್ಷಕ ಸುರೇಶ್ ಕುಮಾರ್ ವಂದಿಸಿದರು. ಶಿಕ್ಷಕಿಯರಾದ ಶ್ರೀಲತಾ, ವೀಣಾ ಕಾರ್ಯಕ್ರಮ ನಿರೂಪಿಸಿದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts