More

    ಮೊದಲ ದಿನವೇ ಜನರ ಗಮನ ಸೆಳೆದ ಕೃಷಿಮೇಳ: ಸಹಸ್ರಾರು ಸಂಖ್ಯೆಯಲ್ಲಿ ಭೇಟಿ ನೀಡಿ ರೈತರಿಂದ ಮಾಹಿತಿ ಸಂಗ್ರಹ

    ಮೈಸೂರು: ‘ಸುಸ್ಥಿರ ಅಭಿವೃದ್ಧಿ ನಮ್ಮ ಗುರಿ’ ಪರಿಕಲ್ಪನೆಯಡಿ ವಿಜಯವಾಣಿ ಮತ್ತು ದಿಗ್ವಿಜಯ ಸುದ್ದಿವಾಹಿನಿ ವತಿಯಿಂದ ಮಹಾರಾಜ ಕಾಲೇಜು ಮೈದಾನದಲ್ಲಿ ಆಯೋಜಿಸಿರುವ ಮೂರು ದಿನಗಳ ಕೃಷಿ ಮೇಳಕ್ಕೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರಿಂದು ಚಾಲನೆ ನೀಡಿದ್ದು, ಮೊದಲ ದಿನವೇ ಕೃಷಿ ಮೇಳೆ ಕಳೆಗಟ್ಟಿದೆ.

    ಮಹಾರಾಜ ಕಾಲೇಜು ಮೈದಾನದಲ್ಲಿ ಕೃಷಿ ಹಬ್ಬವನ್ನು ಆಯೋಜಿಸಲಾಗಿದ್ದು, ಸಹಸ್ರಾರು ಸಂಖ್ಯೆಯಲ್ಲಿ ಜನರು ಆಗಮಿಸುತ್ತಿದ್ದಾರೆ. ವಿವಿಧ ಮಳಿಗೆಗಳಿಗೆ ಭೇಟಿ ನೀಡಿ ಕೃಷಿ ಬಗ್ಗೆ ರೈತರಿಂದ ಮಾಹಿತಿ ಸಂಗ್ರಹಿಸುತ್ತಿದ್ದಾರೆ.

    ಮಣ್ಣುರಹಿತ ಕೃಷಿ, ಕೃಷಿಯಲ್ಲಿ ಡ್ರೋನ್‌ ಬಳಕೆ, ಆಟೋಮೇಟೆಡ್‌ ಕೃಷಿ ಯಂತ್ರೋಪಕರಣ, ಕೃಷಿ ತಂತ್ರಜ್ಞಾನಗಳ ಪ್ರಾತ್ಯಕ್ಷಿಕೆ ಇರಲಿದೆ. ಸಿರಿಧಾನ್ಯ ಹಾಗೂ ಅವುಗಳ ಮಹತ್ವ, ಔಷಧೀಯ ಮತ್ತು ಸುಗಂಧ ದ್ರವ್ಯ ಸಸ್ಯ, ಜಲಾನಯನ ನಿರ್ವಹಣೆ, ಸಾವಯವ ಕೃಷಿ ಪದ್ಧತಿ, ಸಮಗ್ರ ಪೋಷಕಾಂಶಗಳು, ರೋಗ ನಿರ್ವಹಣೆ, ಹನಿ ಹಾಗೂ ತುಂತುರು ನೀರಾವರಿ ಪದ್ಧತಿ, ಮಳೆ ಮತ್ತು ಚಾವಣಿ ನೀರು ಸಂಗ್ರಹ ಯೋಜನೆಯ ಬಗ್ಗೆ ಮೇಳದಲ್ಲಿ ತಜ್ಞರಿಂದ ರೈತರಿಗೆ ಅಮೂಲ್ಯ ಸಲಹೆ ಸಿಗಲಿವೆ.

    ಸುಧಾರಿತ ಕೃಷಿ ಯಂತ್ರೋಪಕರಣಗಳ ಪ್ರದರ್ಶನ, ಕೊಯ್ಲೋತ್ತರ ತಾಂತ್ರಿಕತೆ, ಕೃಷಿ ಉತ್ಪನ್ನ ಸಂಸ್ಕರಣೆ, ಮೌಲ್ಯವರ್ಧನೆ, ಬಿತ್ತನೆ ಬೀಜ ಪರೀಕ್ಷೆ ಹಾಗೂ ಶೇಖರಣೆ, ಮೀನು ಸಾಕಾಣಿಕೆ, ಹವಾಮಾನ ಚತುರ ಕೃಷಿ ಸೇರಿ ಇತರ ಮಾಹಿತಿಗಳು ಕೃಷಿ ಮೇಳದಲ್ಲಿ ದೊರೆಯಲಿವೆ.

    ರೈತರು ಇಲ್ಲ ಅಂದ್ರೆ ನಾವಿಲ್ಲ: ಕೃಷಿ ಮೇಳದಲ್ಲಿ ರೈತರ ಕೊಡುಗೆ ನೆನೆದ ಶಿವ ಸಂಕೇಶ್ವರ

    ಕೃಷಿ ಮೇಳದಲ್ಲಿ ಬಜೆಟ್​ನಲ್ಲಿರುವ ಕೃಷಿ ನೀತಿಯ ಬಗ್ಗೆ ಸುಳಿವು ಕೊಟ್ಟ ಮುಖ್ಯಮಂತ್ರಿ ಬೊಮ್ಮಾಯಿ!

    ರಾಜ್ಯ ಮಟ್ಟದ ಕೃಷಿ ಮೇಳಕ್ಕೆ ಚಾಲನೆ ನೀಡಿದ ಸಿಎಂ ಬೊಮ್ಮಾಯಿ: ವಿಜಯವಾಣಿ, ದಿಗ್ವಿಜಯ ನ್ಯೂಸ್​ ವತಿಯಿಂದ​ ಆಯೋಜನೆ

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts