More

    ರಾಜ್ಯ ಮಟ್ಟದ ಕೃಷಿ ಮೇಳಕ್ಕೆ ಚಾಲನೆ ನೀಡಿದ ಸಿಎಂ ಬೊಮ್ಮಾಯಿ: ವಿಜಯವಾಣಿ, ದಿಗ್ವಿಜಯ ನ್ಯೂಸ್​ ವತಿಯಿಂದ​ ಆಯೋಜನೆ

    ಮೈಸೂರು: ‘ಸುಸ್ಥಿರ ಅಭಿವೃದ್ಧಿ ನಮ್ಮ ಗುರಿ’ ಪರಿಕಲ್ಪನೆಯಡಿ ವಿಜಯವಾಣಿ ಮತ್ತು ದಿಗ್ವಿಜಯ ಸುದ್ದಿವಾಹಿನಿ ವತಿಯಿಂದ ಮಹಾರಾಜ ಕಾಲೇಜು ಮೈದಾನದಲ್ಲಿ ಆಯೋಜಿಸಿರುವ ಮೂರು ದಿನಗಳ ಕೃಷಿ ಮೇಳಕ್ಕೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಶುಕ್ರವಾರ ಮಧ್ಯಾಹ್ನ ಅಧಿಕೃತವಾಗಿ ಚಾಲನೆ ನೀಡಿದರು.

    ಕಾರ್ಯಕ್ರಮಕ್ಕೆ ಆಗಮಿಸಿದ ಸಿಎಂ ಬೊಮ್ಮಾಯಿ ಅವರು ಮೊದಲು ಗೋಪೂಜೆ ನೆರವೇರಿಸಿದರು. ಇದಾದ ಬಳಿಕ ಭತ್ತ, ರಾಗಿ, ಕಬ್ಬು ನಾಟಿ ಮಾಡಿ, ಕೊಳಗಕ್ಕೆ ಭತ್ತ ಸುರಿದು ಅಡಿಕೆ ಹೊಂಬಾಳೆ ಬಿಡಿಸುವ ಮೂಲಕ ಕೃಷಿ ಮೇಳಕ್ಕೆ ಅಧಿಕೃತ ಚಾಲನೆ ನೀಡಿದರು. ಇದಕ್ಕೂ ಮುನ್ನ ವಿಆರ್​ಎಲ್ ಟ್ರಾವೆಲ್ಸ್ ಪ್ರೈವೇಟ್ ಲಿಮಿಟೆಡ್​ ವ್ಯವಸ್ಥಾಪಕ ನಿರ್ದೇಶಕ ಶಿವ ಸಂಕೇಶ್ವರ ಅವರು ಭತ್ತದ ಖಣಜಕ್ಕೆ ಪೂಜೆ ಸಲ್ಲಿಸಿದರು. ಈ ವೇಳೆ ದಿಗ್ವಿಜಯ ನ್ಯೂಸ್ ಸಂಪಾದಕರಾದ ಸಿದ್ದು ಕಾಳೋಜಿ, ವಿಜಯವಾಣಿ ಸಂಪಾದಕರಾದ ಚನ್ನೇಗೌಡ, ಮೈಸೂರು ಸ್ಥಾನಿಕ ಸಂಪಾದಕ ಸತ್ಯನಾರಾಯಣ್ ಸಾಥ್ ನೀಡಿದರು. ಸಿಎಂ ಜೊತೆ ಸಚಿವ ಆರ್.ಅಶೋಕ್, ಗೋವಿಂದ ಕಾರಜೋಳ ಹಾಗೂ ಸಂಸದ ಪ್ರತಾಪ್ ಸಿಂಹ ಆಗಮಿಸಿದರು.

    ಇಂದು ಬೆಳಗ್ಗೆ ಸುಣ್ಣದಕೇರಿಯ ಮಹದೇಶ್ವರ ಸ್ವಾಮಿ ದೇವಸ್ಥಾನದಲ್ಲಿ ಪೂಜೆ ಸಲ್ಲಿಸುವ ಮೂಲಕ ಕೃಷಿ ಮೇಳ ಮೆರವಣಿಗೆಗೆ ಚಾಲನೆ ದೊರೆಯಿತು. ಸಾಂಸ್ಕೃತಿಕ ಕಲಾ ತಂಡಗಳು ಮೇಳಕ್ಕೆ ಮೆರಗು ತಂದುಕೊಟ್ಟರು. ಮುಖ್ಯ ವೇದಿಕೆ ಮುಂಭಾಗದಲ್ಲಿ ವಿವಿಧ ಧಾನ್ಯಗಳಿಂದ ರಾಶಿ ಅಲಂಕರಿಸಲಾಯಿತು.

    ಕಂಸಾಳೆ, ವೀರಗಾಸೆ, ಸುಗ್ಗಿ ಕುಣಿತ, ಕೊಡವ ಸಾಂಸ್ಕೃತಿಕ ನೃತ್ಯ, ಗೀತಾ ಗಾಯನ, ಚಂಡೆ ವಾದನ, ಸುಗಮ ಸಂಗೀತ ಸೇರಿ ವಿವಿಧ ಸಾಂಸ್ಕೃತಿಕ ಕಾರ್ಯಕ್ರಮಗಳು ಮೇಳಕ್ಕೆ ಇನ್ನಷ್ಟು ಕಳೆ ತರಲಿವೆ. ರೈತರಿಗೆ ಅನುಕೂಲವಾಗುವ ಮಾಹಿತಿಗಳು ಮೇಳದಲ್ಲಿ ಲಭ್ಯವಿದೆ. 50ಕ್ಕೂ ಮಳಿಗೆಗಳಲ್ಲಿ ತನ್ನ ಪ್ರದರ್ಶಿಸಲಾಯಿತು.

    ಮಣ್ಣುರಹಿತ ಕೃಷಿ, ಕೃಷಿಯಲ್ಲಿ ಡ್ರೋನ್‌ ಬಳಕೆ, ಆಟೋಮೇಟೆಡ್‌ ಕೃಷಿ ಯಂತ್ರೋಪಕರಣ, ಕೃಷಿ ತಂತ್ರಜ್ಞಾನಗಳ ಪ್ರಾತ್ಯಕ್ಷಿಕೆ ಇರಲಿದೆ. ಸಿರಿಧಾನ್ಯ ಹಾಗೂ ಅವುಗಳ ಮಹತ್ವ, ಔಷಧೀಯ ಮತ್ತು ಸುಗಂಧ ದ್ರವ್ಯ ಸಸ್ಯ, ಜಲಾನಯನ ನಿರ್ವಹಣೆ, ಸಾವಯವ ಕೃಷಿ ಪದ್ಧತಿ, ಸಮಗ್ರ ಪೋಷಕಾಂಶಗಳು, ರೋಗ ನಿರ್ವಹಣೆ, ಹನಿ ಹಾಗೂ ತುಂತುರು ನೀರಾವರಿ ಪದ್ಧತಿ, ಮಳೆ ಮತ್ತು ಚಾವಣಿ ನೀರು ಸಂಗ್ರಹ ಯೋಜನೆಯ ಬಗ್ಗೆ ಮೇಳದಲ್ಲಿ ತಜ್ಞರಿಂದ ರೈತರಿಗೆ ಅಮೂಲ್ಯ ಸಲಹೆ ಸಿಗಲಿವೆ.

    ಸುಧಾರಿತ ಕೃಷಿ ಯಂತ್ರೋಪಕರಣಗಳ ಪ್ರದರ್ಶನ, ಕೊಯ್ಲೋತ್ತರ ತಾಂತ್ರಿಕತೆ, ಕೃಷಿ ಉತ್ಪನ್ನ ಸಂಸ್ಕರಣೆ, ಮೌಲ್ಯವರ್ಧನೆ, ಬಿತ್ತನೆ ಬೀಜ ಪರೀಕ್ಷೆ ಹಾಗೂ ಶೇಖರಣೆ, ಮೀನು ಸಾಕಾಣಿಕೆ, ಹವಾಮಾನ ಚತುರ ಕೃಷಿ ಸೇರಿ ಇತರ ಮಾಹಿತಿಗಳು ಕೃಷಿ ಮೇಳದಲ್ಲಿ ದೊರೆಯಲಿವೆ.

    ವಿಪಕ್ಷ ನಾಯಕ ಸಿದ್ದರಾಮಯ್ಯಗೆ 1 ಕೋಟಿ ರೂ. ಆಫರ್ ನೀಡಿದ ಯಾದಗಿರಿ ಅಭಿಮಾನಿ!

    ಮಕ್ಕಳ ಮೇಲೆ ಒತ್ತಡ ಹೇರಬೇಡಿ: ಪರೀಕ್ಷಾ ಪೇ ಚರ್ಚಾ ಕಾರ್ಯಕ್ರಮದಲ್ಲಿ ಪಾಲಕರಿಗೆ ಪ್ರಧಾನಿ ಮೋದಿ ಸಲಹೆ

    ನಕಲಿ ‌ಮಾರ್ಕ್ಸ್ ಕಾರ್ಡ್ ತಯಾರಿಸುತ್ತಿದ್ದ ಬೃಹತ್ ಜಾಲ ಬೆಳಕಿಗೆ; 6800 ಪ್ರಮಾಣ ಪತ್ರ ಪತ್ತೆ!

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts