25.7 C
Bangalore
Sunday, December 15, 2019

ಕೃಷ್ಣಾ ತೀರದ ಗ್ರಾಮಗಳಲ್ಲಿ ಹೈ ಅಲರ್ಟ್

Latest News

ಗಾಂಧೀಜಿಯವರ ವಿಚಾರಧಾರೆ ದಾರಿದೀಪವಾಗಲಿ

ವಿಜಯಪುರ: ಗಾಂಧೀಜಿ ಅವರ ವಿಚಾರಧಾರೆಗಳು ನಮ್ಮ ಬದುಕಿಗೆ ದಾರಿ ದೀಪವಾಗಲಿ ಎಂದು ಧಾರವಾಡದ ಗಾಂಧಿ ಶಾಂತಿ ಪ್ರತಿಷ್ಠಾನದ ಅಧ್ಯಕ್ಷ ಡಾ.ಸಂಜೀವ ಕುಲಕರ್ಣಿ ಹೇಳಿದರು.ನಗರದ...

ಬಿಎಸ್‌ವೈ ವೈಟ್‌ಡ್ರೆಸ್ ರಮೇಶ ಬ್ಲ್ಯಾಕ್ ಮಾಡ್ತಾನೆ

ಗೋಕಾಕ: ಶಾಸಕ ರಮೇಶ ಜಾರಕಿಹೊಳಿ ಅವರು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಧರಿಸುವ ವೈಟ್ ಡ್ರೆಸ್‌ಅನ್ನು ಬ್ಲಾೃಕ್ ಮಾಡುತ್ತಾನೆ ಎಂದು ಶಾಸಕ ಸತೀಶ ಜಾರಕಿಹೊಳಿ...

ನಗ ನಗದುಗಳೊಂದಿಗೆ ಮಾವನ ಮನೆಯಿಂದ ರಾತ್ರೋರಾತ್ರಿ ಪರಾರಿಯಾದ ಮದುಮಗಳು; ಮದುಮಗ ಕಂಗಾಲು!

ಬದೌನ್​ (ಉತ್ತರಪ್ರದೇಶ): ಹೊಸದಾಗಿ ಮದುವೆಯಾಗಿದ್ದ ಮದುಮಗಳು ಗಂಡನ ಮನೆಯವರಿಗೆ ಆಹಾರದಲ್ಲಿ ಮತ್ತು ಬರುವ ಔಷಧ ಬೆರಸಿ ಮನೆಯಲ್ಲಿದ್ದ ನಗ ನಾಣ್ಯ ದೋಚಿ ಪರಾರಿಯಾಗಿದ್ದಾಳೆ. ಬದೌನ್​ ಜಿಲ್ಲೆಯ ಚೋಟಾ...

ಪೌರತ್ವ ತಿದ್ದುಪಡಿ ಕಾಯ್ದೆ ಶೇ.1000 ಪಟ್ಟು ಸರಿ: ಪ್ರತಿಭಟನೆಗಳಿಗೆ ಕಾಂಗ್ರೆಸ್​​ ಮಿತ್ರಪಕ್ಷಗಳು ಕಾರಣ

ನವದೆಹಲಿ: ಪೌರತ್ವ ತಿದ್ದುಪಡಿ ಕಾನೂನಿಗೆ ಸಂಬಂಧಿಸಿದಂತೆ ನಡೆಯುತ್ತಿರುವ ಪ್ರತಿಭಟನೆಗಳಿಗೆ ಕಾಂಗ್ರೆಸ್​ ಮತ್ತು ಅದರ ಮಿತ್ರ ಪಕ್ಷಗಳೇ ಕಾರಣ ಎಂದು ಪ್ರಧಾನಿ ನರೇಂದ್ರ ಮೋದಿ...

ಕಳ್ಳಬಟ್ಟಿ ಸಾರಾಯಿ ಮಾರಾಟಗಾರನ ಬಂಧನ

ರಾಯಬಾಗ: ತಾಲೂಕಿನ ಮೊರಬ ಗ್ರಾಮದಲ್ಲಿ ಕಳ್ಳಬಟ್ಟಿ ಸಾರಾಯಿ ಮಾರಾಟ ಮಾಡುತ್ತಿದ್ದ ವ್ಯಕ್ತಿಯ ಮೇಲೆ ಅಬಕಾರಿ ಅಧಿಕಾರಿಗಳು ದಾಳಿ ಮಾಡಿ, ಆರೋಪಿಯನ್ನು ಬಂಧಿಸಿ, ಆತನಿಂದ...

ಚಿಕ್ಕೋಡಿ: ಮಹಾರಾಷ್ಟ್ರದ ಮಹಾಬಳೇಶ್ವರ, ವಾರಣಾ ಸೇರಿ ಜಲಾನಯನ ಪ್ರದೇಶದಲ್ಲಿ ಸುರಿಯುತ್ತಿರುವ ಧಾರಾಕಾರ ಮಳೆಯ ಜತೆಗೆ ಕೊಯ್ನ ಜಲಾಶಯದಿಂದ 1.24 ಲಕ್ಷ ಕ್ಯೂಸೆಕ್‌ಗೂ ಹೆಚ್ಚು ನೀರು ಕೃಷ್ಣಾ ನದಿಗೆ ಹರಿದು ಬರುತ್ತಿದೆ. ಇದರಿಂದ ಕೃಷ್ಣಾ ತೀರದ ಗ್ರಾಮಗಳಲ್ಲಿ ಪ್ರವಾಹ ಭೀತಿ ತಲೆದೋರಿದೆ.

ಚಿಕ್ಕೋಡಿ ತಾಲೂಕಿನಲ್ಲಿ ಹರಿಯುವ ದೂಧಗಂಗಾ, ವೇದಗಂಗಾ ಹಾಗೂ ಕೃಷ್ಣಾ ನದಿಗೆ ಅಡ್ಡಲಾಗಿ ನಿರ್ಮಿಸಿರುವ ಕೆಳ ಹಂತದ 5 ಸೇತುವೆಗಳು ಮುಳುಗಡೆಯಾಗಿವೆ. ಸಂಚಾರ ಸಂಪೂರ್ಣ ಬಂದ್ ಆಗಿದೆ. ಹೀಗಾಗಿ ನದಿ

ತೀರದ ಗ್ರಾಮಗಳಲ್ಲಿ ಜಿಲ್ಲಾಡಳಿತ ಹೈ ಅಲರ್ಟ್ ಘೋಷಿಸಿದೆ.ನದಿ ತೀರದ ಜನರು ಸುರಕ್ಷಿತ ಸ್ಥಳಗಳಿಗೆ ಹೋಗುವಂತೆ ಜಿಲ್ಲಾಡಳಿತದಿಂದ ಸೂಚನೆ ನೀಡಿದ್ದಾರೆ. ಕಲ್ಲೋಳ- ಯಡೂರ, ಕಾರದಗಾ- ಭೋಜ, ಭೋಜವಾಡಿ-ಕುನ್ನೂರ, ಜತ್ರಾಟ-ಭೀವಶಿ, ಮಲಿಕವಾಡ-ದತ್ತವಾಡ ಸೇತುವೆಗಳು ಸಂಪರ್ಕ ಕಡಿತಗೊಂಡಿದೆ.
ಎಸಿ, ತಹಸೀಲ್ದಾರ್ ಭೇಟಿ: ಚಿಕ್ಕೋಡಿ ಉಪವಿಭಾಗಾಧಿಕಾರಿ ರವೀಂದ್ರ ಕರಲಿಂಗನ್ನವರ ಹಾಗೂ ತಹಸೀಲ್ದಾರ ಸಂತೋಷಕುಮಾರ ಬಿರಾದಾರ ಚಿಕ್ಕೋಡಿ ತಾಲೂಕಿನ ಕಲ್ಲೋಳ ಬ್ಯಾರೇಜ ಬಳಿಯ ನದಿ ತೀರಕ್ಕೆ ಭೇಟಿ ನೀಡಿ ಪರಿಸ್ಥಿತಿ ಅವಲೋಕಿಸಿದರು.

ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಉಪವಿಭಾಗಾಧಿಕಾರಿ ರವೀಂದ್ರ ಕರಲಿಂಗಣ್ಣವರ, ಈಗಾಗಲೇ ಕೃಷ್ಣಾ ನದಿಗೆ 1 ಲಕ್ಷ 24 ಸಾವಿರ ಕ್ಯೂಸೆಕ್ ನೀರು ಮಹಾರಾಷ್ಟ್ರದ ವಿವಿಧ ಜಲಾನಯನ ಪ್ರದೇಶಗಳಿಂದ ಹರಿದು ಬರುತ್ತಿದೆ. ಇನ್ನು ಹೆಚ್ಚಿನ ಪ್ರಮಾಣದಲ್ಲಿ ನೀರು ಹರಿದು ಬರುವ ಸಾಧ್ಯತೆ ಇದೆ. ಮುಂಜಾಗ್ರತಾ ಕ್ರಮವಾಗಿ 3 ಎಸ್‌ಡಿಆರ್‌ಎಫ್, 3 ಎನ್‌ಡಿಆರ್‌ಎಫ್ ತುಕಡಿ ಬಂದಿವೆ. 165 ಕ್ಕೂ ಹೆಚ್ಚು ಅಗ್ನಿಶಾಮಕ ದಳದ ಸಿಬ್ಬಂದಿ ನದಿ ತೀರದ ಗ್ರಾಮಗಳಲ್ಲಿ ಎಲ್ಲ ತಂಡಗಳನ್ನು ಸಹ ನಿಯೋಜನೆ ಮಾಡಲಾಗಿದೆ.

ಮಹಾರಾಷ್ಟ್ರದಲ್ಲಿ ಮಳೆ ಪ್ರಮಾಣ ಸ್ವಲ್ಪ ಮಟ್ಟಿಗೆ ಕಡಿಮೆಯಾಗಿದೆ. ಜತೆಗೆ ಆಲಮಟ್ಟಿಯಿಂದ ಕೃಷ್ಣೆಗೆ ಹರಿದು ಬರುವ ನೀರಿನ ಪ್ರಮಾಣ ನೋಡಿಕೊಂಡು ನೀರು ಹೊರಬಿಡುತ್ತಿರುವುದರಿಂದ ಶನಿವಾರದ ವೇಳೆಗೆ ನದಿ ಹರಿವು ಸಮತೋಲನ ಕಾಯ್ದುಕೊಳ್ಳುವ ನಿರೀಕ್ಷೆ ಇದೆ. ಆದ್ದರಿಂದ ನದಿ ತೀರದ ಜನರು ಆತಂಕ ಪಡುವ ಅಗತ್ಯವಿಲ್ಲ. ನೀರಿನ ಹರಿವಿನ ಪ್ರಮಾಣವನ್ನು ನೋಡಿಕೊಂಡು ಸುರಕ್ಷಿತ ಸ್ಥಳಗಳಿಗೆ ಹೋಗುವುದು ಒಳ್ಳೆಯದು ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಮಹಾರಾಷ್ಟ್ರದ ಮಳೆ ವಿವರ

ಕೋಯ್ನ- 86 ಮಿ.ಮೀ.,
ನವಜಾ- 121 ಮಿ.ಮೀ,
ಮಹಾಬಲೇಶ್ವರ- 75 ಮಿ.ಮೀ. ನಷ್ಟು ಮಳೆಯಾಗಿದೆ.

Stay connected

278,751FansLike
588FollowersFollow
628,000SubscribersSubscribe

ವಿಡಿಯೋ ನ್ಯೂಸ್

VIDEO| ಕ್ರಿಕೆಟ್​​ ಮೈದಾನಕ್ಕೆ ಎಂಟ್ರಿ ಕೊಟ್ಟು ಪಂದ್ಯವನ್ನೇ ಕೆಲಕಾಲ ನಿಲ್ಲಿಸಿದ...

ಹೈದರಾಬಾದ್​: ಮಳೆಯ ಕಾರಣದಿಂದಾಗಿ ಕ್ರಿಕೆಟ್​ ಪಂದ್ಯಗಳು ಕೆಲಕಾಲ ಸ್ಥಗಿತಗೊಳ್ಳುವುದನ್ನು ನಾವು ನೋಡಿದ್ದೇವೆ. ಆದರೆ, ಹಾವಿನಿಂದಾಗಿ ಪಂದ್ಯ ಕೆಲಕಾಲ ನಿಲ್ಲುವುದನ್ನು ಎಂದಾದರೂ ನೋಡಿದ್ದೀರಾ? ಇಲ್ಲ ಎಂದಾದಲ್ಲಿ ನಾವು ತೋರಿಸುತ್ತೇವೆ ನೋಡಿ.... ಡಿಸೆಂಬರ್​ 9ರ...

VIDEO: ನಮಾಮಿ ಗಂಗಾ ಯೋಜನೆ ಪ್ರಗತಿ ಪರಿಶೀಲನೆ ಮುಗಿಸಿ ವಾಪಸ್​...

ಲಖನೌ: ಪ್ರಧಾನಿ ನರೇಂದ್ರ ಮೋದಿಯವರು ನ್ಯಾಷನಲ್ ಗಂಗಾ ಕೌನ್ಸಿಲ್​ನ ಮೊದಲ ಸಭೆಯನ್ನು ಇಂದು ಕಾನ್ಪುರದಲ್ಲಿ ನಡೆಸಿದ್ದಾರೆ. ಸಭೆಯಲ್ಲಿ ನಮಾಮಿ ಗಂಗಾ ಯೋಜನೆಯ ಮುಂದಿನ ಹಂತಗಳು, ನದಿ ಸ್ವಚ್ಛತೆಗೆ ತೆಗೆದುಕೊಳ್ಳಬೇಕಾದ ಕ್ರಮಗಳ ಬಗ್ಗೆ ನರೇಂದ್ರ ಮೋದಿ...

ವಿಡಿಯೋ | ಪತ್ನಿಗಾಗಿ ಆತ ಮಾಡಿದ ಆ ಕೆಲಸಕ್ಕೆ ನೆಟ್ಟಿಗರ...

ಈತ ತನ್ನ ಮಡದಿಗಾಗಿ ಮಾಡಿದ ಆ ಕೆಲಸದಿಂದ ಸಾಮಾಜಿಕ ಜಾಲತಾಣಗಳಲ್ಲಿ ಅಪಾರ ಪ್ರಶಂಸೆ ಪಡೆದಿದ್ದಾನೆ. ಚೀನಾದ ಹೆಗಾಂಗ್​ನ ಪೊಲೀಸರು ಇಂತಹ ವೀಡಿಯೊಂದನ್ನು ಹಂಚಿಕೊಂಡಿದ್ದಾರೆ. ಈ ವಿಡಿಯೋ ವೀಕ್ಷಿಸಿದ ಸಾವಿರಾರು ಮಂದಿ ಅದಕ್ಕೆ ಮೆಚ್ಚುಗೆ ಸೂಚಿಸಿದ್ದಾರೆ. ಆ...

VIDEO: ಕಾನ್ಪುರದಲ್ಲಿ ನ್ಯಾಷನಲ್​ ಗಂಗಾ ಕೌನ್ಸಿಲ್​ ಮೊದಲ ಸಭೆ: ಅಟಲ್​...

ಕಾನ್ಪುರ: ಪ್ರಧಾನಿ ನರೇಂದ್ರ ಮೋದಿಯವರು ಇಂದು ಕಾನ್ಪುರಕ್ಕೆ ತೆರಳಿದ್ದು ನ್ಯಾಷನಲ್​ ಗಂಗಾ ಕೌನ್ಸಿಲ್​ನ ಮೊದಲ ಸಭೆ ನಡೆಸಿದ್ದಾರೆ. ಉತ್ತರ ಪ್ರದೇಶದ ಕಾನ್ಪುರಕ್ಕೆ ತಲುಪಿದ ಅವರನ್ನು ಅಲ್ಲಿನ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್​ ಅವರು ಸ್ವಾಗತಿಸಿದರು. ಬಳಿಕ...

ಮನೆಗೆಲಸದ ಯುವತಿ ಮೇಲೆ ಮೌಲ್ವಿಯಿಂದ ಅತ್ಯಾಚಾರ: ಐರನ್​ ಬಾಕ್ಸ್​ನಿಂದ ಮೈಯೆಲ್ಲ...

ಬೆಂಗಳೂರು: ಮನೆಯ ಕೆಲಸಕ್ಕಿದ್ದ ಯುವತಿಯ ಮೇಲೆ ಅತ್ಯಾಚಾರ ಎಸಗಿ, ಐರನ್​ ಬಾಕ್ಸ್​ನಿಂದ ಮೈಯೆಲ್ಲಾ ಸುಟ್ಟು ಮೌಲ್ವಿಯೊಬ್ಬ ವಿಕೃತ ಮೆರೆದಿರುವ ಆರೋಪ ರಾಜ್ಯ ರಾಜಧಾನಿಯಲ್ಲಿ ಕೇಳಿಬಂದಿದೆ. ನಗರದ ಕೋರಮಂಗಲದಲ್ಲಿ ಪೈಶಾಚಿಕ ಕೃತ್ಯ ನಡೆದಿದೆ...

ಕಾಂಗ್ರೆಸ್​ನಿಂದ ಭಾರತ್​ ಬಚಾವೋ ಬೃಹತ್​ ರ‍್ಯಾಲಿ: ಬಿಜೆಪಿ ವಿರುದ್ಧ ಹರಿಹಾಯ್ದ...

ನವದೆಹಲಿ: ಕೇಂದ್ರ ಸರ್ಕಾರ ಜಾರಿಗೆ ತಂದಿರುವ ಹಲವು ಕ್ರಮಗಳು ಹಾಗೂ ದೇಶದಲ್ಲಿ ಕುಸಿಯುತ್ತಿರುವ ಅರ್ಥ ವ್ಯವಸ್ಥೆ ಹಾಗೂ ಉದ್ಯೋಗಾವಕಾಶಗಳ ಬಗ್ಗೆ ಜನರಿಗೆ ತಿಳಿಸಲು ಕಾಂಗ್ರೆಸ್,​ ರಾಷ್ಟ್ರ ರಾಜಧಾನಿಯಲ್ಲಿ "ಭಾರತ್​ ಬಚಾವೋ"...