More

    ಕೃಷ್ಣಾ ಕಣಿವೆಯಲ್ಲಿ ತಗ್ಗಿದ ಮಳೆ ಅಬ್ಬರ

    ಚಿಕ್ಕೋಡಿ: ಮಹಾರಾಷ್ಟ್ರದಲ್ಲಿ ಕಳೆದೆರಡು ದಿನಗಳಿಂದ ವರುಣನ ಅಬ್ಬರ ತಗ್ಗಿದ್ದರಿಂದ ಚಿಕ್ಕೋಡಿ ತಾಲೂಕಿನಲ್ಲಿ ಕೃಷ್ಣಾ ಸೇರಿ ಉಪನದಿಗಳಾದ ವೇದಗಂಗಾ, ದೂಧಗಂಗಾ ನದಿಯ ಒಳಹರಿವು ಕಡಿಮೆಯಾಗಿದೆ. ಹೀಗಾಗಿ ಜಲಾವೃತಗೊಂಡಿದ್ದ ಸೇತುವೆಗಳ ಪೈಕಿ 2 ಸೇತುವೆಗಳು ಸಂಚಾರಕ್ಕೆ ಮುಕ್ತವಾಗಿವೆ.

    ದೂಧಗಂಗಾ ನದಿಯಿಂದ 25,344 ಕ್ಯೂಸೆಕ್ ಹಾಗೂ ರಾಜಾಪುರ ಬ್ಯಾರೇಜ್‌ನಿಂದ 1,23,750 ಕ್ಯೂಸೆಕ್ ಸೇರಿ ಕೃಷ್ಣಾ ನದಿಗೆ 1,49,094 ಕ್ಯೂಸೆಕ್ ನೀರು ಹರಿದು ಬರುತ್ತಿದೆ. ನದಿ ತೀರದ ಜನರು ಮಳೆ ಹಾಗೂ ನದಿಯಲ್ಲಿ ನೀರಿನ ಹರಿವು ಪ್ರಮಾಣ ಕಡಿಮೆಯಾಗಿದೆ ಎಂದು ನಿರ್ಲಕ್ಷಿಸದೆ ಜಾಗೃತಿ ವಹಿಸಬೇಕು. ಮಹಾರಾಷ್ಟ್ರದ ಜಲಾಶಯಗಳು ಈಗಾಗಲೇ ಭರ್ತಿಯಾಗಿದ್ದು, ಯಾವುದೇ ಕ್ಷಣದಲ್ಲಾದರೂ ನೀರು ಬಿಡಬಹುದು. ಹೀಗಾಗಿ ಜನರು ಜಾಗೃತಿಯಿಂದ ಇರಬೇಕು ಎಂದು ತಹಸೀಲ್ದಾರ್ ಸುಭಾಷ ಸಂಪಗಾಂವಿ ಸಲಹೆ ನೀಡಿದ್ದಾರೆ.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts