More

    ಕೃಷ್ಣಾ ತೀರದಲ್ಲಿ ಕ್ಷೀಣಿಸಿದ ವರುಣನ ಅಬ್ಬರ

    ಚಿಕ್ಕೋಡಿ: ಮಹಾರಾಷ್ಟ್ರದಲ್ಲಿ ಮಳೆ ಪ್ರಮಾಣ ಕಡಿಮೆಯಾಗಿರುವುದರಿಂದ ಕೃಷ್ಣಾ ನದಿಗೆ ಹರಿದು ಬರುವ ನೀರಿನ ಮಟ್ಟದಲ್ಲಿ ಒಂದು ಅಡಿಗೂ ಹೆಚ್ಚು ಕಡಿಮೆಯಾಗಿದ್ದು, ಸದಲಗಾ-ಬೋರಗಾಂವ ಸೇತುವೆ ಭಾನು ವಾರದಿಂದ ಸಂಚಾರಕ್ಕೆ ಮುಕ್ತವಾಗಿದೆ.

    ಕೃಷ್ಣಾ ನದಿಗೆ ಪ್ರಸಕ್ತವಾಗಿ 1,51,504 ಕ್ಯೂಸೆಕ್ ನೀರು ಹರಿದು ಬರುತ್ತಿದೆ. ಹಿಪ್ಪರಗಿ ಬ್ಯಾರೇಜ್ ನಿಂದ 1,80,000 ಕ್ಯೂಸೆಕ್ ಹಾಗೂ ಆಲಮಟ್ಟಿ ಜಲಾಶ ದಿಂದ 1,20,000 ಕ್ಯೂಸೆಕ್ ನೀರು ಹೊರ ಬಿಡಲಾಗುತ್ತಿದೆ. ಕೃಷ್ಣಾ ನದಿಗೆ ಯಡೂರ ಬಳಿ ನಿರ್ಮಿಸಿರುವ ಯಡೂರ-ಕಲ್ಲೋಳ, ದೂಧಗಂಗಾ ನದಿಗೆ ಮಲಿಕವಾಡ ಗ್ರಾಮದ ಬಳಿ ನಿರ್ಮಿಸಿರುವ ಮಲಿಕವಾಡ-ದತ್ತವಾಡ ಸೇತುವೆ ಮತ್ತು ವೇದಗಂಗಾ ನದಿಗೆ ಅಡ್ಡಲಾಗಿರುವ ಸಿದ್ನಾಳ-ಹುನ್ನರಗಿ, ಕಾರದಗಾ-ಬೋಜ, ಬೋಜವಾಡಿ-ಕುನ್ನೂರ, ಜತ್ರಾಟ-ಭೀವಶಿ, ಸಿದ್ನಾಳ-ಅಕ್ಕೋಳ ಸೇರಿ ಕೆಳಹಂತದ 7 ಸೇತುವೆಗಳು ಇನ್ನೂ ಜಲಾವೃತ ಸ್ಥಿತಿಯಲ್ಲೇ ಇವೆ.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts