More

    ಕೃಷ್ಣಾ ನದಿಗೆ 47ಸಾವಿರ ಕ್ಯೂಸೆಕ್ ನೀರು

    ದೇವದುರ್ಗ: ಕೃಷ್ಣಾ ನದಿಯ ಮೇಲ್ಭಾಗದಲ್ಲಿ ಉತ್ತಮ ಮಳೆಯಾಗುತ್ತಿರುವ ಕಾರಣ ನಾರಾಯಣಪುರದ ಬಸವಸಾಗರ ಜಲಾಶಯಕ್ಕೆ ಅಪಾರ ಪ್ರಮಾಣದಲ್ಲಿ ನೀರು ಹರಿದು ಬರುತ್ತಿದ್ದು, ಮುಂಜಾಗ್ರತಾ ಕ್ರಮವಾಗಿ ಡ್ಯಾಂನಿಂದ ಕೃಷ್ಣಾ ನದಿಗೆ ಬುಧುವಾರ ಸಂಜೆಯಿಂದ 47ಸಾವಿರ ಕ್ಯೂಸೆಕ್ ನೀರು ಹರಿಬಿಡಲಾಗುತ್ತಿದೆ.

    ಒಂದು ವಾರದಿಂದ ನದಿ ಮೇಲ್ಭಾಗದಲ್ಲಿ ಉತ್ತಮ ಮಳೆಯಾಗುತ್ತಿರುವುದರ ಜತೆಗೆ ಆಲಮಟ್ಟಿ ಜಲಾಶಯದಿಂದಲೂ ಒಳಹರಿವು ಹೆಚ್ಚಾಗಿದೆ. ಹೀಗಾಗಿ ನದಿಗೆ ಹೆಚ್ಚಿನ ಪ್ರಮಾಣದಲ್ಲಿ ನೀರು ಹರಿಸಲಾಗುತ್ತಿದೆ. ನದಿ ತೀರದ ವ್ಯಾಪ್ತಿಯ ಜನ ಎಚ್ಚರಿಕೆಯಿಂದ ಇರಲು ಕೆಬಿಜೆಎನ್‌ಎಲ್ ತಿಳಿಸಿದೆ.

    33ಟಿಎಂಸಿ ಅಡಿ ಸಾಮರ್ಥ್ಯದ ಬಸವ ಸಾಗರ ಜಲಾಶಯದಲ್ಲಿ ಸದ್ಯ 30ಟಿಎಂಸಿ ಅಡಿ ನೀರಿನ ಸಂಗ್ರಹವಾಗಿದ್ದು, ಆಲಮಟ್ಟಿ ಜಲಾಶಯದಿಂದ 15ಸಾವಿರ ಕ್ಯೂಸೆಕ್ ನೀರು ಒಳಬರುತ್ತಿದೆ. ಇದಕ್ಕೆ ಮಳೆ ನೀರು ಕೂಡ ಸೇರಿಕೊಳ್ಳುತ್ತಿದೆ. ಇದರಿಂದಾಗಿ ತಾಲೂಕಿನ ಹೂವಿನಹೆಡಗಿ ಗ್ರಾಮದ ಶ್ರೀಗಡ್ಡೆಗೂಳಿ ಬಸವೇಶ್ವರ ದೇವಸ್ಥಾನ, ವೀರಗೋಟ, ಕೊಪ್ಪರದ ಶ್ರೀ ಲಕ್ಷ್ಮಿನರಸಿಂಹ ದೇವಸ್ಥಾನ, ಗೂಗಲ್‌ನ ಶ್ರೀ ಅಲ್ಲಮಪ್ರಭು ದೇವಸ್ಥಾನಗಳ ಹತ್ತಿರಕ್ಕೆ ನೀರು ಬಂದು ನಿಂತಿದೆ.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts