More

    ಅಪ್ಪ-ಮಕ್ಕಳಿಂದ ರಾಜ್ಯ ಬಿಜೆಪಿಯನ್ನು ಮುಕ್ತಗೊಳಿಸುವುದೇ ನನ್ನ ಪ್ರಣಾಳಿಕೆ: ಕೆ.ಎಸ್. ಈಶ್ವರಪ್ಪ

    ಶಿವಮೊಗ್ಗ: ಪುತ್ರನಿಗೆ ಹಾವೇರಿ ಟಿಕೆಟ್​ ಕೈತಪ್ಪಿದ್ದಕ್ಕೆ ಸ್ವಪಕ್ಷೀಯರ ವಿರುದ್ಧವೇ ಅಸಮಾಧಾನಗೊಂಡು ಶಿವಮೊಗ್ಗ ಲೋಕಸಭೆ ಕ್ಷೇತ್ರದಿಂ ಬಂಡಾಯ ಅಭ್ಯರ್ಥಿಯಾಗಿ ಕಣಕ್ಕಿಳಿದಿರುವ ಮಾಜಿ ಸಚಿವ ಕೆ.ಎಸ್. ಈಶ್ವರಪ್ಪ ಮತ್ತೊಮ್ಮೆ ಬಿ.ಎಸ್​. ಯಡಿಯೂರಪ್ಪನವರ ವಿರುದ್ಧ ಗುಡುಗಿದ್ದು, ಅಪ್ಪ-ಮಕ್ಕಳಿಂದ ರಾಜ್ಯ ಬಿಜೆಪಿಯನ್ನು ಮುಕ್ತಗೊಳಿಸುವುದೇ ನನ್ನ ಚುನಾವಣಾ ಪ್ರಣಾಳಿಕೆ ಎಂದು ಹೇಳಿದ್ದಾರೆ.

    ಈ ಬಗ್ಗೆ ಸಾಮಾಜಿಕ ಜಾಲತಾಣ ಎಕ್ಸ್​ನಲ್ಲಿ ಬರೆದುಕೊಂಡಿರುವ ಅವರು, ರಾಜ್ಯ ಬಿಜೆಪಿ ಘಟಕದ ಅಧ್ಯಕ್ಷರಾದ ವಿಜಯೇಂದ್ರ ಅವರೇ ಅಪಪ್ರಚಾರ ಮಾಡಿ ರಾಷ್ಟ್ರಭಕ್ತರಲ್ಲಿ ಗೊಂದಲ ಮೂಡಿಸುವುದನ್ನು ನಿಲ್ಲಿಸಿ, ನರೇಂದ್ರ ಮೋದಿ, ಅಮಿತ್​ ಶಾ ಅಥವಾ ಬೇರೆ ಯಾರೇ ಹೇಳಿದರೂ ನಾನು ಸ್ಪರ್ಧೆಯಿಂದ ಹಿಂದೆ ಸರಿಯುವುದಿಲ್ಲ. ಅಲ್ಲದೇ ಹಿಂದುತ್ವದ ಉಳಿವು, ಪಕ್ಷದ ಶುದ್ಧೀಕರಣ, ಅಪ್ಪ-ಮಕ್ಕಳಿಂದ ರಾಜ್ಯ ಬಿಜೆಪಿಯನ್ನು ಮುಕ್ತಗೊಳಿಸುವುದೇ ನನ್ನ ಚುನಾವಣಾ ಪ್ರಣಾಳಿಕೆ ಎಂದು ಟ್ವೀಟ್ ಮಾಡಿದ್ದಾರೆ.

    ಇದನ್ನೂ ಓದಿ: ಸತತ ಸೋಲಿನ ನಡುವೆಯೇ ಆರ್​ಸಿಬಿಗೆ ಮತ್ತೊಂದು ಶಾಕ್​; ಗಾಯಕ್ಕೆ ತುತ್ತಾದ ಸ್ಟಾರ್​ ಆಟಗಾರ

    ಇನ್ನೂ ಈಶ್ವರಪ್ಪ ಆರೋಪಕ್ಕೆ ಪ್ರತಿಕ್ರಿಯಿಸಿದ ಬಿ.ವೈ. ರಾಘವೇಂದ್ರ, ಈಶ್ವರಪ್ಪನವುರ ಜನರನ್ನು ತಪ್ಪು ದಾರಿಗೆ ಎಳೆಯುತ್ತಿದ್ದಾರೆ. ಅವರಿಗೆ ನಮ್ಮ ಕುಟುಂಬದಿಂದ ಯಾವುದೇ ಅನ್ಯಾಯವಾಗಿಲ್ಲ. ರಾಘವೇಂದ್ರನನ್ನು ಗೆಲ್ಲಿಸಿ ಎಂದು ಪ್ರಧಾನಿ ಮೋದಿ ಅವರೇ ಪ್ರಚಾರ ಮಾಡಿದ್ದಾರೆ. ಜನರು ತಮ್ಮ ಮತದ ಮೂಲಕ ಅವರಿಗೆ ಉತ್ತರ ಕೊಡಲಿದ್ದಾರೆ.

    ಮಾಜಿ ಸಚಿವ ಕೆ.ಎಸ್​.ಈಶ್ವರಪ್ಪನವರ ಪುತ್ರ ಕಾಂತೇಶ್​ಗೆ ಟಿಕೆಟ್​ ಸಿಕ್ಕಿಲ್ಲ. ಹೀಗಾಗಿ ನಮ್ಮ ಕುಟುಂಬದ ಬಗ್ಗೆ ಈಶ್ವರಪ್ಪ ಟೀಕಾ ಪ್ರಹಾರ ಮಾಡುತ್ತಿದ್ದಾರೆ. ಕಾಂತೇಶ್​ಗೆ ಟಿಕೆಟ್ ಕೊಡದಿರುವುದು ಹೈಕಮಾಂಡ್ ನಿರ್ಧಾರ. ಹೈಕಮಾಂಡ್ ತೀರ್ಮಾನವನ್ನು ಈಶ್ವರಪ್ಪನವರು ಗೌರವಿಸಬೇಕಿತ್ತು. ಅದರ ಬದಲು ನಮ್ಮ ಕುಟುಂಬದ ವಿರುದ್ಧ ವೈಯಕ್ತಿಕ ಟೀಕೆ ಮಾಡುತ್ತಿದ್ದಾರೆ. ಈಶ್ವರಪ್ಪ ಏನೇ ಮಾತನಾಡಿದರೂ ಆಶೀರ್ವಾದ ಅಂದುಕೊಳ್ಳುತ್ತೇನೆ ಎಂದು ರಾಘವೇಂದ್ರ ತಿರುಗೇಟು ನೀಡಿದ್ದಾರೆ.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts