More

    100 ದಿನದಲ್ಲಿ 23 ಲಕ್ಷ ಮನೆಗಳಿಗೆ ನೀರು

    ಶಿವಮೊಗ್ಗ: ಕೇಂದ್ರ ಸರ್ಕಾರದ ಜಲಜೀವನ ಮಿಷನ್ ಮೂಲಕ ರಾಜ್ಯದ ಗ್ರಾಮೀಣ ಪ್ರದೇಶದ ಪ್ರತಿ ಮನೆಗೂ ನಲ್ಲಿ ಮೂಲಕ ಶುದ್ಧ ಕುಡಿಯುವ ನೀರು ಒದಗಿಸಲಾಗುವುದು. ಇನ್ನು 100 ದಿನಗಳಲ್ಲಿ 23.57 ಲಕ್ಷ ಮನೆಗಳಿಗೆ ನೀರು ಒದಗಿಸುವ ಗುರಿ ಹೊಂದಲಾಗಿದೆ ಎಂದು ಗ್ರಾಮೀಣಾಭಿವೃದ್ಧಿ ಹಾಗೂ ಪಂಚಾಯತ್​ರಾಜ್ ಸಚಿವ ಕೆ.ಎಸ್.ಈಶ್ವರಪ್ಪ ತಿಳಿಸಿದರು.

    ಜಲಜೀವನ ಮಿಷನ್​ಗೆ ಸಂಬಂಧಿಸಿ ಕೇಂದ್ರ ಸರ್ಕಾರದ ಅಧಿಕಾರಿಗಳೊಂದಿಗೆ ಮಂಗಳವಾರ ವಿಡಿಯೋ ಸಂವಾದ ನಡೆಸಿದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಸಚಿವರು, ಯೋಜನೆಯ ವ್ಯವಸ್ಥಿತ ಅನುಷ್ಠಾನ ಕಾರ್ಯ ಪ್ರಗತಿಯಲ್ಲಿದೆ ಎಂದು ತಿಳಿಸಿದರು.

    ಪ್ರಸ್ತುತ ರಾಜ್ಯದ ಗ್ರಾಮೀಣ ಪ್ರದೇಶದಲ್ಲಿನ 24.72 ಲಕ್ಷ ಮನೆಗಳಿಗೆ ನಲ್ಲಿಗಳ ಮೂಲಕ ಶುದ್ಧ ನೀರನ್ನು ಪೂರೈಸಲಾಗುತ್ತಿದೆ. ಈ ಯೋಜನೆಯ ಅನುಷ್ಠಾನಕ್ಕೆ ಕೇಂದ್ರದಿಂದ 4,093 ಕೋಟಿ ರೂ. ಹಾಗೂ ರಾಜ್ಯದಿಂದ 3,982 ಕೋಟಿ ರೂ. ಖರ್ಚು ಮಾಡಲಾಗುತ್ತಿದೆ. ನಿಗದಿತ ಸಮಯದಲ್ಲಿ ಯೋಜನೆ ಅನುಷ್ಠಾನಗೊಳ್ಳುವ ವಿಶ್ವಾಸವಿದೆ ಎಂದರು.

    ಗ್ರಾಮೀಣಾಭಿವೃದ್ಧಿ ಪಂಚಾಯತ್​ರಾಜ್ ಇಲಾಖ ಪ್ರಧಾನ ಕಾರ್ಯದರ್ಶಿ ಅತೀಕ್ ಅಹ್ಮದ್, ಸಚಿವರ ವಿಶೇಷ ಕರ್ತವ್ಯಾಧಿಕಾರಿ ಜಯರಾಮ್ ಇತರರಿದ್ದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts