More

    ಸ್ವ ಇಚ್ಛೆಯಿಂದ ಚುನಾವಣಾ ರಾಜಕೀಯಕ್ಕೆ ನಿವೃತ್ತಿ ಘೋಷಿಸಿದ್ದೇನೆ: ಕೆ.ಎಸ್.ಈಶ್ವರಪ್ಪ

    ಶಿವಮೊಗ್ಗ: ಚುನಾವಣಾ ರಾಜಕೀಯಕ್ಕೆ ನಿವೃತ್ತಿ ಘೋಷಣೆ ಮಾಡಿ ರಾಷ್ಟ್ರಾಧ್ಯಕ್ಷ ಜೆಪಿ ನಡ್ಡಾ ಅವರಿಗೆ ಪತ್ರ ಬರೆದ ಬೆನ್ನಲ್ಲೇ ಶಿವಮೊಗ್ಗದಲ್ಲಿ ಮಾಜಿ ಸಚಿವ ಕೆ.ಎಸ್.ಈಶ್ವರಪ್ಪ ಮಾಧ್ಯಮಗಳ ಜತೆ ಮಾತನಾಡಿದರು.

    ಸುದ್ದಿಗೋಷ್ಟಿಯಲ್ಲಿ ಮಾತನಾಡಿದ ಅವರು, ಯಾರ ಒತ್ತಡಕ್ಕೆ ಮಣಿಯದೇ ನಾನು ಸ್ವ ಇಚ್ಛೆಯಿಂದ ಚುನಾವಣಾ ರಾಜಕೀಯಕ್ಕೆ ನಿವೃತ್ತಿ ಹೇಳಿದ್ದೇನೆ. ರಾಜೀನಾಮೆ ಬಗ್ಗೆ ಬೆಂಗಳೂರಿನ ಸಭೆಯ ವೇಳೆಯೂ ಪ್ರಸ್ತಾಪ ಮಾಡಿದ್ದೆ. ಸಿಎಂ, ಮಾಜಿ ಸಿಎಂ, ರಾಜ್ಯಾದ್ಯಕ್ಷರ ಗಮನಕ್ಕೂ ತಂದಿದ್ದೇನೆ. ಆದರೆ ಅವರು ಯಾರು ಒಪ್ಪಿರಲಿಲ್ಲ. ಅದಕ್ಕಾಗಿಯೇ ರಾಷ್ಟ್ರೀಯ ಅಧ್ಯಕ್ಷರಿಗೆ ಪತ್ರ ಬರೆದಿದ್ದೇನೆ ಎಂದಿದ್ದಾರೆ.

    ಇದನ್ನೂ ಓದಿ:  ಚುನಾವಣಾ ರಾಜಕೀಯ ನಿವೃತ್ತಿ ಘೋಷಿಸಿದ ಕೆ.ಎಸ್. ಈಶ್ವರಪ್ಪ
    ರಾಜ್ಯ ಚುನಾವಣಾ ಸಮಿತಿಯ ಗಮನಕ್ಕೆ ತಂದೆ. ನನ್ನ ಮಾತಿಗೇ ಯಾರು ಗಮನ ಕೊಡಲಿಲ್ಲ. ಚುನಾವಣಾ ನಿವೃತ್ತಿ ಘೋಷಣೆ ಮಾಡಿ ಇಂದು ಬೆಳಿಗ್ಗೆ ರಾಷ್ಟ್ರೀಯ ಅದ್ಯಕ್ಷರಿಗೆ ಪತ್ರ ಬರೆದಿದ್ದೇನೆ. ರಾಜ್ಯದಲ್ಲಿ ಪಕ್ಷ ಸಂಘಟನೆಗೆ ಶಕ್ತಿ ತುಂಬಬೇಕು. ರಾಜ್ಯದಲ್ಲಿ ಒಮ್ಮೆಯೂ ಬಹುಮತ ಬಂದಿಲ್ಲ. ಈ ಬಾರಿ ಪೂರ್ಣ ಬಹುಮತದ ಸರ್ಕಾರ ಬರಬೇಕು. ರಾಜ್ಯದ ಕಾರ್ಯಕರ್ತರಿಗೆ ಕರೆ ಕೋಡುತ್ತೇನೆ. ಪೂರ್ಣ ಬಹುಮತದ ಸರ್ಕಾರ ಬರಬೇಕೆಂದು ಹೇಳಿದ್ದಾರೆ.

    ಕೆ.ಎಸ್.ಈಶ್ವರಪ್ಪ ಚುನಾವಣಾ ರಾಜಕೀಯದಿಂದ ನಿವೃತ್ತಿ ವಿಚಾರ ತಿಳಿಯುತ್ತಿದ್ದಂತೆ ಈಶ್ವರಪ್ಪ ಅವರ ನಿವಾಸ ಬಳಿ ಪಕ್ಷದ ಮುಖಂಡರು -ಕಾರ್ಯಕರ್ತರು‌ ಜಮಾಯಿಸಿದ್ದಾರೆ. ಬಿಜೆಪಿ ಹೈಕಮಾಂಡ್ ವಿರುದ್ಧ ಕಾರ್ಯಕರ್ತರು ಆಕ್ರೋಶ ಹೊರಹಾಕಿದ್ದಾರೆ.

    ಈಶ್ವರಪ್ಪಗೆ ಟಿಕೆಟ್ ನೀಡುವಂತೆ ಕಾರ್ಯಕರ್ತರ ಪಟ್ಟು ಹಿಡಿದಿದ್ದಾರೆ. ಬೇಕೇ.. ಬೇಕು ನ್ಯಾಯ ಬೇಕು ಎಂದು ಕಾರ್ಯಕರ್ತರು ಘೋಷಣೆ ಕೂಗುತ್ತಿದ್ದಾರೆ. ಇದೇ ವೇಳೆ ಈಶ್ವರಪ್ಪ ಪುತ್ರ ಕೆ.ಇ.ಕಾಂತೇಶ್ ಹೊತ್ತು ಮೆರೆಸಿದ ಕಾರ್ಯಕರ್ತರು. ಒಂದು ವೇಳೆ ಈಶ್ವರಪ್ಪ ಅವರಿಗೆ ಟಿಕೆಟ್ ನೀಡಿದ್ದಲ್ಲಿ ಅವರ ಮಗ ಕಾಂತೇಶ್​ಗೆ ಟಿಕೆಟ್ ನೀಡುವಂತೆ ಆಗ್ರಹಿಸಿದ್ದಾರೆ.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts