More

    ಶೋಭಾ ವಿರುದ್ಧ ಆದಷ್ಟು ಗೋಬ್ಯಾಕ್ ಬೇರೆ ಎಲ್ಲಿಯೂ ಆಗಿಲ್ಲ: ಕೆ.ಎಸ್. ಈಶ್ವರಪ್ಪ

    ಬೆಂಗಳೂರು: ತಮ್ಮ ಪುತ್ರ ಕಾಂತೇಶ್​ಗೆ ಹಾವೇರಿ ಲೋಕಸಭೆ ಕ್ಷೇತ್ರದ ಟಿಕೆಟ್​ ಕೈತಪ್ಪಿದ ಬೆನ್ನಲ್ಲೇ ಅಸಮಾಧಾಗೊಂಡಿದ್ದ ಮಾಜಿ ಸಚಿವ ಕೆ.ಎಸ್​. ಈಶ್ವರಪ್ಪ ಬಿ.ಎಸ್. ಯಡಿಯೂರಪ್ಪ ಹಾಗೂ ಅವರ ಮಕ್ಕಳ ವಿರುದ್ಧ ಮತ್ತೊಮ್ಮೆ ವಾಗ್ದಾಳಿ ನಡೆಸಿದ್ದು, ಜನರಿಗೆ ಬೇಡವಾದವರು, ತನಗೆ ಬೇಕಾದವರನ್ನು ಹಾಕಿಕೊಳ್ಳೋಕೆ ಶಕ್ತಿ ಇದೆ ಎಂದು ಗುಡುಗಿದ್ದಾರೆ.

    ರಾಜ್ಯ ಬಿಜೆಪಿ ಚುನಾವಣಾ ಉಸ್ತುವಾರಿ ರಾಧಾಮೋಹನ ದಾಸ್ ಅವರನ್ನು ಭೇಟಿ ಮಾಡಿದ ಬಳಿಕ ಮಾತನಾಡಿದ ಕೆ.ಎಸ್. ಈಶ್ವರಪ್ಪ ಬಂಡಾಯ ಸ್ಪರ್ಧೆಯ ಸುಳಿವು ನೀಡಿದ್ದಾರೆ.

    ಇಡೀ ರಾಜ್ಯದಲ್ಲಿ ಚಿಕ್ಕಮಗಳೂರಲ್ಲಿ ಶೋಭಾ ಕರಂದ್ಲಾಜೆ ವಿರುದ್ಧ ಆದಷ್ಟು ಗೋ ಬ್ಯಾಕ್ ಬೇರೆ ಎಲ್ಲಿಯೂ ಆಗಿಲ್ಲ.ಅಂತಹ ಶೋಭಾಗೆ ಚಿಕ್ಕಮಗಳೂರಿನಿಂದ ಕರೆದುಕೊಂಡು ಬಂದು ಸದಾನಂದ ಗೌಡಗೆ ಟಿಕೆಟ್ ತಪ್ಪಿಸಿದ್ದಾರೆ. ಶೋಭಾನ ಯಾಕೆ ಕರೆದುಕೊಂಡು ಬಂದು ಹಾಕಿದ್ರು. ಜನರಿಗೆ ಬೇಡವಾದವರು, ತನಗೆ ಬೇಕಾದವರನ್ನು ಹಾಕಿಕೊಳ್ಳೋಕೆ ಶಕ್ತಿ ಇದೆ ಎಂದು ವಾಗ್ದಾಳಿ ನಡೆಸಿದ್ದಾರೆ.

    ಇದನ್ನೂ ಓದಿ: ಚುನಾವಣಾ ಆಯೋಗದ ನೂತನ ಆಯುಕ್ತರಾಗಿ ಸುಖಬೀರ್ ಸಿಂಗ್ ಸಂಧು-ಜ್ಞಾನೇಶ್ ಕುಮಾರ್ ನೇಮಕ

    ನಾನು 40 ವರ್ಷಗಳ ಕಾಲ ಸಂಘಟನೆಯಲ್ಲಿ ಕೆಲಸ ಮಾಡಿದ್ದೇನೆ. ನಾನು ಎಂದೆಂದಿಗೂ ಪಕ್ಷದ ವಿರುದ್ಧ ಕೆಲಸ ಮಾಡಿಲ್ಲ. ರಾಯಣ್ಣ ಬ್ರಿಗೇಡ್ ಮಾಡಿ ಲಕ್ಷಾಂತರ ಜನರ ಸಂಘಟನೆ ಮಾಡುವ ಕೆಲಸ ಆಗಿತ್ತು. ಅದಕ್ಕೆ ಇವರಿಗೆ ಯಾಕೆ ಕಣ್ಣು ಉರಿ ಆಯ್ತೋ ಗೊತ್ತಿಲ್ಲ. ಯಡಿಯೂರಪ್ಪನವರು ಅಮಿತ್ ಷಾ ಬಳಿ ಹೋಗಿ ಸಂಗೊಳ್ಳಿ ರಾಯಣ್ಣ ಬ್ರಿಗೇಡ್ ನಿಲ್ಲಿಸೋಕೆ ಹೇಳಿ ಎಂದು ಒತ್ತಾಯ ಮಾಡಿದ್ದರು. ಆ ನಂತರ ನಾನು ದೊಡ್ಡವರ ಮಾತು ಕೇಳಿ ಸುಮ್ಮನೆ ಆದೆ.

    ಈಗ ಟಿಕೆಟ್ ಕೊಡುತ್ತೇನೆ ಎಂದು ನಂಬಿಸಿ ಮೋಸ ಮಾಡಿದ್ದಾರೆ. ನಿಮ್ಮ ಮಗನಿಗೆ ಟಿಕೆಟ್ ಕೊಡಿಸುತ್ತೇನೆ ಅಂದಿದ್ದರು. ನಿಮ್ಮ ಮಗನಿಗೆ ಟಿಕೆಟ್ ಕೊಡಿಸಿ ನಾನೇ ಹಾವೇರಿಯಲ್ಲಿ ಓಡಾಡಿ ಗೆಲ್ಲಿಸೋದಾಗಿ ಹೇಳಿದ್ದರು. ಈಗ ಯಡಿಯೂರಪ್ಪ ಮತ್ತು ಅವರ ಮಕ್ಕಳು ಅನ್ಯಾಯ ಮಾಡಿದ್ದಾರೆ. ಸಿ.ಟಿ.ರವಿ, ಕಟೀಲು, ಪ್ರತಾಪ್ ಸಿಂಹ, ಸದಾನಂದಗೌಡಗೆ ಅನ್ಯಾಯವಾಗಿದೆ. ಹೀಗಾಗಿ ನೊಂದ ಬಿಜೆಪಿ ಕಾರ್ಯಕರ್ತರ ಧ್ವನಿಯಾಗಿ ಕೆಲಸ ಮಾಡಬೇಕೆಂದು ಎಲ್ಲರೂ ಒತ್ತಾಯಿಸಿದ್ದಾರೆ ಎಂದು ಬಂಡಾಯ ಸ್ಪರ್ಧೆಯ ಸುಳಿವು ನೀಡಿದ್ದಾರೆ.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts