More

    ಕಾಂಗ್ರೆಸ್​ ಅಧಿಕಾರಕ್ಕೆ ಬಂದ ಮೇಲೆ ವರ್ಗಾವಣೆ ದಂಧೆಗೆ ಲೆಕ್ಕ ಇಲ್ಲದಂತಾಗಿದೆ: ಕೆ.ಎಸ್​. ಈಶ್ವರಪ್ಪ

    ಕೋಲಾರ: ರಾಜ್ಯದಲ್ಲಿ ಕಾಂಗ್ರೆಸ್​ ಅಧಿಕಾರಕ್ಕೆ ಬಂದ ಮೇಲೆ ವರ್ಗಾವಣೆ ದಂಧೆಗೆ ಲೆಕ್ಕ ಇಲ್ಲದಂತಾಗಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಅವರ ಪುತ್ರ ವರ್ಗಾವಣೆ ದಂಧೆಯಲ್ಲಿ ತೊಡಗಿದ್ದಾರೆ. ನಾನು ಹೇಳುತ್ತಿರುವುದು ಸುಳ್ಳು ಎಂದಾದರೆ ದೇವರ ಮುಂದೆ ನಿಂತು ಪ್ರಮಾಣ ಮಾಡಲಿ ಎಂದು ಮಾಜಿ ಸಚಿವ ಕೆ.ಎಸ್. ಈಶ್ವರಪ್ಪ ಸವಾಲೆಸೆದಿದ್ದಾರೆ.

    ಕೋಲಾರ ಜಿಲ್ಲೆ ಮುಳುಬಾಗಿಲು ತಾಲ್ಲೂಕಿನಲ್ಲಿ ಮಾತನಾಡಿದ ಈಶ್ವರಪ್ಪ ಕುರುಡುಮಲೆ ಗಣೇಶನ ಮುಂದೆ ನಿಂತು ಲಂಚ ಪಡೆಯಲ್ಲ, ಅಭಿವೃದ್ದಿಗೆ ಹೆಚ್ಚು ಒತ್ತು ಕೊಡುತ್ತೇನೆ ಎಂದು ಪ್ರಮಾಣ ಮಾಡಲಿ ಎಂದಿದ್ದಾರೆ.

    Siddaramaiah Eshwarappa

    ಇದನ್ನೂ ಓದಿ: ರಾಜ್ಯದಲ್ಲಿ ಬರಗಾಲ ಕಾಡಲು ಸಿದ್ದರಾಮಯ್ಯ ಕಾಲ್ಗುಣ ಕಾರಣ: ಸಿ.ಟಿ. ರವಿ

    ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಅವರ ಪುತ್ರ ವರ್ಗಾವಣೆ ದಂಧೆಯಲ್ಲಿ ತೊಡಗಿರುವುದು ಸತ್ಯ. ನಾನು ಹೇಳುತ್ತಿರುವುದು ಸುಳ್ಳು ಎಂದಾದರೆ ಅವರು ಕುರಡುಮಲೆ ಗಣೇಶನ ಮುಂದೆ ನಿಂತು ಪ್ರಮಾಣ ಮಾಡಲಿ. ವರ್ಗಾವಣೆ ದಂಧೆ ಸಂಬಂಧ ಹಾಲಿ ಹಾಗೂ ನಿವೃತ್ತ ನ್ಯಾಯಮೂರ್ತಿಗಳ ನೇತೃತ್ವದಲ್ಲಿ ಸಮಿತಿ ಒಂದನ್ನು ರಚಿಸಿ ತನಿಖೆ ನಡೆಸಬೇಕು. ವರ್ಗಾವಣೆಗಾಗಿ ಎಷ್ಟು ದುಡ್ಡು ಕೊಟ್ಟಿದ್ಧೇವೆ ಎಂದು ಹೇಳುವ 25 ಅಧಿಕಾರಿಗಳನ್ನು ತನಿಖೆಗೆ ಒಳಪಡಿಸಬೇಕು ಎಂದು ಆಗ್ರಹಿಸಿದ್ದಾರೆ.

    ಸಿದ್ದರಾಮಯ್ಯ ಕೇಂದ್ರಿಕೃತ ವರ್ಗಾವಣೆ ನೀತಿಯನ್ನು ಜಾರಿಗೆ ತಂದಿದ್ದಾರೆ. ಇದರ ಮುಖ್ಯ ಉದ್ದೇಶ ಏನೆಂದರೆ ಎಲ್ಲವೂ ನಮಗೆ ಸೇರಬೇಕೆಂದು ಎಂದರ್ಥ. ಸಿಎಂ ಹಾಗೂ ಅವರ ಮಗನಿಗೆ ದುಡ್ಡು ಕೊಡಬೇಕು. ಇನ್ನು ಮುಂದಾದರೂ ಲಂಚ ಪಡೆಯದೆ ರಾಜ್ಯದ ಅಭಿವೃದ್ದಿಗೆ ಹೆಚ್ಚು ಒತ್ತು ಕೊಡುತ್ತೇನೆಂದು ಸಿದ್ದರಾಮಯ್ಯನವರು ದೇವರ ಮುಂದೆ ನಿಂತು ಪ್ರಮಾಣ ಮಾಡಲಿ ಎಂದು ಮಾಜಿ ಸಚಿವ ಕೆ.ಎಸ್. ಈಶ್ವರಪ್ಪ ಸವಾಲೆಸೆದಿದ್ದಾರೆ.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts