More

    ಕ್ಷಯ ಮುಕ್ತಗೊಳಿಸಲು ಸಹಕರಿಸಿ: ಜಿಲ್ಲಾಧಿಕಾರಿ ಡಾ.ಎಚ್.ಎನ್.ಗೋಪಾಲಕೃಷ್ಣ ಮನವಿ

    ಮಂಡ್ಯ: ಕ್ಷಯರೋಗ ನಿರ್ಮೂಲನೆಯಲ್ಲಿ ದೇಶದಲ್ಲಿ ಕರ್ನಾಟಕ 2ನೇ ಸ್ಥಾನದಲ್ಲಿದೆ. ಈ ವರ್ಷ ಇನ್ನೂ ಹೆಚ್ಚಿನ ಸಾಧನೆ ಮಾಡಿ ಪ್ರಥಮ ಸ್ಥಾನಗಳಿಸಬೇಕು. ಜತೆಗೆ ಸಂಪೂರ್ಣವಾಗಿ ಕ್ಷಯರೋಗ ಮುಕ್ತ ರಾಜ್ಯವನ್ನಾಗಿಸಬೇಕು ಎಂದು ಜಿಲ್ಲಾಧಿಕಾರಿ ಡಾ.ಎಚ್.ಎನ್.ಗೋಪಾಲಕೃಷ್ಣ ಹೇಳಿದರು.
    ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಜಿಲ್ಲಾ ಕ್ಷಯರೋಗ ನಿರ್ಮೂಲನಾಧಿಕಾರಿ, ಮಂಡ್ಯ ವೈದ್ಯಕೀಯ ವಿಜ್ಞಾನಗಳ ಸಂಸ್ಥೆ(ಮಿಮ್ಸ್)ಯ ಸಹಯೋಗದಲ್ಲಿ ನಗರದ ಡಿಸಿ ಕಚೇರಿ ಎದುರು ಆಯೋಜಿಸಿದ್ದ ವಿಶ್ವ ಕ್ಷಯರೋಗ ದಿನಾಚರಣೆಯ ಜಾಗೃತಿ ಜಾಥಾಕ್ಕೆ ಚಾಲನೆ ನೀಡಿ ಮಾತನಾಡಿದರು.
    ದೇಶವನ್ನು 2025 ರೊಳಗಾಗಿ ಕ್ಷಯರೋಗವನ್ನು ಸಂಪೂರ್ಣವಾಗಿ ನಿರ್ಮೂಲನೆ ಮಾಡುವ ನಿಟ್ಟಿನಲ್ಲಿ ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರು ಟಿ.ಬಿ ಸೋಲಿಸಿ, ಭಾರತ ಗೆಲ್ಲಿಸಿ ಎಂಬ ಆಂದೋಲನಕ್ಕೆ ಚಾಲನೆ ನೀಡಿದ್ದಾರೆ. ಅದೇ ರೀತಿ ಮಂಡ್ಯ ಜಿಲ್ಲೆಯಲ್ಲೂ ಕೂಡ ಕ್ಷಯರೋಗ ನಿರ್ಮೂಲನೆಗೆ ಆಂದೋಲನ ರೂಪಿಸಿದ್ದೇವೆ ಎಂದರು.
    ಸಾರ್ವಜನಿಕರು ಮತ್ತು ಸಮುದಾಯದವರು ಜಿಲ್ಲಾಡಳಿತದೊಂದಿಗೆ ಕೈಜೋಡಿಸಿ ಕ್ಷಯರೋಗ ನಿರ್ಮೂಲನೆಗೆ ಸಹಕರಿಸಬೇಕು. ಕ್ಷಯರೋಗ ಲಕ್ಷಣಗಳು ಕಂಡುಬಂದಲ್ಲಿ ಹತ್ತಿರದ ಆರೋಗ್ಯ ಕೇಂದ್ರಗಳಿಗೆ ಭೇಟಿ ನೀಡಿ ಪರೀಕ್ಷೆ ಮಾಡಿಸಿಕೊಳ್ಳಿ. ಜಿಲ್ಲೆಯಲ್ಲಿ 792 ಕ್ಷಯ ರೋಗಿಗಳಿದ್ದು, ಅವರಿಗೆ ಆರೋಗ್ಯ ಇಲಾಖೆ ವತಿಯಿಂದ ಉತ್ತಮ ಚಿಕಿತ್ಸೆ ಮತ್ತು ಪ್ರತಿ ತಿಂಗಳು ಪೌಷ್ಟಿಕ ಆಹಾರದ ಕಿಟ್ ವಿತರಣೆ ಮಾಡುತ್ತಿದ್ದೇವೆ ಎಂದರು.
    ಜಿಲ್ಲಾ ಪಂಚಾಯಿತಿ ಉಪ ಕಾರ್ಯದರ್ಶಿ ಎಂ.ಬಾಬು, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಧಿಕಾರಿ ಡಾ.ಟಿ.ಎನ್ ಧನಂಜಯ, ಜಿಲ್ಲಾ ಕ್ಷಯರೋಗ ನಿರ್ಮೂಲನಾಧಿಕಾರಿ ಡಾ.ಆಶಾಲತಾ , ಜಿಲ್ಲಾ ಮಲೇರಿಯಾ ಅಧಿಕಾರಿ ಡಾ.ಭವಾನಿ ಶಂಕರ್ ಇತರರಿದ್ದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts