More

    ಕೆಎಸ್‌ಎಚ್‌ಆರ್‌ಸಿ ವೆಬ್‌ಸೈಟ್ ಹ್ಯಾಕ್!; ಆಯೋಗದ ಹೆಸರಿನಲ್ಲಿ ಸಾರ್ವಜನಿಕರಿಗೆ ವಂಚನೆ

    ಬೆಂಗಳೂರು: ರಾಜ್ಯ ಮಾನವ ಹಕ್ಕುಗಳ ಆಯೋಗದ ಹೆಸರಿನಲ್ಲಿ ಸಾರ್ವಜನಿಕರಿಗೆ ಮೋಸ ಮಾಡುತ್ತಿದ್ದ ಕಿಡಿಗೇಡಿಗಳು, ಇದೀಗ ಆಯೋಗದ ಅಧಿಕೃತ ವೆಬ್‌ಸೈಟ್‌ ಡೈವರ್ಟ್ ಮಾಡಿ ಮೋಸ ಮಾಡುತ್ತಿರುವುದು ಬೆಳಕಿಗೆ ಬಂದಿದೆ.

    ಈ ಕುರಿತು ರಾಜ್ಯ ಮಾನವ ಹಕ್ಕುಗಳ ಆಯೋಗದ ಕಾರ್ಯದರ್ಶಿ ಸಂತೋಷ್ ಕುಮಾರ್, ಕೇಂದ್ರ ವಿಭಾಗ ಸಿಇಎನ್ ಠಾಣೆಗೆ ದೂರು ನೀಡಿದ್ದಾರೆ. ಮಾರ್ಚ್ 28ರಂದು ಕರ್ನಾಟಕ ರಾಜ್ಯ ಮಾನವ ಹಕ್ಕುಗಳ ಆಯೋಗ (ಕೆಎಸ್‌ಎಚ್‌ಆರ್‌ಸಿ) ವೆಬ್‌ಸೈಟ್‌ನಿಂದ ಮಾಹಿತಿಯನ್ನು ಕರ್ನಾಟಕ ಮಾನವ ಹಕ್ಕುಗಳ ಪ್ಯಾನಲ್‌ಗೆ ವರ್ಗಾವಣೆ ಆಗುವಂತೆ ಮಾಡಿದ್ದಾರೆ.

    ಈ ಮೂಲಕ ಕೆಎಸ್‌ಎಚ್‌ಆರ್‌ಸಿ ಗುರುತು ಬಳಸಿಕೊಂಡು ಸಾರ್ವಜನಿಕರಿಗೆ ಮೋಸ ಮಾಡುತ್ತಿರುವ ಆರೋಪಿಗಳನ್ನು ಪತ್ತೆ ಮಾಡಿ ಕಾನೂನು ಕ್ರಮ ತೆಗೆದುಕೊಳ್ಳುವಂತೆ ದೂರಿನಲ್ಲಿ ಸಂತೋಷ್ ಕುಮಾರ್ ಮನವಿ ಮಾಡಿದ್ದಾರೆ. ಇದರ ಅನ್ವಯ ಪ್ರಕರಣ ದಾಖಲಿಸಿಕೊಂಡು ತನಿಖೆ ಕೈಗೊಂಡಿರುವುದಾಗಿ ಅಧಿಕಾರಿಗಳು ತಿಳಿಸಿದ್ದಾರೆ.

    ಮಸೀದಿಗಳಲ್ಲಿನ ಲೌಡ್ ಸ್ಪೀಕರ್ ತೆಗೆಸಿರಿ, ಇಲ್ಲದಿದ್ದರೆ..; ಸರ್ಕಾರಕ್ಕೆ ಸವಾಲೆಸೆದ ರಾಜ್​ ಠಾಕ್ರೆ

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts