ಪಿಎಸ್‌ಐ ನೇಮಕಾತಿ ವಯೋಮಿತಿ ಹೆಚ್ಚಳಕ್ಕೆ ಸಚಿವ ಸಂಪುಟ ಅಸ್ತು

ಬೆಂಗಳೂರು: ಪೊಲೀಸ್ ಸಬ್ ಇನ್​​ಸ್ಪೆಕ್ಟರ್ ನೇಮಕಾತಿಯಲ್ಲಿ ವಯೋಮಿತಿ ಹೆಚ್ಚಿಸಲು ಗುರುವಾರ ಇಲ್ಲಿ ನಡೆದ ರಾಜ್ಯ ಸಚಿವ ಸಂಪುಟ ಸಭೆಯಲ್ಲಿ ನಿರ್ಧರಿಸಲಾಗಿದೆ. ಸಾಮಾನ್ಯ ವರ್ಗಕ್ಕೆ 28 ವರ್ಷದಿಂದ 30 ವರ್ಷಕ್ಕೆ ಹೆಚ್ಚಿಸಲಾಗಿದ್ದು, ಪರಿಶಿಷ್ಟ ಜಾತಿ-ಪಂಗಡಕ್ಕೆ 30 ವರ್ಷದಿಂದ 32 ವರ್ಷಕ್ಕೆ ಏರಿಸಲಾಗಿದೆ. ಇದಕ್ಕೆ ಸಂಬಂಧಿಸಿದ ಕರ್ನಾಟಕ ರಾಜ್ಯ ಪೊಲೀಸ್ ಲಿಪಿಕ ಸಿಬ್ಬಂದಿಗಳನ್ನು ಒಳಗೊಂಡ ನೇಮಕಾತಿ ತಿದ್ದುಪಡಿ ನಿಯಮಗಳು 2021ಕ್ಕೆ ಅನುಮೋದನೆ ನೀಡಲಾಯಿತು ಎಂದು ಸಂಪುಟ ಸಭೆಯ ನಂತರ ಕಾನೂನು ಸಚಿವ ಜೆ.ಸಿ. ಮಾಧುಸ್ವಾಮಿ ಸುದ್ದಿಗೋಷ್ಠಿಯಲ್ಲಿ ತಿಳಿಸಿದರು. ಪಿಎಸ್‌ಐಗಳ ನೇಮಕಾತಿಗೆ … Continue reading ಪಿಎಸ್‌ಐ ನೇಮಕಾತಿ ವಯೋಮಿತಿ ಹೆಚ್ಚಳಕ್ಕೆ ಸಚಿವ ಸಂಪುಟ ಅಸ್ತು