ಕೆ.ಎಸ್.ಆರ್, ಕೆ.ಇ.ಆರ್ ಪರೀಕ್ಷಾ ತರಗತಿ ಸಮಾರೋಪ

exam
Published on

ಕುಂಬಳೆ: ಕೇರಳ ಪ್ರಾಂತ್ಯ ಕನ್ನಡ ಮಾಧ್ಯಮ ಅಧ್ಯಾಪಕರ ಸಂಘ ಕಾಸರಗೋಡು ಕೇಂದ್ರ ಸಮಿತಿ ವತಿಯಿಂದ ಅಧ್ಯಾಪಕರು, ಮುಖ್ಯ ಶಿಕ್ಷಕರಾಗಿ ಭಡ್ತಿ ಹೊಂದುವ 2024 ರ ಇಲಾಖೆ ಪರೀಕ್ಷೆ ಕೆ.ಎಸ್.ಆರ್., ಕೆ.ಇ.ಆರ್. ತರಗತಿಯ ಸಮಾರೋಪ ಸಮಾರಂಭ ಕುಂಬಳೆ ಹೋಲಿ ಫ್ಯಾಮಿಲಿ ಶಾಲೆಯಲ್ಲಿ ನಡೆಯಿತು.

ಸತತ 5 ವರ್ಷಗಳಿಂದ ಕನ್ನಡ ಮಾಧ್ಯಮ ಅಧ್ಯಾಪಕರಿಗೆ ಇಲಾಖಾ ಪರೀಕ್ಷೆ ತರಬೇತಿ ತರಗತಿಗಳನ್ನು ಉಚಿತವಾಗಿ ಕನ್ನಡ ಅಧ್ಯಾಪಕ ಸಂಘಟನೆ ನೀಡುತ್ತಿದ್ದು, ಕೇಂದ್ರ ಸಮಿತಿ ಅಧ್ಯಕ್ಷ ಶ್ರೀನಿವಾಸ್ ರಾವ್ ಪಿ.ಬಿ. ತರಗತಿ ಸಮಾರೋಪ ಸಮಾರಂಭದ ಅಧ್ಯಕ್ಷತೆ ವಹಿಸಿದ್ದರು.

ಬಡಾಜೆ ಶಾಲಾ ನಿವೃತ್ತ ಮುಖ್ಯಶಿಕ್ಷಕಿ, ಕನ್ನಡ ಮಾಧ್ಯಮ ಅಧ್ಯಾಪಕರ ಸಂಘದ ಕೇಂದ್ರ ಸಮಿತಿ ಮಾಜಿ ಕೋಶಾಧಿಕಾರಿ ಪದ್ಮಾವತಿ ಎಂ. ಮುಖ್ಯ ಅತಿಥಿಯಾಗಿದ್ದರು. ಮಂಜೇಶ್ವರ ಉಪಜಿಲ್ಲಾ ಅಧ್ಯಕ್ಷ ಜಯರಾಮ ಸಿ.ಎಚ್., ಮುಖ್ಯ ಶಿಕ್ಷಕಿ ಸಿಸ್ಟರ್ ಕ್ರಿಸ್ಟೀನಾ ಫರ್ನಾಂಡಿಸ್, ಸುರೇಖಾ, ನವೀನ ಕುಮಾರ್, ಸೌಮ್ಯ ಶುಭಾಶಂಸನೆಗೈದರು. ಪ್ರತಿದಿನ ಇಲಾಖಾ ಪರೀಕ್ಷಾ ತರಬೇತಿ ನೀಡಿದ ಸಂಘಟನೆ ಅಧ್ಯಕ್ಷ ಶ್ರೀನಿವಾಸ್ ರಾವ್ ಪಿ.ಬಿ.ಅವರನ್ನು ಶಿಬಿರಾರ್ಥಿಗಳು ಗೌರವಿಸಿದರು.

ಕೇಂದ್ರ ಸಮಿತಿ ಪ್ರಧಾನ ಕಾರ್ಯದರ್ಶಿ ಪ್ರದೀಪ್ ಕುಮಾರ್ ಶೆಟ್ಟಿ ಬೇಳ ಸ್ವಾಗತಿಸಿದರು. ಕುಂಬಳೆ ಹೋಲಿ ಫ್ಯಾಮಿಲಿ ಅಧ್ಯಾಪಕ ಸನತ್ ಕುಮಾರ್ ವಂದಿಸಿದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net