ಕೆಎಸ್‌ಆರ್‌ಟಿಸಿ ಬಸ್‌ಗೆ ಬೈಕ್ ಡಿಕ್ಕಿ: ಇಬ್ಬರ ಸಾವು

ಶಿರಸಿ: ಕೆಎಸ್‌ಆರ್‌ಟಿಸಿ ಬಸ್‌ಗೆ ಬೈಕ್ ಡಿಕ್ಕಿಯಾಗಿ ಇಬ್ಬರು ಸ್ಥಳದಲ್ಲೇ ಮೃತಪಟ್ಟಿದ್ದಾರೆ.

ಉತ್ತರ ಕನ್ನಡ ಜಿಲ್ಲೆಯ ಮುಂಡಗೋಡಿನ ಸಾಲಗಾಂವ ಬಳಿ ಅಪಘಾತ ಸಂಭವಿಸಿದ್ದು, ಗಣೇಶ ಓಣಿಕೇರಿ(18), ಮಂಜುನಾಥ ವಾಲ್ಮೀಕಿ(18)ಮೃತಪಟ್ಟಿದ್ದಾರೆ.

ಐಟಿಐ ಕಾಲೇಜನ ವಿದ್ಯಾರ್ಥಿಗಳಾಗಿದ್ದರು ಎನ್ನಲಾಗಿದೆ.

ಮುಂಡಗೋಡು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. (ದಿಗ್ವಿಜಯ ನ್ಯೂಸ್)