More

    ಪಿಯುಸಿ ಮಕ್ಕಳಿಗೆ ಈ ವರ್ಷವೂ ಪರೀಕ್ಷಾ ಕೇಂದ್ರದ ತನಕ ಉಚಿತ ಪ್ರಯಾಣ ಘೋಷಿಸಿದ ಕೆಎಸ್​ಆರ್​ಟಿಸಿ

    ಬೆಂಗಳೂರು: ಪ್ರಸಕ್ತ ಶೈಕ್ಷಣಿಕ ವರ್ಷದಲ್ಲಿ ದಿನಾಂಕ ಮಾರ್ಚ್ 9ರಿಂದ ಕರ್ನಾಟಕದ ದ್ವಿತೀಯ ಪಿಯುಸಿ ವಿದ್ಯಾರ್ಥಿಗಳಿಗೆ ವಾರ್ಷಿಕ ಪರೀಕ್ಷೆಗಳು ಪ್ರಾರಂಭವಾಗಲಿವೆ. ಈ ಹಿನ್ನೆಲೆಯಲ್ಲಿ ವಿದ್ಯಾರ್ಥಿಗಳಿಗೆ ಪರೀಕ್ಷಾ ಕೇಂದ್ರದ ತನಕ ಅವರ ಪರೀಕ್ಷಾ ಪ್ರೇಶ ಪತ್ರ ತೋರಿಸಿದರೆ ಉಚಿತವಾಗಿ ಪರೀಕ್ಷಾ ಕೇಂದ್ರಕ್ಕೆ ಹಾಗೂ ಅಲ್ಲಿಂದ ಹಿಂತಿರುಗಲು ಕೆಎಸ್​ಆರ್​ಟಿಸಿ ಉಚಿತ ವ್ಯವಸ್ಥೆ ಮಾಡಿದೆ. ಇದಕ್ಕೆ ಸಂಬಂಧಿಸಿದಂತೆ ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯನಿರ್ಣಯ ಮಂಡಳಿಯ ಅಧ್ಯಕ್ಷರು ಪತ್ರ ಮೂಲಕ ಕೋರಿದ್ದರು.

    ಇದನ್ನೂ ಓದಿ: ಮಾ.9 ರಿಂದ ಆರಂಭವಾಗಲಿರುವ ಪಿಯುಸಿ ಪರೀಕ್ಷೆಗೆ ಹಿಜಾಬ್ ಧರಿಸಿ ಬರುವಂತಿಲ್ಲ!

    ಅದರ ಅನ್ವಯ ವಿದ್ಯಾರ್ಥಿಗಳ ಹಿತದೃಷ್ಟಿಯಿಂದ, ಕರಾರಸಾನಿ ಅಥವಾ ಕೆಎಸ್​ಆರ್​ಟಿಸಿ, ದ್ವಿತೀಯ ಪಿಯುಸಿ ಪರೀಕ್ಷೆ ನಡೆಯುವ ದಿನಾಂಕಗಳಂದು ಪರೀಕ್ಷೆಗೆ ಹಾಜರಾಗುವ ದ್ವಿತೀಯ ಪಿಯುಸಿ ವಿದ್ಯಾರ್ಥಿಗಳು ತಮ್ಮ ವಾಸಸ್ಥಳದಿಂದ ನಿಯೋಜಿತ ಪರೀಕ್ಷಾ ಕೇಂದ್ರದವರೆಗೆ ಮತ್ತು ಹಿಂದಿರುಗುವಾಗ “ದ್ವಿತೀಯ ಪಿಯುಸಿ ಪರೀಕ್ಷಾ ಪ್ರವೇಶ ಪತ್ರವನ್ನು ತೋರಿಸಿದರೆ, ನಿಗಮದ ನಗರ, ಹೊರವಲಯ, ಸಾಮಾನ್ಯ ಹಾಗೂ ವೇಗದೂತ ಬಸ್ಸುಗಳಲ್ಲಿ ಉಚಿತವಾಗಿ ಪ್ರಯಾಣಿಸಲು ಅವಕಾಶ ಕಲ್ಪಿಸಿದೆ.

    ಇದಕ್ಕೆ ಸಂಬಂಧಿಸಿದಂತೆ ನಿಗಮದ ಎಲ್ಲಾ ಚಾಲಕ ನಿರ್ವಾಹಕರು ದ್ವಿತೀಯ ಪಿಯುಸಿ ವಿದ್ಯಾರ್ಥಿಗಳಿಗೆ ಪರೀಕ್ಷಾ ಅವಧಿಯಲ್ಲಿ ನಿಯೋಜಿತ ಪರೀಕ್ಷಾ ಕೇಂದ್ರಗಳಿಗೆ ತೆರಳಲು ಹಾಗೂ ವಾಸಸ್ಥಳಕ್ಕೆ ಮರಳಲು ಪರೀಕ್ಷಾ ಪ್ರವೇಶ ಪತ್ರದೊಂದಿಗೆ ಪ್ರಯಾಣಿಸಲು ಅನುಮತಿ ನೀಡಲು ಕೆಎಸ್​ಆರ್​ಟಿಸಿ ನಿಗಮ ಸೂಚಿಸಿದೆ.

    ಇದನ್ನೂ ಓದಿ: ಕ್ಯಾನ್ಸರ್​ ಎಂದು ಸುಳ್ಳು ಹೇಳಿ ಕ್ಲಾಸ್​ಮೇಟ್ಸ್​, ಶಿಕ್ಷಕರಿಂದ 15 ಲಕ್ಷ ವಸೂಲಿ! ಆರೋಪಿ ಸಿಕ್ಕಿಬಿದ್ದಿದ್ದೇ ರೋಚಕ

    ಅದಷ್ಟೇ ಅಲ್ಲದೆ, ಪ್ರವೇಶ ಪತ್ರದ ಆಧಾರದ ಮೇಲೆ ಬಸ್ಸುಗಳ ಮಾರ್ಗದಲ್ಲಿ ಪರೀಕ್ಷಾ ಕೇಂದ್ರಗಳಿಗೆ ತೆರಳಲು ವಿದ್ಯಾರ್ಥಿಗಳು ಬಸ್ಸನ್ನು ಹತ್ತುವವರಿದ್ದಲ್ಲಿ ಹಾಗೂ ಪರೀಕ್ಷಾ ಕೇಂದ್ರಗಳಿದ್ದಲ್ಲಿ, ವಿದ್ಯಾರ್ಥಿಗಳು ಬಸ್ಸನ್ನು ಹತ್ತಲು/ಇಳಿಯಲು ಅನುಕೂಲವಾಗುವಂತೆ ಕೋರಿಕೆ ನಿಲುಗಡೆ ನೀಡಲು ಕೆಎಸ್​ಆರ್​ಟಿಸಿ ನಿಗಮ ತನ್ನ ಸಿಬ್ಬಂದಿಗೆ ಆದೇಶ ನೀಡಿದೆ.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts