ನವದೆಹಲಿ: ರಾಜ್ಯ ರಸ್ತೆ ಸಾರಿಗೆ ಸಂಸ್ಥೆ (KSRTC) ಮತ್ತೊಮ್ಮೆ ಪ್ರತಿಷ್ಠಿತ SKOCH ಪ್ರಶಸ್ತಿಗೆ ಭಾಜನವಾಗಿದೆ. ಕಲ್ಯಾಣ ಉಪಕ್ರಮ ಮತ್ತು ಶಕ್ತಿ ಯೋಜನೆಗಳಿಗೆ SKOCHನ 2 ರಾಷ್ಟ್ರೀಯ ಪ್ರಶಸ್ತಿಗಳು ಲಭಿಸಿದೆ ಎಂದು ತಿಳಿದು ಬಂದಿದೆ.
ದೇಶದ ಇತಿಹಾಸದಲ್ಲಿಯೇ ಪ್ರಪ್ರಥಮವಾಗಿ ತನ್ನ ಸಿಬ್ಬಂದಿಗಳಿಗಾಗಿ 1 ಕೋಟಿ ರೂ. ಸುರಕ್ಷಾ ವಿಮಾ ಯೋಜನೆ ಜಾರಿ ಮಾಡಿದ ಬೆನ್ನಲ್ಲೇ KSRTCಗೆ ಪ್ರತಿಷ್ಠಿತ SKOCH ಪ್ರಶಸ್ತಿ ಲಭಿಸಿರುವುದು ರಾಜ್ಯದ ಹಿರಿಮೆಯನ್ನು ಮತ್ತಷ್ಟು ಹೆಚ್ಚಿಸಿದೆ.
ಇದನ್ನೂ ಓದಿ: ಮುಂದಿನ ಲೋಕಸಭೆ ಚುನಾವಣೆಯಲ್ಲೂ ಜನರು ಆಶೀರ್ವದಿಸುವ ವಿಶ್ವಾಸ ಇದೆ: ಪ್ರಧಾನಿ ಮೋದಿ
ರಾಷ್ಟ್ರರಾಜಧಾನಿ ನವದೆಹಲಿಯ ಕಾನ್ಸಟಿಟ್ಯೂಷನ್ ಕ್ಲಬ್ನಲ್ಲಿ ನಡೆದ 95ನೇ SKOCH ಶೃಂಗಸಭೆಯಲ್ಲಿ ಪ್ರಶಸ್ತಿ ಪ್ರಧಾನ ಮಾಡಲಾಗಿದ್ದು, ಸಂಸ್ಥೆಯ ಪರವಾಗಿ ಕೆಎಸ್ಆರ್ಟಿಸಿ ಉಪ ಮುಖ್ಯ ಲೆಕ್ಕಾಧಿಕಾರಿ ವೈ.ಕೆ ಪ್ರಕಾಶ್ ಪ್ರಶಸ್ತಿ ಸ್ವೀಕರಿಸಿದ್ಧಾರೆ. SKOCH ಸಂಸ್ಥಾಪಕ ಅಧ್ಯಕ್ಷ ಸಮೀರ್ ಕೊಚ್ಚರ್ ಹಾಗೂ ಉಪಾಧ್ಯಕ್ಷ ಗುರುಶರಣ್ ಪ್ರಶಸ್ತಿ ಪ್ರಧಾನ ಮಾಡಿದ್ದಾರೆ.
ದೆಹಲಿ ಮೂಲದ ಸ್ಕ್ವಾಚ್ ಸಂಸ್ಥೆಯು ಸ್ವತಂತ್ರ ವಿಚಾರ ತಜ್ಞ ವೇದಿಕಾ ಸಂಸ್ಥೆಯಾಗಿದ್ದು 1997ರಲ್ಲಿ ಸ್ಥಾಪಿತವಾಗಿರುತ್ತದೆ. ಈ ಸಂಸ್ಥೆಯು 2003 ರಿಂದ ಸ್ಕಾಚ್ ಪ್ರಶಸ್ತಿಯನ್ನು ವಿವಿಧ ಸಂಸ್ಥೆಗಳು ಸಾಧಿಸಿರುವ ಉತ್ತಮ ಆಡಳಿತ ನಿರ್ವಹಣೆ, ಹಣಕಾಸು,ತಾಂತ್ರಿಕತೆ ಅಳವಡಿಕೆ ಹಾಗೂ ಆಂತರಿಕ ಬೆಳವಣಿಗೆಗಾಗಿ ನೀಡುತ್ತಾ ಬಂದಿದೆ. ಸ್ಕಾಚ್ ಸಂಸ್ಥೆಯು ತನ್ನ ಅತ್ಯುನ್ನತ ಪ್ರಶಸ್ತಿಗಳನ್ನು ಸಂಸ್ಥೆಗಳು ಮಾಡಿರುವ ಅತಿ ಉತ್ತಮ ಸಾಧನೆ ಹಾಗೂ ಅವುಗಳಿಂದ ಉಂಟಾಗಿರುವ ಪರಿಣಾಮಗಳನ್ನು ಆಧರಿಸಿ ಆಯ್ಕೆ ಮಾಡಿ ನೀಡುತ್ತದೆ.