Thursday, 13th December 2018  

Vijayavani

Breaking News

ದಟ್ಟ ಮಂಜು: ದಾರಿ ಕಾಣದೆ ಕ್ಯಾಂಟರ್​ಗೆ ಡಿಕ್ಕಿ ಹೊಡೆದ ಕೆಎಸ್​ಆರ್​ಟಿಸಿ ಬಸ್​

Thursday, 30.11.2017, 10:38 AM       No Comments

<<ಅಪಘಾತದಲ್ಲಿ ಬಸ್​ ಚಾಲಕ ಸಾವು, ಐವರಿಗೆ ಗಾಯ>>

ಚಿಕ್ಕಬಳ್ಳಾಪುರ: ದಟ್ಟ ಮಂಜಿನಿಂದಾಗಿ ದಾರಿ ಕಾಣದೆ ಕೆಟ್ಟು ನಿಂತಿದ್ದ ಕ್ಯಾಂಟರ್​ಗೆ ಕೆಎಸ್​ಆರ್​ಟಿಸಿ ಬಸ್​ ಡಿಕ್ಕಿ ಹೊಡೆದು ಬಸ್​ ಚಾಲಕ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ರಾಷ್ಟ್ರೀಯ ಹೆದ್ದಾರಿ 7ರಲ್ಲಿ ನಡೆದಿದೆ.

ಚಿಕ್ಕಬಳ್ಳಾಪುರ ಬಳಿಯ ಆರೂರು ಗ್ರಾಮದ ಬಳಿ ಈ ಅಪಘಾತ ಸಂಭವಿಸಿದೆ. ಮೃತರನ್ನು ಕೆಸ್​ಎಸ್​ಆರ್​ಟಿಸಿ ಬಸ್​ ಚಾಲಕ ಕಲ್ಲಪ್ಪ(45) ಎಂದು ಗುರುತಿಸಲಾಗಿದೆ. ಅಪಘಾತದಲ್ಲಿ ಐವರು ಗಾಯಗೊಂಡಿದ್ದಾರೆ.

ಗಾಯಾಳುಗಳನ್ನು ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿದ್ದು, ಗುಡಿಬಂಡೆ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. (ದಿಗ್ವಿಜಯ ನ್ಯೂಸ್)

Leave a Reply

Your email address will not be published. Required fields are marked *

Back To Top