ಉಪ್ಪಿನಂಗಡಿ: ಕೆಎಸ್‌ಆರ್‌ಟಿಸಿ ಬಸ್ ಹಾಗೂ ಆಲ್ಟೋ ಕಾರಿನ ನಡುವೆ ಡಿಕ್ಕಿ ಸಂಭವಿಸಿ ಕಾರು ಚಾಲಕ ಗಾಯಗೊಂಡಿರುವ ಘಟನೆ ಮಂಗಳೂರು-ಬೆಂಗಳೂರು ರಾಷ್ಟ್ರೀಯ ಹೆದ್ದಾರಿ 75ರ ಶಿರಾಡಿ ಗ್ರಾಮದ ಗುಂಡ್ಯ ಸಮೀಪ ಬರ್ಚಿನಹಳ್ಳ ಎಂಬಲ್ಲಿ ಭಾನುವಾರ ಸಂಭವಿಸಿದೆ.
ಕಾರು ಚಾಲಕ, ಬೆಂಗಳೂರು ನಿವಾಸಿ ಹರ್ಷಾ(49) ಗಾಯಗೊಂಡವರು. ಇವರು ಕಾರಿನಲ್ಲಿ ಬೆಂಗಳೂರಿನಿಂದ ಮಂಗಳೂರು ಕಡೆಗೆ ಬರುತ್ತಿದ್ದ ವೇಳೆ ಗುಂಡ್ಯ ಸಮೀಪದ ಬರ್ಚಿನಹಳ್ಳ ತಲುಪುತ್ತಿದ್ದಂತೆ ಧರ್ಮಸ್ಥಳದಿಂದ ಬೆಂಗಳೂರಿಗೆ ಹೋಗುತ್ತಿದ್ದ ಕೆಎಸ್‌ಆರ್‌ಟಿಸಿ ಬಸ್‌ನ ನಡುವೆ ಡಿಕ್ಕಿ ಸಂಭವಿಸಿದೆ. ಗಾಯಾಳುವನ್ನು ನೆಲ್ಯಾಡಿಯ ಆಸ್ಪತ್ರೆಯಲ್ಲಿ ಪ್ರಥಮ ಚಿಕಿತ್ಸೆ ನೀಡಿ ಹೆಚ್ಚಿನ ಚಿಕಿತ್ಸೆಗಾಗಿ ಮಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಉಪ್ಪಿನಂಗಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.