ಸಾರಿಗೆ ಬಸ್​ ಸಂಚಾರ ಆರಂಭ, ನಿಟ್ಟುಸಿರುಬಿಟ್ಟ ಪ್ರಯಾಣಿಕರು

ರಾಯಚೂರು: ರಾಜ್ಯಾದ್ಯಂತ ಸಾರಿಗೆ ನೌಕರರು ನಡೆಸುತ್ತಿರುವ ಮುಷ್ಕರ ಇಂದು(ಶನಿವಾರ) ಹನ್ನೊಂದನೇ ದಿನಕ್ಕೆ ಕಾಲಿಟ್ಟಿದೆ. ಈ ನಡುವೆ ರಾಯಚೂರಿನಲ್ಲಿ ಸಾರಿಗೆ ಬಸ್ ಸಂಚಾರ ಆರಂಭವಾಗಿದ್ದು, ಈ ಭಾಗದ ಪ್ರಯಾಣಿಕರು ನೆಮ್ಮದಿಯ ನಿಟ್ಟುಸಿರು ಬಿಟ್ಟಿದ್ದಾರೆ. ರಾಯಚೂರು ಜಿಲ್ಲೆಯಲ್ಲಿ ಸುಮಾರು 120 ಸಾರಿಗೆ ಬಸ್ ಸಂಚಾರ ಆರಂಭವಾಗಿದೆ. ಲಿಂಗಸುಗೂರು, ಸಿಂಧನೂರು, ಮಾನ್ವಿ, ದೇವದುರ್ಗ, ಮಸ್ಕಿಯಲ್ಲಿ ಸಾರಿಗೆ ಸಿಬ್ಬಂದಿ ಸ್ವಯಂ ಪ್ರೇರಿತರಾಗಿ ಕೆಲಸಕ್ಕೆ ಹಾಜರಾಗಿದ್ದಾರೆ. ಮುಷ್ಕರಕ್ಕೆ ಸರ್ಕಾರ ಸ್ಪಂದಿಸಿದ ಹಿನ್ನೆಲೆಯಲ್ಲಿ ಕೆಲಸಕ್ಕೆ ಹಾಜರಾಗಿದ್ದಾರೆ ಎನ್ನಲಾಗಿದೆ. ರಾಜ್ಯ ರಾಜಧಾನಿ ಬೆಂಗಳೂರಿನಲ್ಲೂ ಸಾರಿಗೆ ಬಸ್​ ಸಂಚಾರ … Continue reading ಸಾರಿಗೆ ಬಸ್​ ಸಂಚಾರ ಆರಂಭ, ನಿಟ್ಟುಸಿರುಬಿಟ್ಟ ಪ್ರಯಾಣಿಕರು