More

    ವಿದ್ಯಾರ್ಥಿಗಳ ತಾಳ್ಮೆ ಕೆಡಿಸಿದ ಕೆಎಸ್‌ಆರ್‌ಟಿಸಿ: ಬಸ್ ಸೌಲಭ್ಯಕ್ಕಾಗಿ ಕೊಡಿಯಾಲ ಗ್ರಾಮದಲ್ಲಿ ಸಂಚಾರ ತಡೆ

    ಮಂಡ್ಯ: ಸಕಾಲದಲ್ಲಿ ಬಸ್ ಬಾರದ ಹಿನ್ನೆಲೆಯಲ್ಲಿ ಶಾಲಾ-ಕಾಲೇಜಿಗೆ ತೆರಳಲು ತೊಂದರೆಯಾಗುತ್ತಿರುವುದರಿಂದ ಆಕ್ರೋಶಗೊಂಡ ವಿದ್ಯಾರ್ಥಿಗಳು ಗ್ರಾಮಸ್ಥರ ಜತೆಗೂಡಿ ಸೋಮವಾರ ಶ್ರೀರಂಗಪಟ್ಟಣ ತಾಲೂಕು ಕೊಡಿಯಾಲ ಗ್ರಾಮದಲ್ಲಿ ರಸ್ತೆ ತಡೆ ನಡೆಸಿದರು.
    ಸರ್ಕಾರಿ ಬಸ್‌ಗಳ ಸಂಚಾರಕ್ಕೆ ಅಡ್ಡಿಪಡಿಸಿ ಜನಪ್ರತಿನಿಧಿಗಳು ಮತ್ತು ಸಾರಿಗೆ ಅಧಿಕಾರಿಗಳ ವಿರುದ್ಧ ಧಿಕ್ಕಾರದ ಘೋಷಣೆ ಕೂಗಿ ಆಕ್ರೋಶ ವ್ಯಕ್ತಪಡಿಸಿದರು. ಕೊಡಿಯಾಲ ಗ್ರಾಮ ಸೇರಿ ಸುತ್ತಮುತ್ತಲ ಗ್ರಾಮದ ವಿದ್ಯಾರ್ಥಿಗಳು ಶಾಲಾ ಕಾಲೇಜಿಗೆ ತೆರಳಲು ಕೆಎಸ್‌ಆರ್‌ಟಿಸಿ ಬಸ್‌ನಲ್ಲಿ ಪ್ರತಿನಿತ್ಯ ಪ್ರಯಾಣ ಮಾಡುತ್ತಾರೆ. ಆದರೆ ಸಕಾಲದಲ್ಲಿ ಬಸ್‌ಗಳು ಬಾರದ ಹಿನ್ನೆಲೆಯಲ್ಲಿ ನಿಗದಿತ ಸಮಯಕ್ಕೆ ಶಾಲೆಗೆ ತೆರಳಲು ಸಾಧ್ಯವಾಗುತ್ತಿಲ್ಲ ಎಂದು ಹೇಳಿದರು.
    ಮಾತ್ರವಲ್ಲದೆ ಬಸ್‌ಗಳು ಬಂದರೂ ಸಹ ವಿದ್ಯಾರ್ಥಿಗಳು ಮತ್ತು ಇತರೆ ಪ್ರಯಾಣಿಕರನ್ನು ಹತ್ತಿಸಿಕೊಳ್ಳಲು ಮುಂದಾಗುತ್ತಿಲ್ಲ. ವಿದ್ಯಾರ್ಥಿಗಳ ಜತೆ ಉಡಾಫೆಯಾಗಿ ವರ್ತಿಸುತ್ತಾರೆ. ನಿಲ್ದಾಣಗಳಲ್ಲಿ ನಿಲುಗಡೆ ಮಾಡದೆ ಸ್ವಲ್ಪ ದೂರ ಮುಂದೆ ಹೋಗಿ ನಿಲ್ಲಿಸುತ್ತಾರೆ. ಪ್ರಯಾಣಿಕರು ತುಂಬಿದ್ದಾರೆಂದು ನಿಲ್ಲಿಸದೆ ಹೋಗುತ್ತಾರೆ ಎಂದು ಅಳಲು ತೋಡಿಕೊಂಡರು.

    ವಿದ್ಯಾರ್ಥಿಗಳ ತಾಳ್ಮೆ ಕೆಡಿಸಿದ ಕೆಎಸ್‌ಆರ್‌ಟಿಸಿ: ಬಸ್ ಸೌಲಭ್ಯಕ್ಕಾಗಿ ಕೊಡಿಯಾಲ ಗ್ರಾಮದಲ್ಲಿ ಸಂಚಾರ ತಡೆ

    ಪೊಲೀಸರು ಸ್ಥಳಕ್ಕೆ ಆಗಮಿಸಿ ವಿದ್ಯಾರ್ಥಿಗಳ ಮನವೊಲಿಕೆಗೆ ಮುಂದಾದರೂ ಸಹ ಪ್ರತಿಭಟನೆ ಮುಂದುವರಿಸಿದ ಹಿನ್ನೆಲೆಯಲ್ಲಿ ನಿಗಮದ ವಿಭಾಗೀಯ ನಿಯಂತ್ರಣ ಅಧಿಕಾರಿ ಸ್ಥಳಕ್ಕೆ ಭೇಟಿ ನೀಡಿದರು. ಬಸ್‌ಗಳು ಸಕಾಲಕ್ಕೆ ಬರುವಂತೆ ನೋಡಿಕೊಳ್ಳಲಾಗುವುದು. ಅಷ್ಟೇ ಅಲ್ಲದೆ ಹೆಚ್ಚುವರಿ ಬಸ್‌ಗಳನ್ನ ಸಂಚರಿಸುವ ವ್ಯವಸ್ಥೆ ಮಾಡಲಾಗುವುದು ಎಂದು ಭರವಸೆ ನೀಡಿದ ಹಿನ್ನೆಲೆಯಲ್ಲಿ ರಸ್ತೆ ತಡೆ ವಾಪಸ್ ಪಡೆಯಲಾಯಿತು.

    ರಾಜ್ಯೋತ್ಸವ ರಸಪ್ರಶ್ನೆ - 20

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts