

ಬೈಂದೂರು: ತಾಲೂಕಿನ ಗ್ರಾಮೀಣ ಭಾಗಗಳಿಗೆ ಪರ್ಮಿಟ್ ಇದ್ದರೂ ಕೆಎಸ್‌ಆರ್‌ಟಿಸಿ ಬಸ್ ಸೇವೆ ಇಲ್ಲದೆ ತೊಂದರೆಯಾಗುತ್ತಿದೆ. ಕೋರ್ಟ್ ತಡೆ ಇರುವ ವಾರ್ಗ ಹೊರತುಪಡಿಸಿ ಬಾಕಿ ವಾರ್ಗಗಳಲ್ಲಿ ಬಸ್ ಓಡಿಸಬೇಕು. ನ್ಯಾಯಾಲಯ ತಡೆಯಾಜ್ಞೆ ನೆಪವೊಡ್ಡಿ ಬಸ್ ಸೇವೆ ವಿಳಂಬ ವಾಡುತ್ತಿರುವುದು ಸರಿಯಲ್ಲ ಎಂದು ಬೈಂದೂರು ತಾಲೂಕು ಗ್ಯಾರಂಟಿ ಅನುಷ್ಠಾನ ಸಮಿತಿ ಅಧ್ಯಕ್ಷ ಮೋಹನ್ ಪೂಜಾರಿ ಹೇಳಿದರು.
ತಾಲೂಕು ಪಂಚಾಯಿತಿ ಸಭಾಂಗಣದಲ್ಲಿ ಮಂಗಳವಾರ ನಡೆದ ಗ್ಯಾರಂಟಿ ಅನುಷ್ಠಾನ ಯೋಜನೆಯ ಪ್ರಗತಿ ಪರಿಶೀಲನಾ ಸಭೆಯಲ್ಲಿ ಮಾತನಾಡಿದರು.
ಪ್ರತಿ ಸಭೆಯಲ್ಲಿ ಈ ಸಮಸ್ಯೆ ಬಗ್ಗೆ ಚರ್ಚೆ ಮಾಡುತ್ತಿದ್ದು, ಯಾವುದೂ ಕಾರ್ಯರೂಪಕ್ಕೆ ಬರುತ್ತಿಲ್ಲ. ವಿಳಂಬ ಧೋರಣೆ ಕೈಬಿಟ್ಟು ಬಸ್ ಸಂಚಾರಕ್ಕೆ ಸೂಕ್ತ ವ್ಯವಸ್ಥೆ ವಾಡಿ ಎಂದರು. ಇದಕ್ಕೆ ಉತ್ತರಿಸಿದ ಅಧಿಕಾರಿಗಳು ಶ್ರೀದಲ್ಲಿ ಬಸ್ ಓಡಿಸುವ ಬಗ್ಗೆ ಕ್ರಮ ಕೈಗೊಳ್ಳಲಾಗುವುದು ಎಂದರು. ಬೈಂದೂರಿನಲ್ಲಿ ಬಸ್ ನಿಲ್ದಾಣ ಕಾಮಗಾರಿ ಪೂರ್ಣಗೊಂಡಿದ್ದು, ನೀರಿನ ಸಮಸ್ಯೆಯೂ ಬಗೆಹರಿದಿದೆ. ನವೆಂಬರ್‌ನಲ್ಲಿ ಉದ್ಘಾಟನೆಗೆ ಯೋಜಿಸಲಾಗಿದೆ ಎಂದರು.
ಪಡಿತರ ವಿತರಣೆ ಸಮಯದ ಬಗ್ಗೆ ದೂರಗಳು ಬಂದಿದ್ದು, ಅಧಿಕಾರಿಗಳು ಕ್ರಮ ಕೈಗೊಳ್ಳಬೇಕು. ನ್ಯಾಯಬೆಲೆ ಅಂಗಡಿಗಳಲ್ಲಿ ಅನ್ನಭಾಗ್ಯ ಯೋಜನೆ ಅರಿವು ಮೂಡಿಸಲು ಬ್ಯಾನರ್ ಅಳವಡಿಸುವಂತೆ ಅಧಿಕಾರಿಗಳಿಗೆ ಸೂಚನೆ ನೀಡಿದರು.
ತಾಲೂಕು ಪಂಚಾಯಿತಿ ಕಾರ್ಯನಿರ್ವಹಣಾಕಾರಿ ರಾಜಕುವಾರ್ ಪಿ., ತಾಲೂಕು ಗ್ಯಾರಂಟಿ ಅನುಷ್ಠಾನ ಸಮಿತಿ ಸದಸ್ಯರಾದ ವಾಲತಿ ಶಿವಾನಂದ, ರಾಮ ಪೂಜಾರಿ, ಅನೀಶ್ ಪೂಜಾರಿ, ರಾವೇಂದ್ರ ಬಿಲ್ಲವ, ಸೂರ್ಯಕಾಂತಿಡಿ., ದೇವದಾಸ್ ವಿ.ಜೆ., ಬಾಬು ದೇವಾಡಿಗ, ಮುಕ್ರಿ ಮೊಹಮ್ಮದ್ ಅಲ್ತಾಫ್, ಪ್ರಭಾಕರ ನಾಯ್ಕ, ಮೆಸ್ಕಾಂ, ಕೆಎಸ್‌ಆರ್‌ಟಿಸಿ, ಮಹಿಳಾ ಮತ್ತು ಮಕ್ಕಳ ಶಿಶು ಅಭಿವದ್ಧಿ ಇಲಾಖೆ, ಆಹಾರ ಇಲಾಖೆ ಹಾಗೂ ಯುವ ಸಬಲೀಕರಣ ಇಲಾಖಖೆ ಅಧಿಕಾರಿಗಳು ಉಪಸ್ಥಿತರಿದ್ದರು.