ಪೊಳಲಿ ದೇವಳಕ್ಕೆ ಕೆಎಸ್‌ಆರ್‌ಟಿಸಿ ಬಸ್

Btw_Bus-1
Published on

ಬಂಟ್ವಾಳ: ಮಂಗಳೂರಿನಿಂದ ಪೊಳಲಿಯ ಶ್ರೀ ರಾಜರಾಜೇಶ್ವರಿ ದೇವಸ್ಥಾನಕ್ಕೆ ಕೆಎಸ್‌ಆರ್‌ಟಿಸಿ ಬಸ್ ಸಂಚಾರಕ್ಕೆ ಶುಕ್ರವಾರ ಚಾಲನೆ ನೀಡಲಾಯಿತು. ಪೊಳಲಿ ಕ್ಷೇತ್ರದ ವಠಾರದಲ್ಲಿ ಪೂಜೆ ನೆರವೇರಿತು.

ಶ್ರೀ ಪೊಳಲಿ ಕ್ಷೇತ್ರದಿಂದ ಬೆಂಜನಪದವು, ಕಲ್ಪನೆ, ಕಡೇಗೋಳಿ, ಫರಂಗಿಪೇಟೆ, ಪಡೀಲಿನ ಮೂಲಕ ಮಂಗಳೂರಿಗೆ ಈ ಸರ್ಕಾರಿ ಬಸ್ ನ ವ್ಯವಸ್ಥೆ ಇರಲಿದೆ. ಹಲವು ವರ್ಷದಿಂದ ಈ ರೂಟ್‌ನಲ್ಲಿ ಮಂಗಳೂರಿನಿಂದ ಪೊಳಲಿಗೆ ಸರ್ಕಾರಿ ಬಸ್ ವ್ಯವಸ್ಥೆ ಕಲ್ಪಿಸುವಂತೆ ಇಲ್ಲಿನ ನಾಗರಿಕರು ಕೆಎಸ್‌ಆರ್‌ಟಿಸಿ ಹಾಗೂ ಜಿಲ್ಲಾಡಳಿತಕ್ಕೆ ಮನವಿ ಸಲ್ಲಿಸಿತ್ತು. ಬ್ರಹ್ಮರಕೊಟ್ಲು ಯಕ್ಷಮಿತ್ರ ಸದಸ್ಯರು ಹಾಗೂ ಸ್ಥಳೀಯ ಮುಖಂಡರ ಮುತುವರ್ಜಿಯಿಂದ ನವರಾತ್ರಿ ಸಂದರ್ಭ ಕೆಎಸ್‌ಆರ್‌ಟಿಸಿ ಬಸ್ ಆರಂಭಗೊಂಡಿದೆ. ನವರಾತ್ರಿಯ ಬಳಿಕವೂ ಬಸ್‌ನ ವ್ಯವಸ್ಥೆ ಮುಂದುವರಿಯಲಿದೆ ಎಂದು ಸ್ಥಳೀಯರು ತಿಳಿಸಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net