ರಾಯಲ್ಪಾಡು: ಶ್ರೀನಿವಾಸಪುರ ತಾಲೂಕು ರಾಯಲ್ಪಾಡು ಸಮೀಪದ ಕೆಂಪರೆಡ್ಡಿಗಾರಿಪಲ್ಲಿ -ಅಡ್ಡಗಲ್ ಗ್ರಾಮದ ಮಧ್ಯೆ ಶುಕ್ರವಾರ ಬೆಳಗ್ಗೆ ಕೆಎಸ್ಆರ್‌ಟಿಸಿ ಬಸ್ ಹಾಗೂ ದ್ವಿಚಕ್ರವಾ ಹನ ನಡುವೆ ಅಪಘಾತವಾಗಿ ಕಾಲೇಜಿಗೆ ಹೋಗಬೇಕಿದ್ದ ವಿದ್ಯಾರ್ಥಿ ಮೃತಪಟ್ಟಿದ್ದಾನೆ.
ಇದನ್ನೂ ಓದಿ: ಬಿಹಾರದಲ್ಲಿ ಸಿಡಿಲು ಬಡಿದು 8 ಮಂದಿ ಸಾವು
ರಾಯಲ್ಪಾಡು ಹೋಬಳಿಯ ತಮಟಂಪಲ್ಲಿ ಗ್ರಾಮದ ಭಾರ್ಗವ್ ರೆಡ್ಡಿ (18) ಮೃತ ದುರ್ದೈವಿ. ಭಾರ್ಗವ್ ಚಿಂತಾಮಣಿ ಖಾಸಗಿ ಕಾಲೇಜಿನಲ್ಲಿ ವಿದ್ಯಾಭ್ಯಾಸ ಮಾಡುತ್ತಿದ್ದ. ಬಸ್ ಮಿಸ್ ಆದ ಕಾರಣ ದ್ವಿಚಕ್ರ ವಾಹನದಲ್ಲಿ ಅಡ್ಡಗಲ್ ಗ್ರಾಮಕ್ಕೆ ಬರುತ್ತಿದ್ದ. ಈ ವೇಳೆ ಬಸ್‌ವೊಂದು ಬೈಕ್‌ಗೆ ಗುದ್ದಿದೆ. ಪರಿಣಾಮ ಕೆಳಗೆ ಬಿದ್ದ ಭಾರ್ಗವ್ ಗಂಭೀರ ಗಾಯಗೊಂಡು ಮೃತಪಟ್ಟಿದ್ದಾನೆ.
ಮಗನ ಮೃತ ದೇಹ ಕಂಡು ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿದೆ. ಸ್ಥಳಕ್ಕೆ ಗೌನಿಪಲ್ಲಿ ಪೊಲೀಸ್ ಠಾಣಾ ವೃತ್ತ ನಿರೀಕ್ಷಕ ಜಯಾನಂದ್ ಹಾಗು ಪಿಎಸ್ಐ ರಾಮು ಭೇಟಿ ನೀಡಿ ಪರಿಶೀಲಿಸಿದ್ದು, ಪ್ರಕರಣ ದಾಖಲಿಸಿದ್ದಾರೆ. ಗೌನಿಪಲ್ಲಿ ಪೊಲೀಸ್ ಠಾಣೆಗೆ ಎಸ್ಪಿ ಬಿ.ನಿಖಿಲ್ ಅವರು ಭೇಟಿ ನೀಡಿ ಮಾಹಿತಿ ಪಡೆದಿದ್ದಾರೆ. ಮೃತದೇಹವನ್ನು ಮರಣೋತ್ತರ ಪರೀಕ್ಷೆ ಬಳಿಕ ಕುಟುಂಬಸ್ಥರಿಗೆ ಹಸ್ತಾಂತರ ಮಾಡಲಾಗಿದೆ.
ಬಿಜೆಪಿಯವರು ರಾಜ್ಯಪಾಲರನ್ನು ಮುಂದಿಟ್ಟುಕೊಂಡು ಸರ್ಕಾರವನ್ನು ಹೆದರಿಸುತ್ತಿದೆ: ಪರಮೇಶ್ವರ್