ಪ್ರತಿಭಟನಾನಿರತ ಸಾರಿಗೆ ನೌಕರರನ್ನ ಅಟ್ಟಾಡಿಸಿ ಹೊಡೆದ ಪೊಲೀಸರು

protest
Published on

ಕೋಲಾರ: ಪ್ರತಿಭಟನಾನಿರತ ಸಾರಿಗೆ ನೌಕರರ ಕೋಲಾರ ಗ್ರಾಮಾಂತರ ಪೊಲೀಸ್ ಠಾಣೆ ಎದುರು ಲಾಠಿ ಚಾರ್ಜ್ ಮಾಡಲಾಗಿದೆ.

ವಿವಿಧ ಬೇಡಿಕೆ ಈಡೇರಿಸುವಂತೆ ಆಗ್ರಹಿಸಿ ಸಂಗೊಂಡಹಳ್ಳಿ ಬಳಿ ಪ್ರತಿಭಟನೆ ಮಾಡುತ್ತಿದ್ದ ನೌಕರರನ್ನು ಪೊಲೀಸರು ಠಾಣೆಗೆ ಕರೆತಂದಿದ್ದರು. ಪೊಲೀಸರ ಕ್ರಮ ಖಂಡಿಸಿ ಪೊಲೀಸ್ ಠಾಣೆಗೆ ಮುತ್ತಿಗೆ ಹಾಕಲು ಮಂಗಳವಾರ ಬೆಳಗ್ಗೆ ಯತ್ನಿಸಿದ ಸಾರಿಗೆ ನೌಕರರು ಪೊಲೀಸರೊಂದಿಗೆ ಮಾತಿನ ಚಕಮಕಿ ನಡೆಸಿದರು.

ಕೋವಿಡ್​ ಹಿನ್ನೆಲೆಯಲ್ಲಿ ಗುಂಪು ಸೇರುವಿಕೆ, ಪ್ರತಿಭಟನೆ, ಸಭೆ, ಸಮಾರಂಭಕ್ಕೆ ಅವಕಾಶ ಇಲ್ಲ. ಇಲ್ಲಿಂದ ಹೊರಡಿ ಎಂದರೂ ನೌಕರರು ನಮ್ಮವರನ್ನು ಬಿಟ್ಟುಬಿಡಿ ಎನ್ನುತ್ತಾ ಪೊಲೀಸ್​ ಠಾಣೆಗೆ ಮುತ್ತಿಗೆ ಹಾಕಲು ಯತ್ನಿಸಿದರು. ಪರಿಸ್ಥಿತಿ ನಿಯಂತ್ರಿಸಲು ಪ್ರತಿಭಟನಾನಿರತ ಸಾರಿಗೆ ನೌಕರರ ಮೇಲೆ ಪೊಲೀಸರು ಲಾಠಿ ಪ್ರಹಾರ ನಡೆಸಿದರು. ಕೆಲ ಸಾರಿಗೆ ನೌಕರರನ್ನ ಅಟ್ಟಾಡಿಸಿ ಹೊಡೆದರು.

ಸಾರಿಗೆ ನೌಕರರ ಮೇಲೆ ಪೊಲೀಸ್​ ಲಾಠಿ ಚಾರ್ಜ್​ ನಡೆಸಿದ ವಿಡಿಯೋ ನೋಡಲು ವಿಜಯವಾಣಿ ಫೇಸ್​ಬುಕ್​ ಲಿಂಕ್​ ಅನ್ನು ಕ್ಲಿಕ್​ ಮಾಡಿ https://www.facebook.com/VVani4U/videos/336254347836192

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net