ವಲಸೆ ಕಾರ್ಮಿಕರಿಗೆ 3 ದಿನ ಫ್ರೀ ಬಸ್

blank

ಬೆಂಗಳೂರು: ಕೆಎಸ್​ಆರ್​ಟಿಸಿ ಬಸ್​ನಲ್ಲಿ ಇಂದಿನಿಂದ ಮೂರು ದಿನ ವಲಸೆ ಕಾರ್ಮಿಕರು ತಮ್ಮ ಊರಿಗಳಿಗೆ ಉಚಿತವಾಗಿ ಪ್ರಯಾಣಿಸಲು ರಾಜ್ಯ ಸರ್ಕಾರ ಅವಕಾಶ ಮಾಡಿಕೊಟ್ಟಿದೆ. ಕಾರ್ಮಿಕರ ಸಂಕಷ್ಟಕ್ಕೆ ಸ್ಪಂದಿಸಿದ ಸಿಎಂ ಬಿ.ಎಸ್​. ಯಡಿಯೂರಪ್ಪ ಅವರು ಈ ಆದೇಶ ಹೊರಡಿಸಿದ್ದು, ಕಾರ್ಮಿಕರ ಪ್ರಯಾಣ ವೆಚ್ಚವನ್ನು ಸರ್ಕಾರವೇ ಭರಿಸಲಿದೆ ಎಂದಿದ್ದಾರೆ.

ಲಾಕ್​ಡೌನ್​ನಿಂದಾಗಿ ಕೆಲಸವೂ ಇಲ್ಲದೆ, ಇತ್ತ ಊರಿಗೂ ಹೋಗಲಾಗದೆ ಬೆಂಗಳೂರಿನಲ್ಲೇ ಪರದಾಡುತ್ತಿದ್ದ ಕಾರ್ಮಿಕರೀಗ ಯಾವುದೇ ಹಣ ಕೊಡದೆ ಉಚಿತವಾಗಿ ಪ್ರಯಾಣಿಸಬಹುದು. ಎಲ್ಲ ಪ್ರಯಾಣಿಕರಿಗೂ ಉಚಿತವಾಗಿ ಊಟ ಮತ್ತು ನೀರಿನ ವ್ಯವಸ್ಥೆಯನ್ನೂ ಮಾಡಲಾಗಿದೆ. ರಾತ್ರಿ ವೇಳೆ ಪ್ರಯಾಣ ಇರುವುದಿಲ್ಲ, ಬೆಳಗ್ಗೆ 6 ರಿಂದ ಸಂಜೆ 7ರವರೆಗೆ ಬಸ್​ ಸಂಚರಿಸಲಿದ್ದು, ನಾನ್​ ಸ್ಟಾಪ್​ ಆಗಿರಲಿದೆ ಎಂದು ಸಾರಿಗೆ ಸಚಿವ ಲಕ್ಷ್ಮಣ ಸವದಿ ತಿಳಿಸಿದ್ದಾರೆ.

ಇದನ್ನೂ ಓದಿ ಕೆಎಸ್​ಆರ್​ಟಿಸಿಗೆ 1 ಕೋಟಿ ರೂ. ದೇಣಿಗೆ ಕೊಟ್ಟ ಕೆಪಿಸಿಸಿ, ಕಾರ್ಮಿಕರ ಕಷ್ಟ ಆಲಿಸಿದ ಕಾಂಗ್ರೆಸ್

ಅಗತ್ಯಬಿದ್ದರೆ ನಾಲ್ಕನೇ ದಿನವೂ ಈ ಸೌಲಭ್ಯ ಮುಂದುವರಿಯಲಿದೆ. ಕಾರ್ಮಿಕರು ಆತಂಕ ಪಡುವ ಅಗತ್ಯವಿಲ್ಲ. ಈಗಾಗಲೇ ಟಿಕೆಟ್​ ಪಡೆದಿರುವ ಕಾರ್ಮಿಕರಿಗೆ ಹಣ ವಾಪಸ್ ಆಗಲಿದೆ ಎಂದು ಸಾರಿಗೆ ಸಚಿವರು ಅಭಯ ನೀಡಿದ್ದಾರೆ.

ಕಾರ್ಮಿಕರು ಸಾಮಾಜಿಕ ಅಂತರ ಕಾಯ್ದುಕೊಂಡು ಪ್ರಯಾಣಿಸಬೇಕು. ಬಸ್​ ಹತ್ತುವಾಗ ನೂಕುನುಗ್ಗಲು ಮಾಡಿಕೊಳ್ಳಬಾರದು ಎಂದು ಸಿಎಂ ಯಡಿಯೂರಪ್ಪ ಮನವಿ ಮಾಡಿದ್ದಾರೆ.

ಇದನ್ನೂ ಓದಿಕಾರ್ವಿುಕರ ಪ್ರಯಾಣ ವ್ಯವಸ್ಥೆಯೇ ಅವ್ಯವಸ್ಥೆ: ಊರಿಗೆ ತೆರಳಲು ಮೆಜೆಸ್ಟಿಕ್​ಗೆ ಬಂದ ಸಾವಿರಾರು ಜನರು

ಕಾರ್ಮಿಕರ ಆರೋಗ್ಯ ತಪಾಸಣೆ ನಡೆಸಿ ಬಸ್ ಹತ್ತಿಸಿಕೊಳ್ಳಲಾಗುತ್ತಿದೆ. ಈಗಾಗಲೇ ಹತ್ತಾರು ಬಸ್​ಗಳು ಕಾರ್ಮಿಕರ ಊರುಗಳತ್ತ ಹೊರಟಿವೆ. ರಾಜ್ಯದ ಎಲ್ಲ ಜಿಲ್ಲೆಯಲ್ಲಿರುವ ಕಾರ್ಮಿಕರಿಗೂ ಅವರ ಊರಿಗೆ ತೆರಳಲು ಆಯಾ ಭಾಗದಲ್ಲಿ ಬಸ್​ ಸೌಲಭ್ಯ ಮಾಡಲಾಗುತ್ತಿದ್ದು, ಇದು ರಾಜ್ಯದ ವಲಸೆ ಕಾರ್ಮಿಕರಿಗಷ್ಟೆ ಅನ್ವಯವಾಗಲಿದೆ.

Share This Article

ರಾತ್ರಿ ವೇಳೆ ಮಾವಿನ ಹಣ್ಣು ತಿನ್ನಬಾರದು! ಯಾಕೆ ಗೊತ್ತಾ? mango

mango: ಬೇಸಿಗೆಯಲ್ಲಿ ಹೆಚ್ಚು ಇಷ್ಟವಾಗುವ ಹಣ್ಣು ಮಾವಿಹಣ್ಣು. ಇದು ವಿಟಮಿನ್ ಎ, ಸಿ, ಫೈಬರ್, ಉತ್ಕರ್ಷಣ…

ಅಕ್ಷಯ ತೃತೀಯ ಹಬ್ಬಕ್ಕೂ ಮುನ್ನ ನಿಮ್ಮ ಮನೆಯಿಂದ ಈ ವಸ್ತುಗಳನ್ನು ತೆಗೆದುಹಾಕಿ..  Akshaya Tritiya

Akshaya Tritiya: ಅಕ್ಷಯ ತೃತೀಯ ಹಬ್ಬವನ್ನು ಲಕ್ಷ್ಮಿ ದೇವಿಯ ಹಬ್ಬವೆಂದು ಪರಿಗಣಿಸಲಾಗುತ್ತದೆ.  ಚಿನ್ನದ ಅಂಗಡಿಗಳು ವ್ಯಾಪಾರದಿಂದ…

ಕಬ್ಬಿನ ರಸವನ್ನು ಎಷ್ಟು ದಿನ ಸಂಗ್ರಹಿಸಬಹುದು..ಈ ಜ್ಯೂಸ್​​ ಬಗ್ಗೆ ನೀವು ತಿಳಿಯಲೇಬೇಕಾದ ವಿಷಯಗಳಿವು..Sugarcane Juice

  Sugarcane Juice: ಕಬ್ಬಿನ ಜ್ಯೂಸ್​​ ಬೇಸಿಗೆಯಲ್ಲಿ ಎಲ್ಲರೂ ಹೆಚ್ಚು ಇಷ್ಟಪಡುವ ಆರೋಗ್ಯಕರ ಪಾನೀಯಗಳಲ್ಲಿ ಒಂದಾಗಿದೆ.…