More

  ಬ್ರೇಕ್​ ಫೇಲ್​ ಆಗಿ ಕೆಎಸ್​ಆರ್​ಟಿಸಿ ಬಸ್​ ಪಲ್ಟಿ; 20ಕ್ಕೂ ಹೆಚ್ಚು ಜನರಿಗೆ ಗಂಭೀರ ಗಾಯ

  ಬೆಳಗಾವಿ: ಬ್ರೇಕ್​ ಫೇಲ್​ ಆಗಿ ರಾಜ್ಯ ರಸ್ತೆ ಸಾರಿಗೆ ನಿಗಮದ ರಾಜಹಂಸ ಬಸ್​ ಪಲ್ಟಿಯಾಗಿ 20ಕ್ಕೂ ಅಧಿಕ ಮಂದಿ ಗಂಭೀರವಾಗಿ ಗಾಯಗೊಂಡಿರುವ ಘಟನೆ ಬೆಳಗಾವಿ ಜಿಲ್ಲೆಯ ಕಿತ್ತೂರು ತಾಲ್ಲೂಕಿನ ತಿಮ್ಮಾಪುರ ಬಳಿ ನಡೆದಿದೆ. ಗಾಯಾಳುಗಳನ್ನು ಆಸ್ಪತ್ರೆಗೆ ದಾಖಲಿಸಲಾಗಿದ್ದು, 10ಕ್ಕೂ ಅಧಿಕ ಮಂದಿಗೆ ಗಂಭೀರ ಗಾಯಗಳಾಗಿವೆ ಎಂದು ವರದಿಯಾಗಿದೆ.

  ಈ ಕುರಿತು ಪ್ರತಿಕ್ರಿಯಿಸಿರುವ ಹಿರಿಯ ಪೊಲೀಸ್​ ಅಧಿಕಾರಿಯೊಬ್ಬರು, ಹುಬ್ಬಳ್ಳಿಯಿಂದ ಬೆಳಗಾವಿಗೆ ತೆರಳುತ್ತಿದ್ದ ರಾಜಹಂಸ ಬಸ್​ ತಿಮ್ಮಾಪುರ ಬಳಿ ಏಕಾಏಕಿ ಬ್ರೇಕ್ ಫೇಲ್​ ಆಗಿದೆ. ಪರಿಣಾಮ ರಸ್ತೆ ಪಕ್ಕದಲ್ಲಿದ್ದ ಬ್ಯಾರಿಕೇಡ್​​ಗೆ ಡಿಕ್ಕಿಯಾಗಿ ಬಳಿಕ ಪಲ್ಟಿಯಾಗಿದೆ.

  ಘಟನೆಯಲ್ಲಿ 20ಕ್ಕೂ ಹೆಚ್ಚು ಮಂದಿಗೆ ಗಾಯಗಳಾಗಿದ್ದು, 10ಕ್ಕೂ ಅಧಿಕ ಮಂದಿಗೆ ಗಂಭೀರ ಗಾಯಗಳಾಗಿವೆ. ಬಸ್​ ಒಳಗೆ ಸಿಲುಕಿಕೊಂಡಿದ್ದ ಪ್ರಯಾಣಿಕರನ್ನು ಹಿಂದಿನ ಗಾಜು ಒಡೆದು ಹೊರಕ್ಕೆ ಕರೆತರಲಾಗಿದ್ದು, ಗಾಯಾಳುಗಳನ್ನು ಆಸ್ಪತ್ರೆಗೆ ರವಾನಿಸಲಾಗಿದೆ. ಬ್ರೇಕ್​​ಫೇಲ್​ ಆಗಿರುವುದರಿಂದ ಈ ಅವಘಢ ಸಂಭವಿಸಿದ್ದು, ಕಿತ್ತೂರು ಪೊಲೀಸ್​ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ ಎಂದು ಹಿರಿಯ ಪೊಲೀಸ್​ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

  See also  ನೀವಿರುವ ಪ್ರದೇಶ ಕಂಪ್ಲೀಟ್​ ಸೀಲ್​ ಆದರೆ ಹೇಗಿರುತ್ತೆ ಪರಿಸ್ಥಿತಿ ಗೊತ್ತಾ?

  ಸಿನಿಮಾ

  ಲೈಫ್‌ಸ್ಟೈಲ್

  ಟೆಕ್ನಾಲಜಿ

  Latest Posts