More

    ರಸ್ತೆಗಿಳಿದ ಖಾಸಗಿ ಬಸ್‌ಗಳು ; ದುಪ್ಪಟ್ಟು ಹಣ ವಸೂಲಿ ಮಾಡಿ ದರ್ಬಾರ್

    ತುಮಕೂರು : ವಿವಿಧ ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿ ಸಾರಿಗೆ ನೌಕರರ ಸಂಘಟನೆ ಮುಷ್ಕರಕ್ಕೆ ಕರೆ ನೀಡಿದ್ದು, ಸರ್ಕಾರಿ ಬಸ್‌ಗಳು ರಸ್ತೆಗಳಿಯದೇ ಪ್ರಯಾಣಿಕರು ಪರದಾಡಿದರು.

    ಸರ್ಕಾರಿ ಬಸ್‌ಗಳಿಲ್ಲದರಿವುದನ್ನೇ ಬಂಡವಾಳವಾಗಿಸಿಕೊಂಡ ಖಾಸಗಿ ಬಸ್‌ಗಳು ಅಸಹಾಯಕರಿಂದ ದುಪ್ಪಟ್ಟು ಹಣ ವಸೂಲಿ ಮಾಡಿದರು, ಪ್ರಯಾಣ ದರವನ್ನು ಹೆಚ್ಚಿದಂತೆ ಜಿಲ್ಲಾಧಿಕಾರಿ ನೀಡಿದ್ದ ಸೂಚನೆಗೂ ಖಾಸಗಿ ಬಸ್ ಮಾಲೀಕರು ತಲೆಕೆಡಿಸಿಕೊಳ್ಳಲಿಲ್ಲ. ಸರ್ಕಾರಿ ಬಸ್ ಕಚೇರಿ, ಶಾಲೆ, ಕಾಲೇಜುಗಳು, ಖಾಸಗಿ ಸಂಸ್ಥೆಗಳ ಉದ್ಯೋಗಿಗಳು ಬೆಳಗ್ಗೆ ಖಾಸಗಿ ವಾಹನಗಳನ್ನಿಡಿದು ತುಮಕೂರು ತಲುಪಿದ್ದರಾದರೂ ವಾಪಸ್ ಮನೆಗಳಿಗೆ ತರೆಳುವಾಗ ವಾಹನಗಳಿಲ್ಲದೆ ಪೇಚಾಡಿದರು.

    ನಗರದಿಂದ ತುಮಕೂರು ಜಿಲ್ಲೆಯ 9 ತಾಲೂಕು ಕೇಂದ್ರಗಳಾದ ತಿಪಟೂರು, ಕುಣಿಗಲ್, ಪಾವಗಡ, ಮಧುಗಿರಿ, ಕೊರಟಗೆರೆ, ಚಿಕ್ಕನಾಯಕನಹಳ್ಳಿ, ಶಿರಾ, ಗುಬ್ಬಿ, ತುರುವೇಕೆರೆಗೆ ತೆರೆಳಲು ಸರಿಯಾದ ಬಸ್ ವ್ಯವಸ್ಥೆಗಳಿಲ್ಲದೆ ಪ್ರಯಾಣಿಕರು ಪರದಾಡಿದರು. ಖಾಸಗಿ ಬಸ್ ವ್ಯವಸ್ಥೆ ಮಾಡುವುದಾಗಿ ಜಿಲ್ಲಾಡಳಿತ ನೀಡಿದ್ದ ಭರವಸೆ ಹುಸಿಯಾಯಿತು.

    ಸಾರಿಗೆ ನೌಕರರ ಮುಷ್ಕರದ ಹಿನ್ನೆಲೆಯಲ್ಲಿ ಜಿಲ್ಲಾಡಳಿತ ಹಾಗೂ ಜಿಲ್ಲಾ ಸಾರಿಗೆ ಸಮಿತಿ ಜಿಲ್ಲಾಧಿಕಾರಿ ನೇತೃತ್ವದಲ್ಲಿ ಸಭೆ ನಡೆಸಿ, ಪ್ರಯಾಣಿಕರಿಗೆ ತೊಂದರೆಯಾಗದ ರೀತಿ, ಖಾಸಗಿ ಸಾರಿಗೆ ಸೇವೆ ಉಪಯೋಗಿಸಿಕೊಳ್ಳಲು ತೀರ್ಮಾನಿಸಿ, ಅಗತ್ಯ ಕ್ರಮ ಕೈಗೊಂಡಿದ್ದರೂ ಸಹ ಅಂತಹ ದೊಡ್ಡ ಪ್ರಮಾಣದ ಪ್ರಯೋಜನವಾಗಲಿಲ್ಲ
    ಆರ್‌ಟಿಒ ಎಸ್.ರಾಜು ಮಾತನಾಡಿ, ಪ್ರಯಾಣಿಕರಿಗೆ ತೊಂದರೆಯಾಗದಂತೆ 550 ಖಾಸಗಿ ಬಸ್‌ಗಳನ್ನು ಓಡಿಸಲು ಮಂಗಳವಾರ ನಡೆದ ಸಾರಿಗೆ ಸಮಿತಿ ಸಭೆಯಲ್ಲಿ ತೀರ್ಮಾನ ಕೈಗೊಳ್ಳಲಾಗಿತ್ತು. ಖಾಸಗಿ ಬಸ್, ಮ್ಯಾಕ್ಸಿಕ್ಯಾಬ್,ಮಿನಿ ಬಸ್, ಟೆಂಪೋ ಇನ್ನಿತರ ಖಾಸಗಿ ವಾಹನಗಳನ್ನು ರಸ್ತೆಗೆ ಇಳಿಸಲಾಗಿದೆ. ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಸಲಹೆಯಂತೆ ಕಾರ್ಯನಿರ್ವಹಿಸಿವೆ ಎಂದರು.

    ಪೊಲೀಸ್ ಬಂದೋಬಸ್ತ್ : ಪ್ರಯಾಣಿಕರಿಲ್ಲದೆ ಖಾಲಿ ಖಾಲಿಯಾಗಿರುವ ಕೆಎಸ್‌ಆರ್‌ಟಿಸಿ ಬಸ್ ನಿಲ್ದಾಣಕ್ಕೆ ಮುಂಜಾಗ್ರತಾ ಕ್ರಮವಾಗಿ ಬಿಗಿ ಪೊಲೀಸ್ ಬಂದೋ ಬಸ್ತ್ ವ್ಯವಸ್ಥೆ ಮಾಡಲಾಗಿದ್ದು, ಕೆಎಸ್‌ಆರ್‌ಪಿ ತುಕಡಿ, ಡಿಎಆರ್ ತುಕಡಿ, 40 ಪೊಲೀಸ್ ಪೇದೆಗಳನ್ನು ಬಂದೋಬಸ್ತ್‌ಗಾಗಿ ನಿಯೋಜಿಸಲಾಗಿತ್ತು.

    ಬುಧವಾರ ಯಾವುದೇ ಬಸ್ ಕಾರ್ಯಾಚರಣೆ ಮಾಡಲಿಲ್ಲ, ಮುಷ್ಕರ ನಿರತ ಚಾಲಕರು, ನಿರ್ವಾಹಕರೊಂದಿಗೆ ಮಾತುಕತೆ ನಡೆಸಲಾಗುತ್ತಿದ್ದು, 20 ಸಿಬ್ಬಂದಿ ಕರ್ತವ್ಯಕ್ಕೆ ಹಾಜರಾಗಲು ಬಯಸಿದ್ದಾರೆ, ಸಿಬ್ಬಂದಿ ಬಂದರೆ ಅಗತ್ಯವಿರುವ ಕಡೆ ಬಸ್‌ಗಳ ಸಂಚಾರ ಕಾರ್ಯಾರಂಭ ಆಗಲಿದೆ.
    ಕೆ.ಆರ್.ಬಸವರಾಜು ಕೆಎಸ್‌ಆರ್‌ಟಿಸಿ ವಿಭಾಗೀಯ ನಿಯಂತ್ರಣಾಧಿಕಾರಿ

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts