Thursday, 15th November 2018  

Vijayavani

ಸಚಿವ ಸ್ಥಾನಕ್ಕಾಗಿ ಬಳ್ಳಾರಿ ಶಾಸಕರ ಲಾಬಿ - ತುಕಾರಾಂ ಸೇರಿದಂತೆ ಐವರ ಪೈಪೋಟಿ        RSS ಬೈಠಕ್​​ನಲ್ಲಿ ರಾಮಮಂದಿರ ಪ್ರತಿಧ್ವನಿ-ಶಬರಿಮಲೆ ಹೋರಾಟದಿಂದ ಹಿಂದೆ ಸರಿಯಲ್ಲ-ಷಾ ಸಮ್ಮುಖದಲ್ಲಿ ನಿರ್ಧಾರ        KRS ಬಳಿ 125 ಅಡಿ ಎತ್ತರದ ಕಾವೇರಿ ಮಾತೆ ಸ್ಟ್ಯಾಚ್ಯೂ ನಿರ್ಧಾರ-ಡಿಕೆಶಿ ನೇತೃತ್ವದ ಸಮಿತಿಯ ತೀರ್ಮಾನ        ರವಿ ಕೊಲೆ ಹಿಂದೆ ಸೈಲೆಂಟ್ ಸುನಿಲನ ನೆರಳು - ತುಮಕೂರು ಡಾಬಾದಲ್ಲೇ ನಡೆದಿತ್ತು ಹಂತಕ ಮೀಟಿಂಗ್        ತಮಿಳುನಾಡಿನಲ್ಲಿ ಗಜ ಆರ್ಭಟ-ಸಮುದ್ರದಲ್ಲಿ ಅಲೆಗಳ ಅಬ್ಬರ-ಬೆಂಗಳೂರಿನ ಹಲವೆಡೆ ಮಳೆ ಸಾಧ್ಯತೆ        ದೀಪ್​-ವೀರ್​​ ಕಲ್ಯಾಣೋತ್ಸವ-ನಿನ್ನೆ ಕೊಂಕಣಿ, ಇಂದು ಸಿಂಧಿ ಸ್ಟೈಲ್​ ಕಲ್ಯಾಣ-ಇಟಲಿಯಲ್ಲಿ ಅದ್ದೂರಿ ವಿವಾಹ       
Breaking News

ಕೆಎಸ್​ಆರ್​ಟಿಸಿ ಬಸ್​ನಲ್ಲಿ ಜೋಡಿಯ ಅಸಭ್ಯ ವರ್ತನೆ

Sunday, 17.06.2018, 10:31 AM       No Comments

ಬೆಂಗಳೂರು: ಕೋಲಾರದಿಂದ ಬೆಂಗಳೂರಿಗೆ ಕೆಎಸ್​ಆರ್​ಟಿಸಿ ಬಸ್​ನಲ್ಲಿ ಬಂದ ಜೋಡಿಯೊಂದು, ಪ್ರಯಾಣಿಕರ ನಡುವೆಯೇ ಅಸಭ್ಯವಾಗಿ ವರ್ತಿಸಿರುವ ವಿಡಿಯೊವೊಂದು ಮಾಧ್ಯಮಗಳಿಗೆ ಬಿಡುಗಡೆಯಾಗಿದೆ.

ಕೋಲಾರದ ವಿ.ಕೋಟದಲ್ಲಿ ಮಹಿಳೆಯೊಬ್ಬರು ಬಸ್​ ಹತ್ತಿಕೊಂಡಿದ್ದರು. ಆಕೆಯ ಪತಿ ವಿ.ಕೋಟಾ ನಿಲ್ದಾಣದ ವರೆಗೆ ಬಂದು​ ಬಸ್​ ಹತ್ತಿಸಿ ಹೋಗಿದ್ದರು. 6 ಕಿ.ಮೀ ಕ್ರಮಿಸಿದ ನಂತರ ಬಸ್​ಗೆ ಹತ್ತಿಕೊಂಡ ಬೇರೊಬ್ಬ ವ್ಯಕ್ತಿ ಮಹಿಳೆಯ ಪಕ್ಕದಲ್ಲೇ ಕುಳಿತಿದ್ದಾನೆ. ನಂತರ ಇಬ್ಬರೂ ಕೂಡ ಬಸ್​ನ ಹಿಂಬದಿಯ ಆಸನದಲ್ಲಿ ಕುಳಿತು ಬೆಂಗಳೂರಿಗೆ ಬರುವ ವರೆಗೆ ಬಸ್​ನಲ್ಲಿಯೇ, ಪ್ರಯಾಣಿಕರ ನಡುವೆಯೇ ಮೈಮೆರತು ಸರಸ ಸಲ್ಲಾಪದಲ್ಲಿ ತೊಡಗಿದ್ದಾರೆ. ಅಸಭ್ಯವಾಗಿ ವರ್ತಿಸಿದ್ದಾರೆ ಎಂದು ತಿಳಿದು ಬಂದಿದೆ.

ಈ ಜೋಡಿಯ ಚೇಷ್ಟೆಯನ್ನು ಪಕ್ಕದ ಆಸನದಲ್ಲಿ ಕುಳಿತಿದ್ದ ಸಹ ಪ್ರಯಾಣಿಕರು ಮೊಬೈಲ್​ನಲ್ಲಿ ವಿಡಿಯೋ ಚಿತ್ರೀಕರಣ ಮಾಡಿ ಮಾಧ್ಯಮಗಳಿಗೆ ಬಿಡುಗಡೆ ಮಾಡಿದ್ದಾರೆ.

Leave a Reply

Your email address will not be published. Required fields are marked *

Back To Top