

ಮಂಗಳೂರು: ಕೆಎಸ್ಸಾರ್ಟಿಸಿ ಮಂಗಳೂರು ವಿಭಾಗದ ವತಿಯಿಂದ ದಸರಾ ಪ್ರಯುಕ್ತ ಮಂಗಳೂರಿನ ಸುತ್ತಮುತ್ತಲಿನ ದೇವಸ್ಥಾನಗಳ ದರ್ಶನಕ್ಕೆ ಹಾಗೂ ಮಂಗಳೂರು-ಮಡಿಕೇರಿ, ಮಂಗಳೂರು-ಕೊಲ್ಲೂರು, ಮಂಗಳೂರು-ಮುರ್ಡೇಶ್ವರ ವಿಶೇಷ ಪ್ಯಾಕೇಜ್ ಪ್ರವಾಸ ಅ 3ರಿಂದ 12ರವರೆಗೆ ಆಯೋಜಿಸಲಾಗಿದೆ.
*ನವದುರ್ಗ ದರ್ಶನ:
ಮಂಗಳೂರು ಬಸ್ ನಿಲ್ದಾಣದಿಂದ ಬೆಳಗ್ಗೆ 8ಕ್ಕೆ ಹೊರಟು ಮಂಗಳಾದೇವಿ ದೇವಸ್ಥಾನ-ಸುಂಕದಕಟ್ಟೆ ಅಂಬಿಕಾ ಅನ್ನಪೂರ್ಣೇಶ್ವರಿ ದೇವಸ್ಥಾನ-ಕಟೀಲು ದುರ್ಗಾಪರಮೇಶ್ವರಿ ದೇವಸ್ಥಾನ-ಬಪ್ಪನಾಡು ದುರ್ಗಾಪರಮೇಶ್ವರಿ ದೇವಸ್ಥಾನ(ಮಧ್ಯಾಹ್ನದ ಊಟ), ಸಸಿಹಿತ್ಲು ಭಗವತಿ ದೇವಸ್ಥಾನ ಹಾಗೂ ಬೀಚ್, ಚಿತ್ರಾಪುರ ದುರ್ಗಾಪರಮೇಶ್ವರಿ ದೇವಸ್ಥಾನ, ಉರ್ವ ಮಾರಿಯಮ್ಮ ದೇವಸ್ಥಾನ(ಸಂಜೆ ಉಪಾಹಾರ), ಕುದ್ರೋಳಿ ಗೋಕರ್ಣನಾಥ ದೇವಸ್ಥಾನ, ನವದುರ್ಗಾ ದರ್ಶನ ರಾತ್ರಿ 8ಕ್ಕೆ ಮಂಗಳೂರು ಬಸ್ ನಿಲ್ದಾಣಕ್ಕೆ ಹಿಂದಿರುಗಲಾಗುತ್ತದೆ. ಒಟ್ಟು ಪ್ರಯಾಣ ದರ(ಊಟ, ಉಪಾಹಾರ ಹೊರತುಪಡಿಸಿ) ವಯಸ್ಕರಿಗೆ 400 ರೂ., ಮಕ್ಕಳಿಗೆ300 ರೂ.
*ಮಡಿಕೇರಿ ಪ್ರವಾಸ:
ಮಂಗಳೂರಿನಿಂದ ಬೆಳಗ್ಗೆ 7ಕ್ಕೆ ಹೊರಟು-ಮಡಿಕೇರಿ-ರಾಜಾ ಸೀಟ್-ಅಬ್ಬಿ ಫಾಲ್ಸ್-ನಿಸರ್ಗಧಾಮ-ಗೋಲ್ಡನ್ ಟೆಂಪಲ್ ಪ್ರವಾಸ ಕೈಗೊಂಡು ರಾತ್ರಿ 9ಕ್ಕೆ ಮಂಗಳೂರು ಬಸ್ ನಿಲ್ದಾಣ(ಊಟ, ಉಪಾಹಾರ ಹೊರತುಪಡಿಸಿ) ವಯಸ್ಕರಿಗೆ 500 ರೂ., ಮಕ್ಕಳಿಗೆ 400 ರೂ.
*ಮಂಗಳೂರು-ಕೊಲ್ಲೂರು:
ಮಂಗಳೂರು ಬಸ್ ನಿಲ್ದಾಣದಿಂದ ಬೆಳಗ್ಗೆ ಹೊರಟು ಉಚ್ಚಿಲ ಮಹಾಲಕ್ಷ್ಮೀ ದೇವಸ್ಥಾನ-ಕಮಲಶಿಲೆ ಬ್ರಾಹ್ಮೀ ದುರ್ಗಾಪರಮೇಶ್ವರಿ ದೇವಸ್ಥಾನ(ಊಟ), ಕೊಲ್ಲೂರು ಮೂಕಾಂಬಿಕಾ ದೇವಸ್ಥಾನ, ಮಾರಣಕಟ್ಟೆ ಬ್ರಹ್ಮಲಿಂಗೇಶ್ವರ ದೇವಸ್ಥಾನ, ರಾತ್ರಿ 7ಕ್ಕೆ ಮಂಗಳೂರು ಬಸ್ ನಿಲ್ದಾಣ ತಲುಪಲಿದೆ.(ಊಟ, ಉಪಾಹಾರ ಹೊರತುಪಡಿಸಿ) ವಯಸ್ಕರಿಗೆ 500 ರೂ, ಮಕ್ಕಳಿಗೆ 400 ರೂ.
*ಮಂಗಳೂರು-ಮುರ್ಡೇಶ್ವರ:
ಮಂಗಳೂರು ಬಸ್ ನಿಲ್ದಾಣದಿಂದ ಬೆಳಗ್ಗೆ 7ಕ್ಕೆ ಹೊರಟು ಮುರ್ಡೇಶ್ವರ, ಚಂಡಿಕಾ ದುರ್ಗಾಪರಮೇಶ್ವರಿ ದೇವಸ್ಥಾನ ಕುಂಭಾಶಿ, ಆನೆಗುಡ್ಡೆ ಗಣಪತಿ ದೇವಸ್ಥಾನ, ಉಚ್ಚಿಲ ಮಹಾಲಕ್ಷ್ಮೀ ದೇವಸ್ಥಾನ, ರಾತ್ರಿ 7ಕ್ಕೆ ಮಂಗಳೂರು ಬಸ್ ನಿಲ್ದಾಣ ತಲುಪಲಿದೆ.(ಊಟ, ಉಪಾಹಾರ ಹೊರತುಪಡಿಸಿ) ವಯಸ್ಕರಿಗೆ 550 ರೂ, ಮಕ್ಕಳಿಗೆ 450ರೂ.
ಡಿಡಿಡಿ.ಠ್ಟಠ್ಚಿ.ಜ್ಞಿನಲ್ಲಿ ಮುಂಗಡ ಆಸನ ಕಾಯ್ದಿರಿಸಬಹುದು. ಮಾಹಿತಿಗೆ 7760990702 ಸಂಪರ್ಕಿಸಬಹುದು.