ಜೆಡಿಎಸ್ ಅಭ್ಯರ್ಥಿ ಕಣಕ್ಕಿಳಿಯುವುದು ಖಚಿತ

ಮದ್ದೂರು: ಮಂಡ್ಯ ಲೋಕಸಭಾ ಕ್ಷೇತ್ರದಿಂದ ಜೆಡಿಎಸ್ ಅಭ್ಯರ್ಥಿ ಕಣಕ್ಕಿಳಿಯುವುದು ಖಚಿತ. ಮೈತ್ರಿ ಸರ್ಕಾರ ಅಸ್ತಿತ್ವವಿರುವುದರಿಂದ ಕಾಂಗ್ರೆಸ್ ಮೈತ್ರಿ ಧರ್ಮ ಪಾಲಿಸಲಿದೆ ಎಂದು ವಿಧಾನ ಪರಿಷತ್ ಸದಸ್ಯ ಕೆ.ಟಿ.ಶ್ರೀಕಂಠೇಗೌಡ ತಿಳಿಸಿದರು.

ಕೊಪ್ಪದಲ್ಲಿ ಸುದ್ದಿಗಾರರೊಂದಿಗೆ ಶನಿವಾರ ಮಾತನಾಡಿದ ಅವರು, ಮಂಡ್ಯದಿಂದ ಜೆಡಿಎಸ್ ವರಿಷ್ಠ ಎಚ್.ಡಿ.ದೇವೇಗೌಡರು ಸ್ಪರ್ಧಿಸಬೇಕು ಎಂಬ ಒತ್ತಡ ಹೆಚ್ಚಾಗಿದೆ. ಕೊನೆ ಗಳಿಗೆಯಲ್ಲಿ ನಿಖಿಲ್ ಕುಮಾರಸ್ವಾಮಿ ಅಭ್ಯರ್ಥಿಯಾಗಬಹುದು. ಇದಕ್ಕೆ ಸಚಿವರಾದ ಡಿ.ಸಿ.ತಮ್ಮಣ್ಣ, ಸಿ.ಎಸ್.ಪುಟ್ಟರಾಜು ಸಹಮತವಿದೆ ಎಂದು ತಿಳಿಸಿದರು.

ಕ್ಷೇತ್ರದಲ್ಲಿ ಜೆಡಿಎಸ್‌ನ 8 ಶಾಸಕರು, ಒಬ್ಬರು ಸಂಸದರು ಇದ್ದು, ಜೆಡಿಎಸ್‌ನ ಭದ್ರಕೋಟೆಯಾಗಿದೆ. ನಟ ಅಂಬರೀಶ್ ಅವರ ಪತ್ನಿ ಸುಮಲತಾ ಸ್ಪರ್ಧಿಸುವುದು, ಬಿಡುವುದು ಅವರಿಗೆ ಬಿಟ್ಟ ವಿಚಾರ ಎಂದರು.

Leave a Reply

Your email address will not be published. Required fields are marked *