More

    ಪೊಲೀಸರಿಂದ ಕಿರುಕುಳಕ್ಕೊಳಗಾಗುವ ಬಿಜೆಪಿ ಕಾರ್ಯಕರ್ತರಿಗೆ ಕಾನೂನು ನೆರವು; ಪ್ರತಿ ಜಿಲ್ಲೆಯಲ್ಲಿ ಕಂಟ್ರೋಲ್​ ರೂಂ ತೆರೆಯುವುದಾಗಿ ವಿಜಯೇಂದ್ರ ಘೋಷಣೆ

    ಬೆಂಗಳೂರು: ಪೊಲೀಸರ ಕಿರುಕುಳದ ಬಗ್ಗೆ ದೂರು ಸ್ವೀಕರಿಸಲು ವಿರೋಧ ಪಕ್ಷವಾದ ಬಿಜೆಪಿಯು ತನ್ನ ಕಾರ್ಯಕರ್ತರು ಮತ್ತು ಮುಖಂಡರಿಗೆ ಜಿಲ್ಲಾ ಮಟ್ಟದಲ್ಲಿ ನಿಯಂತ್ರಣ ಕೊಠಡಿಗಳನ್ನು (ಕಂಟ್ರೋಲ್​ ರೂಂ) ತೆರೆಯಲಿದೆ ಎಂದು ಕರ್ನಾಟಕ ಬಿಜೆಪಿ ಮುಖ್ಯಸ್ಥ ಬಿ ವೈ ವಿಜಯೇಂದ್ರ ಭಾನುವಾರ ಹೇಳಿದ್ದಾರೆ.

    ರಾಜ್ಯದ ಕಾಂಗ್ರೆಸ್ ಸರ್ಕಾರದ “ಜನವಿರೋಧಿ” ಧೋರಣೆ ವಿರುದ್ಧ ಮಾತನಾಡಲು ಕಿರುಕುಳ ನೀಡಿದರೆ ಪಕ್ಷವು ಅವರಿಗೆ (ಕಾರ್ಯಕರ್ತರಿಗೆ) ಕಾನೂನು ನೆರವು ನೀಡುತ್ತದೆ ಎಂದು ”X” ಸಂದೇಶದಲ್ಲಿ ಶಿಕಾರಿಪುರ ಶಾಸಕ ವಿಜಯೇಂದ್ರ ತಿಳಿಸಿದ್ದಾರೆ.

    ಸಾಮಾಜಿಕ ಜಾಲತಾಣಗಳಲ್ಲಿ ಸಕ್ರಿಯವಾಗಿರುವ ನಮ್ಮ ಬಿಜೆಪಿ ಕಾರ್ಯಕರ್ತರನ್ನು ಗುರಿಯಾಗಿಸಿಕೊಂಡು ಪೊಲೀಸರು ಕಿರುಕುಳ ನೀಡುತ್ತಿರುವ ಬಗ್ಗೆ ದೂರುಗಳು ಕೇಳಿ ಬರುತ್ತಿವೆ. ಸೋಷಿಯಲ್ ಮೀಡಿಯಾ ಸೇರಿದಂತೆ ಯಾವುದೇ ವೇದಿಕೆಯಲ್ಲಿ ಕಾಂಗ್ರೆಸ್ ಸರ್ಕಾರದ ಜನವಿರೋಧಿ ಧೋರಣೆ ಮತ್ತು ಸರ್ಕಾರದ ವಿರುದ್ಧ ಧ್ವನಿ ಎತ್ತಲು ಕಾರ್ಯಕರ್ತರು ಹಿಂದೆ ಸರಿಯುವ ಅಗತ್ಯವಿಲ್ಲ ಎಂದೂ ಮಾಜಿ ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ಅವರ ಪುತ್ರರಾಗಿರುವ ವಿಜಯೇಂದ್ರ ಹೇಳಿದ್ದಾರೆ.

    ಸಂವಿಧಾನವು ಜನರಿಗೆ ನೀಡಿರುವ ಅಭಿವ್ಯಕ್ತಿ ಸ್ವಾತಂತ್ರ್ಯ ಹತ್ತಿಕ್ಕಲು ಕಾನೂನು ಪೊಲೀಸರಿಗೆ ಅಧಿಕಾರ ನೀಡಿಲ್ಲ ಎಂದು ಬಿಜೆಪಿ ನಾಯಕ ಹೇಳಿದರು.

    ಈ ನಿಟ್ಟಿನಲ್ಲಿ ರಾಜ್ಯದ ಯಾವುದೇ ಮೂಲೆಯಲ್ಲಿರುವ ”ನಮ್ಮ ಕಾರ್ಯಕರ್ತರ ಬಂಧು”ಗಳಿಗೆ ಯಾವುದೇ ತೊಂದರೆ, ಬೆದರಿಕೆ, ಕಿರುಕುಳ ಎದುರಾದರೆ ತಕ್ಷಣವೇ ಪಕ್ಷ ನೆರವಿಗೆ ಬರುತ್ತದೆ ಎಂದರು.

    “ರಾಜ್ಯ ಮತ್ತು ಜಿಲ್ಲಾ ಕಚೇರಿಗಳಲ್ಲಿ ಶೀಘ್ರದಲ್ಲೇ ಕಂಟ್ರೋಲ್ ರೂಂಗಳನ್ನು ತೆರೆಯಲು ನಿರ್ಧರಿಸಲಾಗಿದೆ, ಇದು ದೂರುಗಳನ್ನು ಸ್ವೀಕರಿಸಲು ಮತ್ತು ನಮ್ಮ ಕಾರ್ಯಕರ್ತರಿಗೆ ಕಾನೂನು ನೆರವು ನೀಡಲು ಹಗಲಿರುಳು ಕಾರ್ಯನಿರ್ವಹಿಸುತ್ತದೆ” ಎಂದು ವಿಜಯೇಂದ್ರ ತಿಳಿಸಿದ್ದಾರೆ.

    ಹುಲ್ಲು, ಎಲೆ ತಿಂದಿದ್ದಕ್ಕಾಗಿ ಒಂದು ವರ್ಷ ಜೈಲು; ಕೊನೆಗೂ ಬಿಡುಗಡೆ ಭಾಗ್ಯ

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts