More

    ಕುಂ.ವೀರಭದ್ರಪ್ಪ ಕಥೆಯಾಧಾರಿತ ‘ಕುಬುಸ’ ಚಿತ್ರ ಜನವರಿಯಲ್ಲಿ ತೆರೆಗೆ …

    ಬೆಂಗಳೂರು: ಕನ್ನಡದ ಜನಪ್ರಿಯ ಸಾಹಿತಿ ಕು. ವೀರಭದ್ರಪ್ಪ ಅವರ ಹಲವು ಕಥೆ ಮತ್ತು ಕಾದಂಬರಿಗಳು ಇದುವರೆಗೂ ಚಿತ್ರಗಳಾಗಿವೆ. ಈಗ ಅವರ ‘ಕುಬುಸ’ ಕಥೆ ಆಧಾರಿಸಿ ರಘು ರಾಮಚರಣ್ ಹೂವಿನ ಹಡಗಲಿ, ‘ಕುಬುಸ’ ಎಂಬ ಸಿನಿಮಾ ನಿರ್ದೇಶಿಸಿದ್ದಾರೆ. ಈ ಚಿತ್ರವು ಜನವರಿ ಕೊನೆಯಲ್ಲಿ ತೆರೆಗೆ ಬರಲು ಸಜ್ಜಾಗಿದೆ.

    ಇದನ್ನೂ ಓದಿ: ‘ತೂತು ಮಡಿಕೆ’ ಆಯ್ತು; ಈಗ ಇನ್ನೊಂದು ಚಿತ್ರಕ್ಕೆ ಕೈಹಾಕಿದ ಅದೇ ತಂಡ

    ತಾಯಿ-ಮಗನ ಸೆಂಟಿಮೆಂಟ್ ಇರುವ ಈ ಸಿನಿಮಾ ಸೆನ್ಸಾರ್ ಮಂಡಳಿಯಿಂದ ‘ಯು’ ಸರ್ಟಿಫಿಕೇಟ್ ಪಡೆದುಕೊಂಡಿದೆ. ಚಿತ್ರದ ಪ್ರಚಾರ ಕಾರ್ಯ ಆರಂಭಿಸಿರುವ ಚಿತ್ರತಂಡ ಸದ್ಯದಲ್ಲೇ ಟೀಸರ್ ಬಿಡುಗಡೆ ಮಾಡಲಿದೆ.

    ಕಲ್ಲು ಒಡೆದು ಹಳ್ಳಿಯಲ್ಲಿ ಜೀವನ ಸಾಗಿಸುವ ತಾಯಿ ತನ್ನ ಮಗನನ್ನು ದೂರದ ಊರಿನಲ್ಲಿ ಓದಿಸುತ್ತಿರುತ್ತಾಳೆ. ಯಾವತ್ತೂ ಬೇರೆ ಊರಿಗೆ ಪಯಣ ಬೆಳೆಸದ, ಬಸ್ಸು ಕೂಡ ಹತ್ತಿರದ ಆಕೆಯನ್ನು ಮಗ ಕೆಲಸ ಸಿಕ್ಕ ಮೇಲೆ ನಗರಕ್ಕೆ ಕರೆದುಕೊಂಡು ಬರುತ್ತಾನೆ. ಮೊದಲಿನಿಂದಲೂ ಕುಬುಸ ಧರಿಸಿ ಅಭ್ಯಾಸವಿರದ ಆಕೆ ಈ ಕಾರಣದಿಂದ ನಗರಕ್ಕೆ ಬಂದಾಗ ಹೇಗೆಲ್ಲ ಜನರಿಂದ ಮುಜುಗರಕ್ಕೆ ಒಳಗಾಗುತ್ತಾಳೆ ಎಂಬುದು ಚಿತ್ರದ ಕಥೆ.

    ಈ ಚಿತ್ರದಲ್ಲಿ ನಟರಾಜ್, ರಂಗಭೂಮಿ ಕಲಾವಿದೆ ಹನುಮಕ್ಕ ಮುಖ್ಯ ಭೂಮಿಕೆಯಲ್ಲಿ ನಟಿಸಿದ್ದಾರೆ. ಜತೆಗೆ ಆರ್ಯ ಮೈಸೂರು, ಅನಿಕ ರಮ್ಯ, ಮಹಾಲಕ್ಷ್ಮೀ ಕೂಡ ಚಿತ್ರದ ಪ್ರಮುಖ ಪಾತ್ರಗಳಲ್ಲಿ ಕಾಣಿಸಿಕೊಂಡಿದ್ದಾರೆ. ಚಿತ್ರದ ಒಂದು ವಿಶೇಷತೆಯೆಂದರೆ, ಪದ್ಮಶ್ರೀ ಪುರಸ್ಕೃತ ಜೋಗತಿ ಮಂಜಮ್ಮ ನಟಿಸಿರುವುದು.

    ಇದನ್ನೂ ಓದಿ: ಯಾವುದೇ ಚಿತ್ರರಂಗವನ್ನೂ ಕೀಳಾಗಿ ನೋಡಬೇಡಿ … ಇದು ಯಶ್​ ಮನವಿ

    ‘ಕುಬುಸ’ ಚಿತ್ರದಲ್ಲಿ ಮೂಲ ಕಥೆಯಲ್ಲಿರುವಂತೆ ಬಳ್ಳಾರಿ ಭಾಷೆಯ ಸೊಗಡನ್ನು ಬಳಸಿಕೊಳ್ಳಬಹುದಾಗಿದೆ. ಚಿತ್ರದ ಸನ್ನಿವೇಶಗಳಿಗೆ ತಕ್ಕಂತೆ ನಾಲ್ಕು ಬಿಟ್ಟು ಹಾಡುಗಳಿದ್ದು, ಪ್ರೇಮ್, ವಾಸುಕಿ ವೈಭವ್, ಶೃತಿ ವಿ.ಎಸ್, ಶಿಲ್ಪ ಮುಡ್ಬಿ, ಪ್ರದೀಪ್ ಚಂದ್ರ ಹಾಡುಗಳಿಗೆ ಧ್ವನಿಯಾಗಿದ್ದಾರೆ. ಪ್ರದೀಪ್ ಚಂದ್ರ ಸಂಗೀತವಿರುವ ಈ ಚಿತ್ರವನ್ನು ವಿ. ಶೋಭಾ ಸಿನಿಮಾಸ್ ಬ್ಯಾನರ್​ನಡಿ ವಿ. ಶೋಭಾ ನಿರ್ಮಾಣ ಮಾಡಿದ್ದಾರೆ.

    ‘ವೇದ’ ಚಿತ್ರ ವಿಮರ್ಶೆ: ದೌರ್ಜನ್ಯದ ವಿರುದ್ಧ ಅಪ್ಪ-ಮಗಳ ಹೋರಾಟ

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts