ಕುಡಚಿ: ಇಲ್ಲಿನ ಪುರಸಭೆಯ ಅಧ್ಯಕ್ಷರಾಗಿ ಬಿಜೆಪಿಯ ಮಾಧುರಿ ರಾಜು ನಿಡಗುಂದಿ ಹಾಗೂ ಉಪಾಧ್ಯಕ್ಷರಾಗಿ ಕಾಂಗ್ರೆಸ್‌ನ ಹಮಿದೋಧಿನ್ನ ಸೈಧೋಧಿನ್ನ ರೋಹಿಲೆ ಅವರು ಅವಿರೋಧವಾಗಿ ಆಯ್ಕೆಯಾಗಿದ್ದಾರೆ.
ಗುರುವಾರ ಕುಡಚಿ ಪುರಸಭೆ ಸಭಾಂಗಣದಲ್ಲಿ ಆಯೋಜಿಸಿದ್ದ ಸದಸ್ಯರ ಸಾಮಾನ್ಯ ಸಭೆಯಲ್ಲಿ ಸರ್ವಾನುಮತದಿಂದ ಅಧ್ಯಕ್ಷ ಹಾಗೂ ಉಪಾಧ್ಯಕ್ಷರನ್ನು ಅವಿರೋಧವಾಗಿ ಆಯ್ಕೆ ಮಾಡಲಾಯಿತು.
ಕುಡಚಿ ಪುರಸಭೆ 23 ಸದಸ್ಯರನ್ನು ಹೊಂದಿದ್ದು, ಅದರಲ್ಲಿ ಕಾಂಗ್ರೆಸ್-14 , ಬಿಜೆಪಿ -8 ಹಾಗೂ ಪಕ್ಷೇತರ ಒಬ್ಬರು ಸೇರಿ ಒಟ್ಟು 23 ಸದಸ್ಯರ ಬಲ ಹೊಂದಿದೆ. ಈ ಬಾರಿ ಅಧ್ಯಕ್ಷ ಸ್ಥಾನ ಎಸ್‌ಸಿ ಸಾಮನ್ಯ ವರ್ಗಕ್ಕೆ ಮೀಸಾಲಾಗಿರುವುದ್ದ್ದರಿಂದ ಅಧ್ಯಕ್ಷ ಸ್ಥಾನ ಬಿಜೆಪಿಯ ಮಾಧುರಿ ನಿಡಗುಂದಿ ಅವರಿಗೆ ಹಾಗೂ ಸಾಮಾನ್ಯ ವರ್ಗಕ್ಕೆ ಮೀಸಲು ಉಪಾಧ್ಯಕ್ಷ ಸ್ಥಾನ ಕಾಂಗ್ರೆಸ್ ಹಮಿದೋಧಿನ್ ರೋಹಿಲೆ ಅವರಿಗೆ ಒಲಿದಿದೆ. ರಾಜ್ಯ ತಾಂಡಾ ಅಭಿವೃದ್ಧಿ ನಿಗಮದ ಅಧ್ಯಕ್ಷ ಹಾಗೂ ಶಾಸಕ ಪಿ ರಾಜೀವ ನೂತನ ಅಧ್ಯಕ್ಷ ಮತ್ತು ಉಪಾಧ್ಯಕ್ಷರನ್ನು ಸನ್ಮಾನಿಸಿ ಮಾತನಾಡಿ, ಪಕ್ಷ ಬೇಧ ಮರೆತು ಎಲ್ಲರು ಒಗ್ಗಟ್ಟಾಗಿ ಪಟ್ಟಣದ ಅಭಿವೃದ್ಧಿ ಕಾಮಗಾರಿಗಳನ್ನು ಕಾರ್ಯಗಳನ್ನು ಕೈಗೊಳ್ಳಿ. ಅಲ್ಲದೆ ಮುಂಬರುವ ದಿನಗಳಲ್ಲಿ ಕುಡಚಿ ಸಮಗ್ರ ಅಭಿವೃದ್ಧಿಗಾಗಿ ಸರ್ಕಾರದಿಂದ ವಿಶೇಷ ಅನುದಾವನ್ನು ಕುಡಚಿ ಪುರಸಭೆಗೆ ಮಂಜೂರು ಮಾಡಿಸುವುದಾಗಿ ಭರವಸೆ ನೀಡಿದರು.
ಚುನಾವಣಾ ಅಧಿಕಾರಿ ಚಂದ್ರಕಾಂತ ಭಜಂತ್ರಿ, ಮುಖ್ಯಾಧಿಕಾರಿ ಎಸ್.ಎ. ಮಹಾಜನ್., ಎಸ್.ಆರ್. ಚೌಗಲಾ, ಎಸ್.ಬಿ.ಕದಂ ಇದ್ದರು.