More

    ಲಿಂಗಾಯತ ಅಭಿವೃದ್ಧಿ ನಿಗಮ ಸ್ಥಾಪಿಸಿ

    ಕೂಡಲಸಂಗಮ: ಆರ್ಥಿಕ ಹಾಗೂ ಶೈಕ್ಷಣಿಕವಾಗಿ ಹಿಂದುಳಿದ ಲಿಂಗಾಯತ ಸಮುದಾಯದ ಸಮಗ್ರ ಅಭಿವೃದ್ಧಿಗಾಗಿ ರಾಜ್ಯದಲ್ಲಿ ಪ್ರತ್ಯೇಕವಾಗಿ ಲಿಂಗಾಯತ ಅಭಿವೃದ್ಧಿ ನಿಗಮ ಸ್ಥಾಪಿಸುವಂತೆ ಕೂಡಲಸಂಗಮ ಲಿಂಗಾಯತ ಪಂಚಮಸಾಲಿ ಪೀಠದ ಜಗದ್ಗುರು ಬಸವಜಯ ಮೃತ್ಯುಂಜಯ ಸ್ವಾಮೀಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರಿಗೆ ಭಾನುವಾರ ಮನವಿ ಸಲ್ಲಿಸಿದರು.

    ಬೆಂಗಳೂರಿನಲ್ಲಿ ಯಡಿಯೂರಪ್ಪ ಅವರ ನಿವಾಸಕ್ಕೆ ಭೇಟಿ ನೀಡಿದ ವೇಳೆ ಮನವಿ ಸಲ್ಲಿಸಿ ಮಾತನಾಡಿ, ರಾಜ್ಯದ ಬಹುಸಂಖ್ಯಾತ ಲಿಂಗಾಯತ ಸಮಾಜ ಅತಿ ಹೆಚ್ಚು ಜನಸಂಖ್ಯೆ ಹೊಂದಿದ್ದು ಆರ್ಥಿಕವಾಗಿ ಹಿಂದುಳಿದ ಬಡ ಸಮುದಾಯವಾಗಿದೆ. 12ನೇ ಶತಮಾನದ ಬಸವಾದಿ ಶರಣರಿಂದ ಸ್ಥಾಪಿತವಾದ ಜಾತಿ ರಹಿತ, ಧರ್ಮ ಸಹಿತ, ಕಾಯಕ ನಿರತ, ದಾಸೋಹ ಸಂಕಲ್ಪಿತ, ರಾಷ್ಟ್ರ ಭಕ್ತಿ ಪ್ರೇರಿತ ಸಮಾಜವಾಗಿದೆ. ಶೇ.70 ಜನತೆ ಕೃಷಿಯನ್ನು ಅವಲಂಬಿಸಿದ ಹಾಗೂ 101 ವಿವಿಧ ವೃತ್ತಿಯ ಪಂಗಡಗಳನ್ನು ಒಳಗೊಂಡ ಜನರ ವಿಶಾಲ ಸಮಾಜವಾಗಿದೆ. ಆದ್ದರಿಂದ ಆರ್ಥಿಕ, ಶೈಕ್ಷಣಿಕವಾಗಿ ಹಿಂದುಳಿದಿರುವ ಲಿಂಗಾಯತ ಸಮಾಜಕ್ಕೆ ಪ್ರತ್ಯೇಕ ಅಭಿವೃದ್ಧಿ ನಿಗಮ ಸ್ಥಾಪಿಸಬೇಕು ಎಂದು ಒತ್ತಾಯಿಸಿದರು.





    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts