More

    ಕಲಾವಿದರಿಗಾಗಿ ಪ್ರತ್ಯೇಕ ನಿಗಮ ಸ್ಥಾಪಿಸಿ

    ಕೂಡಲಸಂಗಮ: ಉತ್ತರ ಕರ್ನಾಟಕ ಕಲಾವಿದರ ಸಮಸ್ಯೆ ನಿವಾರಣೆಗಾಗಿ ಸರ್ಕಾರ ಕಲಾವಿದರ ಪ್ರತ್ಯೇಕ ನಿಗಮವನ್ನು ಮಾಡಬೇಕು ಎಂದು ಕೂಡಲಸಂಗಮ ಲಿಂಗಾಯತ ಪಂಚಮಸಾಲಿ ಪೀಠದ ಜಗದ್ಗುರು ಬಸವಜಯ ಮೃತ್ಯುಂಜಯ ಸ್ವಾಮೀಜಿ ಆಗ್ರಹಿಸಿದರು.

    ಅಖಿಲ ಕರ್ನಾಟಕ ಹವ್ಯಾಸಿ ರಂಗಭೂಮಿ ಮತ್ತು ಸರ್ವ ಜನಪದ ಕಲಾವಿದರ ಸಂಘ, ಅಖಿಲ ಕರ್ನಾಟಕ ಕಲಾವಿದರ ಹಿತರಕ್ಷಣಾ ಒಕ್ಕೂಟ, ಬಾಗಲಕೋಟೆ ಕನ್ನಡ ಮತ್ತು ಸಂಸ್ಕೃತಿ ಇಲಾಖೆ, ಕರ್ನಾಟಕ ರಕ್ಷಣಾ ವೇದಿಕೆ ಸಹಯೋಗದಲ್ಲಿ ಕೂಡಲಸಂಗಮ ಬಸವ ಧರ್ಮ ಪೀಠದ ಆವರಣದಲ್ಲಿ ಶನಿವಾರ ಹಮ್ಮಿಕೊಂಡಿದ್ದ ಕರ್ನಾಟಕ ಜಾನಪದ ಸಾಂಸ್ಕೃತಿಕ ಕಲಾ ವೈಭವ ಹಾಗೂ ಬಸವ ಜ್ಯೋತಿ ಪ್ರಶಸ್ತಿ ಪ್ರದಾನ ಸಮಾರಂಭ ಉದ್ಘಾಟಿಸಿ ಮಾತನಾಡಿದರು.

    ಕರೊನಾದಿಂದ ಕಲಾವಿದರ ಬದುಕು ಬಹಳ ಸಂಕಷ್ಟದಲ್ಲಿದ್ದು, ಸರ್ಕಾರ ಸಹಾಯ ಧನ ನೀಡುವ ಕಾರ್ಯ ಮಾಡಬೇಕು. ಉತ್ತರ ಕರ್ನಾಟಕದ ಕಲಾವಿದರನ್ನು ಗುರುತಿಸುವಲ್ಲಿ ಸರ್ಕಾರ ಸಂಪೂರ್ಣ ವಿಲವಾಗಿದೆ. ಸದ್ಯ ಸರ್ಕಾರ ಕಲಾವಿದರಿಗೆ ಕೊಡುತ್ತಿರುವ ಸೌಲಭ್ಯಗಳು ಸಮರ್ಪಕವಾಗಿ ದೊರೆಯುತ್ತಿಲ್ಲ ಎಂದರು.

    ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಮಾಜಿ ನಿರ್ದೇಶಕ ಮಹಾಂತೇಶ ಹಟ್ಟಿ ಮಾತನಾಡಿ, ಕಳೆದ 6 ತಿಂಗಳಿಂದ ಸರ್ಕಾರ ಕೋವಿಡ್ ನೆಪದಲ್ಲಿ ಕಲಾವಿದರಿಗೆ ಮಾಸಾಶನವನ್ನು ಕೊಟ್ಟಿರುವುದಿಲ್ಲ. ಕೂಡಲೇ ಮಾಸಾಶನ ನೀಡಬೇಕು ಎಂದು ಒತ್ತಾಯಿಸಿದರು.

    ಅಖಿಲ ಕರ್ನಾಟಕ ಹವ್ಯಾಸಿ ರಂಗಭೂಮಿ ಮತು ಸರ್ವ ಜಾನಪದ ಕಲಾವಿದರ ಸಂಘದ ಗೌರವಾಧ್ಯಕ್ಷ ಸಿದ್ದಣ್ಣ ಬಾಡಗಿ ಮಾತನಾಡಿ, ಜನಪದ ಕಲೆ, ಕಲಾವಿದರನ್ನು ಉಳಿಸಿ ಬೆಳೆಸುವ ಕಾರ್ಯವನ್ನು ಸರ್ಕಾರ ಮಾಡಬೇಕು ಎಂದರು.

    ಹುನಗುಂದ ತಾಲೂಕು ಶರಣ ಸಾಹಿತ್ಯ ಪರಿಷತ್ ಅಧ್ಯಕ್ಷ ನಾಗರಾಜ ನಾಡಗೌಡ, ಕರ್ನಾಟಕ ವಚನ ಸಾಹಿತ್ಯ ಪರಿಷತ್ ಜಿಲ್ಲಾಧ್ಯಕ್ಷ ಮಹಾಂತೇಶ ಗಜೇಂದ್ರಗಡ, ಹುನಗುಂದ ಎಪಿಎಂಸಿ ಅಧ್ಯಕ್ಷ ಹಿರಿಯಣ್ಣ ಕರಡಿ, ಸಿದ್ದಣ್ಣ ಬಾಡಗಿ, ಪರಪ್ಪ ಬರಗಲ್ಲ, ರಾಯಪ್ಪ ದಡ್ಡಿಮನಿ ಮುಂತಾದವರು ಇದ್ದರು. ಸಮಾರಂಭದಲ್ಲಿ 65 ಕಲಾವಿದರಿಗೆ ಬಸವ ಜ್ಯೋತಿ ಪ್ರಶಸ್ತಿ ಪ್ರದಾನ ಮಾಡಿದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts