ಪಿಡಿಒ ವರ್ಗಾವಣೆಗೆ ಸದಸ್ಯರ ಪಟ್ಟು; ಅಪ್ಪೇನಹಳ್ಳಿ ಗ್ರಾಪಂ ಕಚೇರಿಗೆ ಬೀಗ ಹಾಕಿ ಪ್ರತಿಭಟನೆ

05062021 Kudligi GP Members protest
Published on

ಮೂರು ತಿಂಗಳಿಂದ ಕರ್ತವ್ಯಕ್ಕೆ ಗೈರು, ಆರೋಪ

ಕೂಡ್ಲಿಗಿ: ತಾಲೂಕಿನ ಅಪ್ಪೇನಹಳ್ಳಿ ಗ್ರಾಪಂ ವ್ಯಾಪ್ತಿಯಲ್ಲಿ ಪಿಡಿಒ ನಿರ್ಲಕ್ಷ್ಯದಿಂದ ಅಭಿವೃದ್ಧಿ ಕಾರ್ಯಗಳು ಸ್ಥಗಿತಗೊಂಡಿದ್ದು, ಅವರನ್ನು ವರ್ಗಾವಣೆ ಮಾಡಬೇಕೆಂದು ಆಗ್ರಹಿಸಿ ಅಧ್ಯಕ್ಷೆ ಸುಮಲತಾ ಹಾಗೂ ಸದಸ್ಯರು ಶನಿವಾರ ಪಂಚಾಯಿತಿ ಕಚೇರಿಗೆ ಬೀಗ ಹಾಕಿ ಪ್ರತಿಭಟನೆ ನಡೆಸಿದರು.

ಮೂರು ತಿಂಗಳಿಂದ ಪಿಡಿಒ ದಯಾನಂದ ವಾಗ್ಮೋರೆ ಕಚೇರಿಗೆ ಬಂದಿಲ್ಲ. ಯಾವುದೇ ಕೆಲಸಗಳು ಸರಿಯಾಗಿ ನಡೆಯುತ್ತಿಲ್ಲ. ಹಣಕಾಸಿನ ವಿಚಾರದ ಬಗ್ಗೆ ಸದಸ್ಯರು ಪ್ರಶ್ನೆ ಮಾಡಿದರೆ, ನಿಂದಿಸುತ್ತಾರೆ ಎಂದು ಆರೋಪಿಸಿದ ಸದಸ್ಯರು, ಕೋವಿಡ್ ವಿಷಮ ಪರಿಸ್ಥಿಯಲ್ಲಿಯೂ ಪಂಚಾಯಿತಿಗೆ ಬರುತ್ತಿಲ್ಲ. ಗ್ರಾಪಂ ವ್ಯಾಪ್ತಿಯ ಹಳ್ಳಿಗಳ ಜನರು ಸೋಂಕಿನಿಂದ ಮೃತಪಡುತ್ತಿದ್ದಾರೆ. ಗ್ರಾಮದಲ್ಲಿ ಅನೈರ್ಮಲ್ಯವಿದ್ದು ಸ್ವಚ್ಛತೆ, ಔಷದ ಸಿಂಪರಣೆ ಮಾಡಿಸಿ ಎಂದರೆ, ಬೇಜವಾಬ್ದಾರಿ ಹೇಳಿಕೆ ನೀಡುತ್ತಿದ್ದಾರೆ. ಕಾರ್ಮಿಕರಿಗೆ ನರೇಗಾ ಯೋಜನೆಯಡಿ ಸಮರ್ಪಕ ಉದ್ಯೋಗ ನೀಡಿಲ್ಲ. ಈ ಬಗ್ಗೆ ಎರಡು ತಿಂಗಳಿನಿಂದ ತಾಪಂ ಇಒ, ಜಿಪಂ ಸಿಇಒ ಗಮನಕ್ಕೆ ತಂದರೂ ಯಾವುದೇ ಕ್ರಮ ಜರುಗಿಸಿಲ್ಲ ಎಂದು ದೂರಿದರು. ಸದಸ್ಯರಾದ ದಳಪತಿ ಬಸವಣ್ಣ, ಮಲ್ಲಿಕಾರ್ಜುನ, ನಾಗಮ್ಮ, ಅನಿತಾ, ಲಕ್ಷ್ಮೀ ಇತರರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net