ಕೂಡ್ಲಿಗಿ: ಪಟ್ಟಣದ ಕೊಟ್ಟೂರು ರಸ್ತೆಯಲ್ಲಿನ ಕುಪ್ಪಿನಕೆರೆ ಕ್ರಾಸ್ ಬಳಿ ಶಾಲಾ ಬಸ್ ಮತ್ತು ಬೈಕ್ ಮಧ್ಯೆ ಡಿಕ್ಕಿಯಾಗಿ ಸವಾರ, ಅಮ್ಮನಕೆರೆ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ಶಿಕ್ಷಕ ಕೆ.ಮುನಿಯಪ್ಪ (56) ಸ್ಥಳದಲ್ಲೇ ಮೃತಪಟ್ಟಿದ್ದಾರೆ.
ಸೋಮವಾರ ಪಟ್ಟಣದ ಸರ್ಕಾರಿ ಪಪೂ ಕಾಲೇಜಿನ ಪ್ರೌಢ ಶಾಲಾ ವಿಭಾಗದಲ್ಲಿ ನಡೆಯುತ್ತಿರುವ ಎಸ್ಸೆಸ್ಸೆಲ್ಸಿ ಪೂರಕ ಪರೀಕ್ಷಾ ಕೊಠಡಿ ಮೇಲ್ವಿಚಾರಕರಾಗಿ ನೇಮಕಗೊಂಡಿ ಮುನಿಯಪ್ಪ ಕೊಟ್ಟೂರಿನಿಂದ ಬೈಕ್‌ನಲ್ಲಿ ಬರುತ್ತಿದ್ದಾಗ ಬಡೇಲಡಕು ಗ್ರಾಮದ ಖಾಸಗಿ ಶಾಲಾ ಬಸ್ ನಡುವೆ ಅಪಘಾತವಾಗಿದೆ.
ಕೂಡ್ಲಿಗಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.