ಕೂಡ್ಲಿಗಿ: ಕರಾಳ ಕೃಷಿ ಕಾಯ್ದೆಗಳನ್ನು ವಾಪಸು ಪಡೆಯಬೇಕು ಎಂದು ಒತ್ತಾಯಿಸಿ ಅಖಿಲ ಭಾರತ ಕಿಸಾನ್ ಸಭಾ ಪದಾಧಿಕಾರಿಗಳು ಮಂಗಳವಾರ ತಹಸೀಲ್ದಾರ್ ಮೂಲಕ ಮುಖ್ಯಮಂತ್ರಿಗೆ ಮನವಿ ಸಲ್ಲಿಸಿದರು.
ಬೆಳೆಗಳಿಗೆ ಬೆಲೆ ನಿಗದಿಪಡಿಸಬೇಕು, ಖರೀದಿ ಕೇಂದ್ರಗಳನ್ನು ಪ್ರಾರಂಭಿಸಬೇಕು. ತಾಲೂಕಾದ್ಯಂತ ಜಮೀನುಗಳಿಗೆ ನೀರಾವರಿ ಯೋಜನೆ ಜಾರಿಗೊಳಿಸಬೇಕು. ಸರ್ಕಾರಗಳು ರೈತಪರ ಕಾನೂನುಗಳನ್ನು ಜಾರಿಗೊಳಿಸುತ್ತಿಲ್ಲ. ರೈತರು ಮತ್ತು ಕೂಲಿ ಕಾರ್ಮಿಕರನ್ನು ಸರ್ಕಾರಗಳು ದುಸ್ಥಿತಿಗೆ ತೆಗೆದುಕೊಂಡು ಹೋಗುತ್ತಿವೆ. ರೈತರ ಆತ್ಮಹತ್ಯೆ ಹೆಚ್ಚಾಗುತ್ತಿದ್ದು, ಅವರ ಮಕ್ಕಳು ಉದ್ಯೋಗವಿಲ್ಲದೆ ವಲಸೆ ಹೋಗುತ್ತಿದ್ದಾರೆ. ಬೆಲೆಯೇರಿಕೆಯ ಈ ಪರಿಸ್ಥಿತಿಯಲ್ಲಿ ಕೃಷಿಯನ್ನು ಮಾಡಲಾಗುತ್ತಿಲ್ಲ. ಕೂಡಲೇ ಕರಾಳ ಕೃಷಿ ಕಾಯ್ದೆಗಳನ್ನು ವಾಪಸು ಪಡೆಯಬೇಕು ಎಂದು ಒತ್ತಾಯಿಸಿದರು.
ಸಂಘಟನೆ ತಾಲೂಕು ಕಾರ್ಯದರ್ಶಿ ಜಿ.ನಾಗರಾಜ್, ಉಪಾಧ್ಯಕ್ಷ ಸಾಡಿ ದೊಡ್ಡಪ್ಪ, ಸಂಚಾಲಕ ಕರಿಯಪ್ಪ, ಓಬಳೇಶ, ಗ್ರಾಪಂ ಸದಸ್ಯ ಕರಿಯಪ್ಪ, ಮುಖಂಡ ರವೀಶ್ ಇತರರಿದ್ದರು.