ಕೂಡ್ಲಿಗಿ: ರೈತರ ಆತ್ಮಹತ್ಯೆ ತಡೆಯಬೇಕು ಎಂದು ಆಗ್ರಹಿಸಿ ಬಿಜೆಪಿ ರೈತ ಮೋರ್ಚಾದಿಂದ ತಹಸೀಲ್ದಾರ್ ಟಿ.ಜಗದೀಶ್‌ಗೆ ಮನವಿ ಸಲ್ಲಿಸಲಾಯಿತು.
ರಾಜ್ಯದಲ್ಲಿ ಮಳೆಯ ಅಭಾವದಿಂದ ಬರಗಾಲ ಉಂಟಾಗಿದೆ. ಜಲಾಶಯಗಳಲ್ಲಿ ನೀರಿನ ಕೊರತೆ ಇದೆ. ರಾಜ್ಯದಲ್ಲಿ ರೈತರು ಶೇ.80 ಬಿತ್ತನೆ ಮಾಡಿದ್ದು, ಮಳೆ ಇಲ್ಲದೆ ಕೊಳವೆಬಾವಿಗಳ ಮೂಲಕ ನೀರು ಹಾಯಿಸಿ ಬೆಳೆ ಉಳಿಸಿಕೊಳ್ಳಬೇಕಿದೆ.

ಆದ್ದರಿಂದ ಪಂಪ್‌ಸೆಟ್‌ಗಳಿಗೆ ಪ್ರತಿನಿತ್ಯ 7 ತಾಸು ವಿದ್ಯುತ್ ಪೂರೈಸಬೇಕು.ಜತೆಗೆ ರೈತ ಪರ ಯೋಜನೆಗಳಾದ ಕಿಸಾನ್ ಸಮ್ಮಾನ್ ನಿಧಿ, ರೈತ ವಿದ್ಯಾನಿಧಿ, ಭೂಸಿರಿ ಯೋಜನೆ, ಶ್ರಮ ಶಕ್ತಿ ಯೋಜನೆ, ರೈತ ಸಂಪದ ಯೋಜನೆಗಳನ್ನು ಮುಂದುವರಿಸಬೇಕು ಎಂದು ಆಗ್ರಹಿಸಿದರು.
ಕಾಂಗ್ರೆಸ್ ಅಧಿಕಾರಕ್ಕೆ ಬಂದ ಬಳಿಕ ರಾಜ್ಯದಲ್ಲಿ ಸುಮಾರು 42 ರೈತರು ಆತ್ಮಹತ್ಯೆ ಮಾಡಿಕೊಂಡಿರುವುದು ಕಳವಳಕಾರಿ ಸಂಗತಿ. ಆತ್ಮಹತ್ಯೆ ಪ್ರಕರಣಗಳ ತಡೆಗೆ ಸರ್ಕಾರ ಯೋಜನೆಗಳನ್ನು ರೂಪಿಸಬೇಕು ಎಂದು ಒತ್ತಾಯಿಸಿದರು.
ರೈತ ಮೋರ್ಚಾ ಅಧ್ಯಕ್ಷ ನಂದಿ ರಾಜೇಶ್, ಬಿಜೆಪಿ ಮಂಡಲ ಪ್ರಧಾನ ಕಾರ್ಯದರ್ಶಿ ಪಿ.ಮಂಜುನಾಥ, ನಗರ ಪ್ರಧಾನ ಕಾರ್ಯದರ್ಶಿ ಎ.ಎಂ.ವಾಗೀಶ ಮೂರ್ತಿ, ಎಸ್ಸಿ ಮೋರ್ಚಾ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಎಸ್.ದುರುಗೇಶ್, ಮುಖಂಡರಾದ ಬಾಣದ ಮೂರ್ತಿ, ಮಾರೇಶ್ ಸೂಲದಹಳ್ಳಿ, ದಿನೇಶ್ ನಾಯ್ಕ, ಪಪಂ ಸದಸ್ಯ ಸಚಿನ್ ಕುಮಾರ್, ಹಡಗಲಿ ಬಸವರಾಜ, ಓಬಳೇಶ್ ಇತರರಿದ್ದರು.