More

  ಕ್ಷೇತ್ರದ ಅಭಿವೃದ್ಧಿಗೆ ಪೂರಕ ಕಾರ್ಯಕ್ರಮ

  ಕೂಡ್ಲಿಗಿ: ರೈತರು ಸರ್ಕಾರದ ಸೌಲಭ್ಯಗಳನ್ನು ಸದ್ಬಳಕೆ ಮಾಡಿಕೊಂಡು ಆರ್ಥಿಕವಾಗಿ ಅಭಿವೃದ್ಧಿ ಹೊಂದಬೇಕು ಎಂದು ಶಾಸಕ ಡಾ.ಎನ್.ಟಿ.ಶ್ರೀನಿವಾಸ್ ತಿಳಿಸಿದರು.

  ಪಟ್ಟಣದ ಪ್ರವಾಸಿ ಮಂದಿರದಲ್ಲಿ ಶನಿವಾರ ಕರ್ನಾಟಕ ಅಲ್ಪಸಂಖ್ಯಾತರ ಅಭಿವೃದ್ಧಿ ನಿಗಮದಿಂದ ಗಂಗಾ ಕಲ್ಯಾಣ ಫಲಾನುಭವಿಗಳಿಗೆ ಪಂಪ್, ಮೋಟಾರು ಹಾಗೂ ಪರಿಕರ ವಿತರಣೆ ಕಾರ್ಯಕ್ರಮದಲ್ಲಿ ಮಾತನಾಡಿದರು.

  ನೀರಾವರಿ ಯೋಜನೆಗಳು ಇಲ್ಲದ ಈ ಕ್ಷೇತ್ರದಲ್ಲಿ ಗಂಗಾ ಕಲ್ಯಾಣ ಯೋಜನೆಯಡಿ ಅರ್ಹ ಫಲಾನುಭವಿಗಳನ್ನು ಅಯ್ಕೆ ಮಾಡಿ ಸಾಮಗ್ರಿ ವಿತರಿಸಲಾಗಿದೆ ಎಂದ ಅವರು, ಹಿಂದುಳಿದ ತಾಲೂಕಿನ ಬವಣೆ ಅರಿತು ಈಗಾಗಲೇ ಕುಡಿವ ನೀರು ಹಾಗೂ ಮೂಲ ಸೌಕರ್ಯಗಳಿಗೆ ಒತ್ತು ನೀಡಿ ಸರ್ಕಾರದ ಗಮನ ಸೆಳೆದು ಅನುದಾನ ಬಿಡುಗಡೆ ಮಾಡಿಸಿರುವೆ. ಮುಂಬರುವ ದಿನಗಳಲ್ಲಿ ಕ್ಷೇತ್ರದ ಸರ್ವಾಂಗೀಣ ಅಭಿವೃದ್ಧಿಗೆ ಪೂರಕವಾದ ಕಾರ್ಯಗಳನ್ನು ಕೈಗೆತ್ತಿಕೊಳ್ಳಲಾಗುವುದು ಎಂದು ತಿಳಿಸಿದರು.

  ಅಲ್ಪಸಂಖ್ಯಾತ ಅಭಿವೃದ್ಧಿ ನಿಗಮದ ಜಿಲ್ಲಾ ವ್ಯವಸ್ಥಾಪಕ ಮೆಹಬೂಬ್ ಬಾಷಾ, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಎಂ.ಗುರುಸಿದ್ದನ ಗೌಡ, ಕಾಂಗ್ರೆಸ್ ಮುಖಂಡ ಎನ್.ಟಿ.ತಮ್ಮಣ್ಣ, ಪಪಂ ಸದಸ್ಯ ಕಾವಲಿ ಶಿವಪ್ಪನಾಯಕ, ಹಿರೇಕುಂಬಳಗುಂಟೆ ಉಮೇಶ್, ಅಜ್ಜನಗೌಡ, ಮರುಳಸಿದ್ದಪ್ಪ, ಡಾಣಿ ರಾಘವೇಂದ್ರ, ಜಿಲಾನ್, ಬಸವರಾಜ ಗೌಡ ಇತರರಿದ್ದರು.

  ಸಿನಿಮಾ

  ಲೈಫ್‌ಸ್ಟೈಲ್

  ಟೆಕ್ನಾಲಜಿ

  Latest Posts